ಚಿತ್ರದುರ್ಗ: ವರ್ಷಾಂತ್ಯಕ್ಕೆ ಸಿಎಂ ಸ್ಥಾನದಿಂದ ಸಿದ್ಧರಾಮಯ್ಯ ಉದರೋಗ್ತಾರೆ, ಆಮೇಲೆ ಕಾಂಗ್ರೆಸ್ ಅಧಿಕಾರದಲ್ಲಿ ಇರತ್ತೋ ಇಲ್ವೋ ದೇವರಿಗೇ ಗೊತ್ತು ಅಂತಾ ಮೊಳಕಾಲ್ಮೂರು ಮಾಜಿ ಶಾಸಕ ಎಸ್. ತಿಪ್ಪೇಸ್ವಾಮಿ ಭವಿಷ್ಯ ನುಡಿದಿದ್ದಾರೆ. ಮೊಳಕಾಲ್ಮೂರು ಪಟ್ಟಣದಲ್ಲಿ ಸರ್ಕಾರದ ವಿರುದ್ಧ ಬಿಜೆಪಿ ವತಿಯಿಂದ ಪ್ರತಿಭಟನೆ ನಡೆಸಿ ಮಾತನಾಡಿ, ಕಾಂಗ್ರೆಸ್ ಸರ್ಕಾರದಲ್ಲಿ ವಯಸ್ಸಾದ ಶಾಸಕರು ಈಗ ಸರ್ಕಾರದ ವಿರುದ್ಧ ಮಾತನಾಡುತ್ತಿದ್ದಾರೆ. ಬಿ.ಆರ್ ಪಾಟೀಲ್, ರಾಜುಕಾಗೆ ಹಾಗೂ ಇವರ ಸರತಿ ಕೂಡ ಆಯ್ತು. ಇನ್ನು ಭಾಗ್ಯಗಳನ್ನು ಕೊಟ್ಟ ಕಾಂಗ್ರೆಸ್ ಸರ್ಕಾರಕ್ಕೆ ಅಭಿವೃದ್ಧಿಗೆ ಅನುದಾನ ಪಾಪ ಎಲ್ಲಿಂದ ಬರಬೇಕು ಎಂದು
ಪರೋಕ್ಷವಾಗಿ ಶಾಸಕ ಎನ್ ವೈ ಗೋಪಾಲಕೃಷ್ಣ ಹೇಳಿಕೆಗೆ ಟಾಂಗ್ ಕೊಟ್ಟರು. ಸಿದ್ಧರಾಮಯ್ಯ ಇನ್ನು 4 ತಿಂಗಳು ಮಾತ್ರ ಸಿಎಂ ಆಗಿರ್ತಾರೆ. ನವೆಂಬರ್, ಡಿಸೆಂಬರ್ ಅಷ್ಟೊತ್ತಿಗೆ ಸಿಎಂ ಸ್ಥಾನದಿಂದ ಉದುರಿ ಹೋಗ್ತಾರೆ, ಇಲ್ಲ ಕಿತ್ತು ಹೊಗೆಯುತ್ತಾರೆ ನಂತ್ರ ಸರ್ಕಾರ ಇರತ್ತೋ ಇಲ್ವೋ ಅಂತ ದೇವರಿಗೆ ಗೊತ್ತು ಎಂದು ವ್ಯಂಗ್ಯವಾಡಿದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.



