ಚಿತ್ರದುರ್ಗ :ಮುಂಬರುವ ದಿನಗಳಲ್ಲಿ ಗ್ರಾ.ಪಂ.ಸಹಯೋಗದೊಂದಿಗೆ ಬೀದಿ ಬದಿಯ ನಾಯಿಗಳಿಗೆ ಲಸಿಕೆಯನ್ನು ಹಾಕಿಸುವ ಕಾರ್ಯ ಹಮ್ಮಿಕೊಳ್ಳಲಾಗುವುದು ಎಂದು ಪಶುಪಾಲನ ಮತ್ತು ಪಶುವೈದ್ಯ ಸೇವಾ ಇಲಾಖೆ ಉಪ ನಿರ್ದೇಶಕ ಡಾ.ಎನ್.ಕುಮಾರ್ ಹೇಳಿದರು.
ಜಿಲ್ಲಾ ಪಂಚಾಯತಿ, ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ, ಹಾಗೂ ಪಶು ವೈದ್ಯಕೀಯ ಪರೀಕ್ಷಕರ ಸಂಘದ ಸಹಯೋಗದಲ್ಲಿ ನಗÀರದ ಒನಕೆ ಓಬವ್ವ ಕ್ರೀಡಾ ಭವನದಲ್ಲಿ ಶುಕ್ರವಾರ ಪಶು ವೈದ್ಯಕೀಯ ಪರಿವೀಕ್ಷಕರಿಗೆ ಹಮ್ಮಿಕೊಂಡಿದ್ದ ತಾಂತ್ರಿಕ ಸಮ್ಮೇಳನ ಹಾಗೂ ರೇಬಿಸ್ ರೋಗ ತಡೆಗಟ್ಟುವಿಕೆ ಕಾರ್ಯಗಾರದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಜಿಲ್ಲೆಯಲ್ಲಿ ಕೇವಲ 8 ರಿಂದ 10 ರೇಬಿಸ್ ಪ್ರಕರಣಗಳು ದಾಖಲಾಗುತ್ತಿವೆ. ಆದರೆ ಬಹು ಸಂಖ್ಯೆ ಪ್ರಕರಣಗಳು ದಾಖಲಾಗದೆ ಉಳಿಯುತ್ತಿವೆ. ಅಧಿಕಾರಿಗಳು ನಿರ್ಲಕ್ಷ್ಯ ವಹಿಸದೇ ಜಾನುವಾರುಗಳಿಗೆ ಬರುವ ಸಾಂಕ್ರಾಮಿಕ ರೋಗಗಳು ಹಾಗೂ ರೇಬಿಸ್ ಪ್ರಕರಣಗಳನ್ನು ತಪ್ಪದೇ ದಾಖಲಿಸಬೇಕು. ಅಧಿಕಾರಿಗಳು ತಾಂತ್ರಿಕ ವಿಚಾರ ಸಂಕಿರಣ ಮತ್ತು ಕಾರ್ಯಾಗಾರ ಸದುಪಯೋಗವನ್ನು ಪಡೆದು ಪಶು ವ್ಯದ್ಯಕೀಯ ಸೇವಾ ಇಲಾಖೆಯ ಕಾರ್ಯಗಳನ್ನು ಯಶಸ್ವಿಗೊಳಿಸಬೇಕು ಎಂದು ಕರೆ ನೀಡಿದರು.ಮುಂದಿನ ದಿನಗಳಲ್ಲಿ ರೇಬಿಸ್ ಕುರಿತು ಶಾಲಾ ಕಾಲೇಜುಗಳಲ್ಲಿ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಆಯೋಜಿಸಲಾಗವುದು. ಪ್ರಾಣಿ ಪ್ರಿಯರು ಸಾಕುಪ್ರಾಣಿಗಳಿಗೆ ಸಮಯಕ್ಕೆ ಸರಿಯಾಗಿ ಲಸಿಕೆಗಳನ್ನು ಕೊಡಿಸಬೇಕು. ಒಮ್ಮೆ ರೇಬಿಸ್ ತುತ್ತಾದರೆ ಚಿಕಿತ್ಸೆ ಸಿಗುವುದು ಕಷ್ಟ. ಪ್ರಾಣಹಾನಿ ನಿಶ್ಚಿತ ಎಂದು ಉಪ ನಿರ್ದೇಶಕ ಡಾ.ಎನ್.ಕುಮಾರ್ ಎಚ್ಚರಿಸಿದರು.ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಜಿ.ಪಂ.ಉಪಕಾರ್ಯದರ್ಶಿ ಡಾ.ರಂಗಸ್ವಾಮಿ ಪಶು ಇಲಾಖೆಯಲ್ಲಿ ಸಾಕಷ್ಟು ಸುಧಾರಣೆಗಳು ಉಂಟಾಗಿವೆ. ತಂತ್ರಜ್ಞಾನವನ್ನು ಬಳಸಿ ಪ್ರತಿಯೊಂದು ಕಾರ್ಯಗಳನ್ನು ನಿರ್ವಹಿಸುವುದರಿಂದ ಅಧಿಕಾರಿಗಳಿಗೆ ದಾಖಲೆಗಳನ್ನು ಬರೆದು ನಿರ್ವಹಿಸುವುದು ತಪ್ಪಿದೆ ಎಂದರು.
ಪಶು ಸಂಪತ್ತು ಕುಂಠಿತಕ್ಕೆ ಕಳವಳ:
ಚಿತ್ರದುರ್ಗ ಜಿಲ್ಲೆಯಲ್ಲಿ 3.80 ಲಕ್ಷ ಸಂಖ್ಯೆಯಲ್ಲಿದ್ದ ಜಾನುವಾರುಗಳ ಸಂಖ್ಯೆ 2.50 ಲಕ್ಷಕ್ಕೆ ಕುಸಿದಿದೆ. ಕೆಲ ವರ್ಷಗಳಲ್ಲಿ 1.50 ಲಕ್ಷ ಜಾನುವಾರುಗಳು ಕುಂಠಿತವಾಗಿವೆ ಎಂದು ಪಾಲಿಕ್ಲಿನಿಕ್ ಉಪ ನಿರ್ದೇಶಕ ಡಾ.ಸಿ.ತಿಪ್ಪೆಸ್ವಾಮಿ ಕಳವಳ ವ್ಯಕ್ತ ಪಡಿಸಿದರು. ಪಶು ಸಂಗೋಪನೆ ಪ್ರಾಮುಖ್ಯತೆ ಅರಿತು ಇಲಾಖೆ ಅಧಿಕಾರಿಗಳು ಗ್ರಾಮ ಹಾಗೂ ನಗರ ಪ್ರದೇಶದಲ್ಲಿ ಸೇವಾ ಮನೋಭಾವದಿಂದ ಕಾರ್ಯನಿರ್ವಹಿಸಬೇಕು ಎಂದು ಕಾರ್ಯಗಾರದ ಪ್ರಾಸ್ತಾವಿಕ ನುಡಿಯಲ್ಲಿ ತಿಳಿಸಿದರು.ತಾಂತ್ರಿಕ ವಿಚಾರ ಸಂಕಿರ್ಣ ಹಾಗೂ ಕಾರ್ಯಾಗಾರ ಕುರಿತು ಎನ್.ಐ.ಸಿ ಪ್ರೋಗ್ರಾಮರ್ ಗಾಯಿತ್ರಿ ಕುಲಕರ್ಣಿ ಉಪನ್ಯಾಸ ನೀಡಿದರು.
ಕರ್ನಾಟಕ ರಾಜ್ಯ ಸರ್ಕಾರಿ ನೌಕಾರರ ಸಂಘದ ಜಿಲ್ಲಾಧ್ಯಕ್ಷ ಮಾಲತೇಶ ಮುದ್ದಜ್ಜಿ, ಮುಖ್ಯ ಪಶುವೈದ್ಯಕೀಯ ಉಪ ನಿರ್ದೇಶಕ ಡಾ.ಎನ್.ಗಿರಿರಾಜ್, ಪಶು ವೈದ್ಯಕೀಯ ಪರೀವಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಟಿ.ಆರ್. ಆಂಜನೇಯ, ಪ್ರದಾನ ಕಾರ್ಯದರ್ಶಿಎ.ಆರ್. ತಿಪ್ಪೆಸ್ವಾಮಿ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಕಾರ್ಯಧ್ಯಕ್ಷ ಬಿ.ಟಿ. ವಿಶ್ವನಾಥ ಸೇರಿದಂತೆ ಇತರರು ಇದ್ದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.







