ಚಿತ್ರದುರ್ಗ:ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ರಾಜ್ಯ ಸರ್ಕಾರಿ ನಿವೃತ್ತ ನೌಕರರ ಸಂಘ, ರೋಟರಿ ಕ್ಲಬ್ ಚಿನ್ಮೂಲಾದ್ರಿ, ಹಿರಿಯ ನಾಗರಿಕರ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಸ್ವಯಂ ಸೇವಾ ಸಂಸ್ಥೆಗಳು ಇವರುಗಳ ಸಂಯುಕ್ತಾಶ್ರಯದಲ್ಲಿ ವಿಶ್ವ ಹಿರಿಯ ನಾಗರಿಕರ ದಿನಾಚರಣೆ-2025ರ ಅಂಗವಾಗಿ ಹಿರಿಯ ನಾಗರಿಕರ ಕ್ರೀಡಾ ಹಾಗೂ ಸಾಂಸ್ಕøತಿಕ ಕಾರ್ಯಕ್ರಮ ಹಾಗೂ ಹಿರಿಯ ನಾಗರಿಕರಿಗೆ ಉಚಿತ ಆರೋಗ್ಯ ತಪಾಸಣೆ ಹಾಗೂ ಔಷಧಿ ವಿತರಣಾ ಕಾರ್ಯಕ್ರವನ್ನು ಇದೇ ಸೆ.20ರಂದು ಬೆಳಿಗ್ಗೆ 10.30ಕ್ಕೆ ನಗರದ ಒನಕೆ ಓಬವ್ವ ಜಿಲ್ಲಾ ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಂ.ವಿಜಯ್ ಉದ್ಘಾಟನೆ ನೆರವೇರಿಸುವರು. ಉಪವಿಭಾಗಾಧಿಕಾರಿ ಹಾಗೂ ಪಾಲಕರ ಪೋಷಣೆ ಸಂರಕ್ಷಣೆ ಹಿರಿಯ ನಾಗರಿಕರ ರಕ್ಷಣಾ ಮಂಡಳಿ ಅಧ್ಯಕ್ಷ ಮಹೆಬೂಬ್ ಜೀಲಾನಿ ಖುರೇಷಿ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಕೆ.ಹೆಚ್.ವಿಜಯ್ ಕುಮಾರ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಸುಜೇತಾ ಎಂ ನೆಲವಿಗಿ, ಜಿಲ್ಲಾ ವಕೀಲರ ಸಂಘ ಅಧ್ಯಕ್ಷ ಹೆಚ್.ಎಸ್.ಮಹೇಶ್ವರಪ್ಪ, ರೋಟರಿ ಕ್ಲಬ್ ಚಿನ್ಮೂಲಾದ್ರಿ ಅಧ್ಯಕ್ಷ ದಿಲ್ಶಾದ್ ಉನ್ನೀಸಾ, ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಜೆ.ವೈಶಾಲಿ, ರಾಜ್ಯ ಸರ್ಕಾರಿ ನಿವೃತ್ತ ನೌಕರರ ಜಿಲ್ಲಾ ಸಂಘ ಅಧ್ಯಕ್ಷ ಪ್ರೇಮನಾಥ, ರಾಜ್ಯ ಸರ್ಕಾರಿ ನಿವೃತ್ತ ನೌಕರರ ಜಿಲ್ಲಾ ಸಂಘ ನಿಕಟಪೂರ್ವ ಅಧ್ಯಕ್ಷ ರಂಗಪ್ಪ ರೆಡ್ಡಿ ಭಾಗವಹಿಸುವರು ಎಂದು ಪ್ರಕಟಣೆ ತಿಳಿಸಿದೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.







