ಚಿತ್ರದುರ್ಗ: ಜಿಲ್ಲೆಯಲ್ಲಿ ಕಳೆದ ಒಂದು ತಿಂಗಳಿನಿಂದ ಇ-ಪೌತಿ ಆಂದೋಲನ ಪ್ರಾರಂಭಿಸಿದ್ದು, ಸಂಬಂಧಿಸಿದ ಜಮೀನಿನ ಪೌತಿ ವಾರಸುದಾರರು ಕನಿಷ್ಟ ದಾಖಲೆಗಳನ್ನು ಸಂಬಂಧಿಸಿದ ಗ್ರಾಮ ಆಡಳಿತ ಅಧಿಕಾರಿಗೆ ನೀಡಿ, ಈ ಯೋಜನೆಯ ಸದುಪಯೋಗ ಪಡೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ತಿಳಿಸಿದ್ದಾರೆ.2025-26ನೇ ಸಾಲಿನ ಆಯವ್ಯಯ ಭಾಷಣ ಕಂಡಿಕೆ 418 ರಲ್ಲಿ ಪಹಣಿಗಳಿಗೆ ಆಧಾರ್ ಜೋಡಣೆ ಸಂದರ್ಭದಲ್ಲಿ ಪೌತಿ ಎಂದು ಗುರುತಿಸಲಾದ ಜಮೀನುಗಳ ಪಹಣಿಗಳನ್ನು ವಾರಸುದಾರರಿಗೆ ಖಾತೆ ಮಾಡಲು ಪ್ರಸಕ್ತ ಸಾಲಿನಲ್ಲಿ ಇ-ಪೌತಿ ಆಂದೋಲನ ಜಾರಿಗೊಳಿಸಲು ಕಂದಾಯ ಇಲಾಖೆಯಿಂದ ಆದೇಶ ಹೊರಡಿಸಲಾಗಿದೆ.ಕೃಷಿ ಜಮೀನಿನ ಮಾಲೀಕರು ಮರಣ ಹೊಂದಿದ ನಂತರ ಪೌತಿ, ವಾರಸಾ ರೀತ್ಯ ಮಾಲೀಕತ್ವವು ಮೃತರ ಉತ್ತರಾಧಿಕಾರಿಗಳ ಹೆಸರಿಗೆ ಬದಲಾವಣೆಯಾಗದಿದ್ದಲ್ಲಿ ಅಂತಹ ಜಮೀನುಗಳ ಸ್ವಾಧೀನವನ್ನು ಹೊಂದಿದ್ದರೂ ಸಹ ಕುಟುಂಬಸ್ಥರಿಗೆ ಜಮೀನು ಅಭಿವೃದ್ಧಿಪಡಿಸಲು ಸಾಲ, ಸೌಕರ್ಯಗಳು ದೊರೆಯುವುದಿಲ್ಲ. ಪ್ರಕೃತಿ ವಿಕೋಪದಂತಹ ವಿಪತ್ತುಗಳಿಂದಾಗಿ ಫಸಲು ನಾಶವಾದಾಗ ಸರ್ಕಾರದಿಂದ ನೀಡಲಾಗುವ ವಿಮೆ, ಪರಿಹಾರದ ಮೊಬಲಗನ್ನು ಪಡೆಯುವುದು ಕಷ್ಟವಾಗುತ್ತದೆ. ಈ ಹಿನ್ನಲೆಯಲ್ಲಿ ಮರಣದ ದೃಢೀಕರಣ ಪತ್ರ, ಅಫಿಡವಿಟ್ ಮತ್ತು ವಂಶವೃಕ್ಷದಂತಹ ಕನಿಷ್ಟ ದಾಖಲೆಗಳ ಆಧಾರದ ಮೇಲೆ ಇ-ಪೌತಿ ತಂತ್ರಾಂಶದ ಮೂಲಕ ಇ-ಪೌತಿ ಆಂದೋಲನವನ್ನು ಪ್ರಾಯೋಗಿಕವಾಗಿ 2024ರ ಡಿಸೆಂಬರ್ 17 ರಿಂದ ಕೆಲವು ತಾಲ್ಲೂಕುಗಳಲ್ಲಿ ಪ್ರಾರಂಭಿಸಿದ್ದು, ಈಗ ರಾಜ್ಯದಾದ್ಯಂತ ನಡೆಸಲು ಸರ್ಕಾರವು ತೀರ್ಮಾನಿಸಿರುತ್ತದ ಅದರಂತೆ ಚಿತ್ರದುರ್ಗ ಜಿಲ್ಲೆಯಲ್ಲಿಯೂ ಸಹ ಕಳೆದ ಒಂದು ತಿಂಗಳಿನಿಂದ ಇ-ಪೌತಿ ಆಂದೋಲನ ಪ್ರಾರಂಭಿಸಿದ್ದು, ಸಂಬಂಧಿಸಿದ ಜಮೀನಿನ ಪೌತಿ ವಾರಸುದಾರರು ಕನಿಷ್ಟ ದಾಖಲೆಗಳನ್ನು ಸಂಬಂಧಿಸಿದ ಗ್ರಾಮ ಆಡಳಿತ ಅಧಿಕಾರಿಗೆ ನೀಡಿ, ಈ ಯೋಜನೆಯ ಸದುಪಯೋಗ ಪಡೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಪ್ರಕಟಣೆಯಲ್ಲಿ ಕೋರಿದ್ದಾರೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.







