ಬೆಂಗಳೂರು: ಮಲ್ಟಿಪ್ಲೆಕ್ಸ್ಗಳು ಸೇರಿ ರಾಜ್ಯದ ಎಲ್ಲ ಚಿತ್ರಮಂದಿರಗಳಲ್ಲಿ ಎಲ್ಲಾ ಭಾಷೆಗಳ ಸಿನಿಮಾ ಪ್ರದರ್ಶನಕ್ಕೆ ಏಕರೂಪ ಟಿಕೆಟ್ ದರ ಜಾರಿಗೊಳಿಸುವ ಸಂಬಂಧ ರಾಜ್ಯ ಕರಡು ಅಧಿಸೂಚನೆ ಹೊರಡಿಸಿದೆ.ಮನರಂಜನಾ ತೆರಿಗೆ ಒಳಗೊಂಡಂತೆ ಟಿಕೆಟ್ ದರ ₹200 ಮೀರದಂತೆ ಕರ್ನಾಟಕ ಸಿನಿಮಾಗಳು ನಿಯಮಗಳು 2014ಕ್ಕೆ ತಿದ್ದುಪಡಿ ತಂದಿ ದೆ. ತಿದ್ದುಪಡಿ ಕರಡು ಸಂಬಂಧ ಆಕ್ಷೇ ಪಣೆ ಮತ್ತು ಸಲಹೆಗಳು ಇದ್ದಲ್ಲಿ 15 ದಿನಗೊಳಗೆ ಗೃಹ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗೆ ಸಲ್ಲಿಸಬೇಕು.ಒದು ವೇಳೆ ಯಾವುದೇ ಆಕ್ಷೇಪಣೆಗಳು ಕರಡು ಬಾರದಿದ್ದಲ್ಲಿ ತಿದ್ದುಪಡಿ ಅಧಿಸೂಚನೆ ಅಧಿಕೃತವಾಗಿ ಜಾರಿಗೆ ಬರಲಿದೆ ಎಂದು ಸರ್ಕಾರ ತಿಳಿಸಿದೆ.
ಮಲ್ಟಿಪ್ಲೆಕ್ಸ್ ಸೇರಿ ಕೆಲ ಚಿತ್ರಮಂದಿ ರಗಳಲ್ಲಿ ಟಿಕೆಟ್ ದರ ಅತ್ಯಂತ ದುಬಾರಿ ಯಾಗಿದೆ ಎಂದು ಸಾರ್ವಜನಿಕ ವಲಯ ದಲ್ಲಿ ಆಕ್ರೋಶ ವ್ಯಕ್ತವಾಗಿತ್ತು. ಅಧಿವೇ ಶನದಲ್ಲಿ ಸಹ ಈ ಬಗ್ಗೆ ಅನೇಕ ಸದಸ್ಯರು ಚರ್ಚಿಸಿ ಏಕರೂಪದ ದರ ನಿಗದಿಪ ಡಿಸುವಂತೆ ಒತ್ತಾಯಿಸಿದ್ದರು. ಈ ಹಿನ್ನೆಲೆ ಕಳೆದ ಬಜೆಟ್ನಲ್ಲಿ ಮುಖ್ಯ ಮಂತ್ರಿ ಸಿದ್ದರಾಮಯ್ಯ ಚಿತ್ರಮಂ ದಿರಗಳ ಟಿಕೆಟ್ ದರ ₹200 ನಿಗದಿಗೊ ಳಿಸುವುದಾಗಿ ಘೋಷಿಸಿದ್ದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.



