ಚಿತ್ರದುರ್ಗ:ಮೀನುಗಾರಿಕೆ ಇಲಾಖೆಯಿಂದ 2025-26ನೇ ಸಾಲಿಗೆ ವಿಶೇಷ ಘಟಕ ಯೋಜನೆ ಹಾಗೂ ಗಿರಿಜನ ಉಪ ಯೋಜನೆಯಡಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಆಯ್ದ 3 ಜನ ಮೀನು ಮಾರಾಟಗಾರರಿಗೆ ನಾಲ್ಕು ಚಕ್ರದ ವಾಹನ ಖರೀದಿಸಲು ಆರ್ಥಿಕ ನೆರವು ನೀಡಲು ಅರ್ಜಿ ಆಹ್ವಾನಿಸಲಾಗಿದೆ.ಯೋಜನೆಯಡಿ ವಾಹನ ಖರೀದಿಯ ಶೇ.50 ರಷ್ಟು ಅಥವಾ ಗರಿಷ್ಠ 3 ಲಕ್ಷದ ವರೆಗೆ ಆರ್ಥಿಕ ನೆರವು ನೀಡಲಾಗುವುದು. ಆಸಕ್ತರು ಅಗತ್ಯ ದಾಖಲೆಗಳೊಂದಿಗೆ ಸೆ.15 ರ ಒಳಗೆ ಆಯಾ ತಾಲ್ಲೂಕು ಮೀನುಗಾರಿಕೆ ಸಹಾಯಕ ನಿರ್ದೇಶಕರ ಕಚೇರಿ ಅರ್ಜಿ ಸಲ್ಲಿಸಬಹುದು.ಹೆಚ್ಚಿನ ಮಾಹಿತಿಗಾಗಿ ಚಿತ್ರದುರ್ಗ ಮೊಳಕಾಲ್ಮೂರು ಸಹಾಯಕ ನಿರ್ದೇಶಕ ತುಳಿಸಿದಾಸ್ ಮೊಬೈಲ್ ಸಂಖ್ಯೆ 9342187356, ಚಳ್ಳಕೆರೆ ಮತ್ತು ಹಿರಿಯೂರು ಸಹಾಯಕ ನಿರ್ದೇಶಕಿ ದೀಪಾಲಿ ಮೊಬೈಲ್ ಸಂಖ್ಯೆ 9740900866 ಹಾಗೂ ಹೊಸದುರ್ಗ ಮತ್ತು ಹೊಳಲ್ಕೆರೆ ಸಹಾಯಕ ನಿರ್ದೇಶಕ ವೆಂಕಟೇಶ್ವರ ಮೊಬೈಲ್ ಸಂಖ್ಯೆ 9945004235 ಕರೆ ಮಾಡಬಹುದು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.







