ಚಿತ್ರದುರ್ಗ: ಜಿಲ್ಲೆಯ ಹಿಂದೂ ಮಹಾಗಣಪತಿ ಶೋಭಾಯಾತ್ರೆ ಹಾಗೂ ಕಾರ್ಯಕ್ರಮಕ್ಕೆ ಕೆಲವು ನಿರ್ಬಂಧ ಹೇರಿರುವ ಜಿಲ್ಲಾಡಳಿತದ ಧೋರಣೆ ವಿರುದ್ಧ ವಿಶ್ವ ಹಿಂದೂ ಪರಿಷತ್ ಹಾಗೂ ಭಜರಂಗದಳ ಬುಧವಾರ ಸಂಜೆ 4 ಗಂಟೆಗೆ ಬೃಹತ್ ಪ್ರತಿಭಟನಾ ರ್ಯಾಲಿ ನಡೆಸಲು ಮುಂದಾಗಿದೆ.ಸೆಪ್ಟೆಂಬರ್ 13ರಂದು ನಡೆಯಲಿರುವ ಬೃಹತ್ ಶೋಭಾಯಾತ್ರೆಯಲ್ಲಿ ಅತ್ಯಾಧುನಿಕ ಧ್ವನಿ ಹೊರಸೂಸುವ ಧ್ವನಿವರ್ಧಕ ಬಳಸದಂತೆ ಜಿಲ್ಲಾಡಳಿತ ಆದೇಶ ನೀಡಿದೆ ಜೊತೆಗೆ ಪ್ರಾಂತ ಸಹ ಕಾರ್ಯದರ್ಶಿ ಶರಣ್ ಪಂಪ್ವೆಲ್ ಗೆ ಜಿಲ್ಲೆಯ ಗಡಿ ಪ್ರವೇಶಕ್ಕೆ ನಿಷೇಧ ಹೇರುವುದನ್ನು ಖಂಡಿಸಿ ಈ ಎರಡು ಸಂಘಟನೆಗಳು ಪ್ರತಿಭಟನೆಗೆ ಕರೆ ಕೊಟ್ಟಿವೆ.ಬುಧವಾರ ಸಂಜೆ 4 ಗಂಟೆಗೆ ಹಿಂದೂ ಮಹಾಗಣಪತಿ ಮಂಟಪದಿಂದ ಒನಕೆ ಓಬವ್ವ ವೃತ್ತದವರೆಗೆ ಪ್ರತಿಭಟನೆ ರ್ಯಾಲಿ ನಡೆಯಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.







