ಚಿತ್ರದುರ್ಗ: ಕೊಳಗೇರಿ ನಿವಾಸಿಗಳಿಗೆ ಹಕ್ಕುಪತ್ರ, ಮೂಲಭೂತ ಸೌಲಭ್ಯಗಳನ್ನು ಒದಗಿಸುವಂತೆ ಕರ್ನಾಟಕ ಕೊಳಗೇರಿ ನಿವಾಸಿಗಳ ಸಂಯುಕ್ತ ಸಂಘಟನೆ ಜಿಲ್ಲಾ ಸಮಿತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಎರಡು ದಿನಗಳ ಹಿಂದೆ ಪ್ರತಿಭಟನೆ ನಡೆಸಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಲಾಯಿತು.ಪ್ರವಾಸಿ ಮಂದಿರದಿಂದ ಮೆರವಣಿಗೆ ಮೂಲಕ ಜಿಲ್ಲಾಧಿಕಾರಿ ಕಚೇರಿಗೆ ತೆರಳಿದ ವಿಜಯನಗರ ಬಡಾವಣೆ, ಹಳ್ಳದೇರಿಯಾ, ಬುದ್ದನಗರ, ಕುಂಬಾರಪೇಟೆ ಹಾಗೂ ವಿವಿಧ ಕೊಳಚೆಪ್ರದೇಶಗಳ ನಿವಾಸಿಗಳು ಹಕ್ಕುಪತ್ರ, ಮೂಲಭೂತ ಸೌಕರ್ಯಗಳಾದ ರಸ್ತೆ,
ಬೀದಿದೀಪ, ಕುಡಿಯುವ ನೀರು, ಚರಂಡಿ, ಶೌಚಾಲಯ ವ್ಯವಸ್ಥೆ ಒದಗಿಸುವಂತೆ ಜಿಲ್ಲಾಡಳಿತವನ್ನು ಒತ್ತಾಯಿಸಿದರು.ಕೆ.ಕೆ.ಎನ್.ಎಸ್.ಎಸ್. ಜಿಲ್ಲಾ ಸಮಿತಿ ಅಧ್ಯಕ್ಷ ಗಣೇಶ್, ಉಪಾಧ್ಯಕ್ಷ ಎನ್.ರಂಗಸ್ವಾಮಿ, ಇಮಾಂಸಾಬ್, ಮೈಲಾರಪ್ಪ,ಸಹೀನಾಭಾನು, ಲೀಲಾವತಿ, ಭಾರತಿ, ಮೇರಿಯಮ್ಮ
ರಾಧಮ್ಮ, ಮಂಜಣ್ಣ ಇನ್ನು ಅನೇಕರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.







