ಚಿತ್ರದುರ್ಗ:ಜಿಲ್ಲಾ ಕೇಂದ್ರದಲ್ಲಿ ಸರ್ಕಾರದ ವತಿಯಿಂದ ಇದೇ ಸೆಪ್ಟೆಂಬರ್ 17ರಂದು ವಿಶ್ವಕರ್ಮ ಜಯಂತಿಯನ್ನು ವಿಜೃಂಭಣೆ ಹಾಗೂ ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದು ಚಿತ್ರದುರ್ಗ ತಹಶೀಲ್ದಾರ್ ಗೋವಿಂದರಾಜ್ ಹೇಳಿದರು.ನಗರದ ಉಪವಿಭಾಗಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ವಿಶ್ವಕರ್ಮ ಜಯಂತಿ ಆಚರಿಸುವ ಕುರಿತು ಅಗತ್ಯ ಪೂರ್ವ ಸಿದ್ಧತೆಗಳನ್ನು ಕೈಗೊಳ್ಳುವ ಬಗ್ಗೆ ಚರ್ಚಿಸಲು ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ವಿಶ್ವಕರ್ಮ ಜಯಂತಿಯನ್ನು ಸೆ.17 ರಂದು ಬೆಳಿಗ್ಗೆ 11ಕ್ಕೆ ಚಿತ್ರದುರ್ಗ ನಗರದ ಬುರುಜನಹಟ್ಟಿಯ ಕೋಟೆ ಆಂಜನೇಯ ದೇವಸ್ಥಾನ ಎದುರಿನ ವಿಶ್ವಕರ್ಮ ಕಲ್ಯಾಣ ಮಂಟಪದಲ್ಲಿ ಅರ್ಥಪೂರ್ಣವಾಗಿ ಆಚರಿಸಲು ಸಮಾಜದ ಮುಖಂಡರು ಸಲಹೆ ನೀಡಿದರು. ಇದಕ್ಕೆ ಸಮ್ಮತಿ ವ್ಯಕ್ತಪಡಿಸಿದ ತಹಶೀಲ್ದಾರ್ ಗೋವಿಂದರಾಜ್, ಜಿಲ್ಲಾಡಳಿತ ವತಿಯಿಂದ ಅಗತ್ಯ ಸಹಕಾರ ನೀಡುವ ಮೂಲಕ ಜಯಂತಿ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಿಸೋಣ ಎಂದು ಹೇಳಿದರು.ಜಯಂತಿ ಅಂಗವಾಗಿ ಮೆರವಣಿಗೆ ಕಾರ್ಯಕ್ರಮ ನಡೆಸಲಾಗುವುದು. ನಗರದ ಬುರುಜನಹಟ್ಟಿಯ ಕೋಟೆ ಆಂಜನೇಯ ದೇವಸ್ಥಾನದ ವಿಶ್ವ ಕರ್ಮ ಕಲ್ಯಾಣ ಮಂಟಪದಿಂದ ಮೆರವಣಿಗೆ ಪ್ರಾರಂಭವಾಗಲಿದ್ದು, ಮೆರವಣಿಗೆಯು ಸಂಗೋಳ್ಳಿ ರಾಯಣ್ಣ ವೃತ್ತ ವೃತ್ತ, ಗಾಂಧಿ ವೃತ್ತದ ಮೂಲಕ ಆನೆಬಾಗಿಲು ಮೂಲಕ ಮತ್ತೆ ಪುನಃ ವೇದಿಕೆ ಕಾರ್ಯಕ್ರಮ ನಡೆಯುವ ವಿಶ್ವಕರ್ಮ ಕಲ್ಯಾಣ ಮಂಟಪದವರೆಗೂ ಮೆರವಣಿಗೆ ನಡೆಯಲಿದೆ ಎಂದು ಸಮಾಜದ ಮುಖಂಡರು ತಿಳಿಸಿದರು. ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ಡಾ.ಬಿ.ಎಂ.ಗುರುನಾಥ ಮಾತನಾಡಿ, ಸರ್ಕಾರದ ಶಿಷ್ಟಾಚಾರ ಪಾಲಿಸಿಕೊಂಡು ಅರ್ಥಪೂರ್ಣವಾಗಿ ಜಯಂತಿ ಆಚರಿಸಲಾಗುವುದು. ವಿಶ್ವಕರ್ಮರ ಜಯಂತಿ ಅಂಗವಾಗಿ ಗೀತ ಗಾಯನ, ವಿಶೇಷ ಉಪನ್ಯಾಸ ಏರ್ಪಡಿಸಲಾಗುವುದು. ಶಿಷ್ಟಾಚಾರದಂತೆ ಆಹ್ವಾನ ಪತ್ರಿಕೆ ಮುದ್ರಣ, ಬ್ಯಾಡ್ಜ್ ವಿತರಣೆಗೆ ಕ್ರಮವಹಿಸಲಾಗುವುದು ಎಂದರು.
ಸಭೆಯಲ್ಲಿ ಜಿಲ್ಲಾ ವಿಶ್ವಕರ್ಮ ಸಮಾಜ ಅಧ್ಯಕ್ಷ ಕೆ.ಟಿ. ಸುರೇಶಾಚಾರ್, ವಿಶ್ವಕರ್ಮ ಕಲ್ಯಾಣ ಮಂಟಪ ಅಧ್ಯಕ್ಷ ಎ.ಶಂಕರಚಾರ್, ಜಿಲ್ಲಾ ವಿಶ್ವಕರ್ಮ ಸಮಾಜ ಉಪಾಧ್ಯಕ್ಷ ಮಲ್ಲಿಕಾರ್ಜುನಾಚಾರ್, ಪ್ರಧಾನ ಕಾರ್ಯದರ್ಶಿ ಸಿ.ಆರ್.ಸುರೇಶ, ಕಾರ್ಯದರ್ಶಿ ಹೆಚ್.ಸುನೀಲ್ ಕುಮಾರ್, ಖಜಾಂಚಿ ರಾಜೇಂದ್ರಚಾರ್, ಮುಖಂಡರಾದ ಬಿ.ಮಂಜುನಾಥಾಚಾರ್, ಶಿವಣ್ಣಾಚಾರ್, ಎಸ್. ಕೃಷ್ಣಾಚಾರ್, ಬಾಲಬ್ರಹ್ಮಚಾರ್, ಎನ್.ಗೋವರ್ಧನಚಾರ್, ನಾಗೇಂದ್ರಚಾರ್, ಬಿ.ವಿ. ತಿಪ್ಪೇಸ್ವಾಮಿ, ಎಂ.ಶಂಕರಚಾರ್, ಮಲ್ಲಿಕಾರ್ಜುನಾಚಾರ್, ರಾಜಗೋಪಾಲಚಾರ್, ಭೀಮಾಚಾರ್, ನಟರಾಜ್, ಮೃತ್ಯುಂಜಯಚಾರ್, ಶಿಕ್ಷಣ ಇಲಾಖೆಯ ಚಿದಾನಂದ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.







