ಬೆಂಗಳೂರು: ಮೈಸೂರಿನಲ್ಲಿ ನಡೆದ ಸರ್ಕಾರದ ಸಾಧನಾ ಸಮಾವೇಶ ಕಾರ್ಯಕ್ರಮದಿಂದ ಅರ್ಧಕ್ಕೇ ನಿರ್ಗಮಿಸಿದ್ದ ಡಿಸಿಎಂ ಡಿಕೆ ಶಿವಕುಮಾರ್ ದಿಢೀರ್ ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ.ವೈಯಕ್ತಿಕ ಕೆಲಸಕ್ಕಾಗಿ ದೆಹಲಿಗೆ ಪ್ರಯಾಣ ಎಂಬ ಮಾಹಿತಿ ಲಭ್ಯವಾಗಿದ್ದರೂ, ಮೈಸೂರಿನಲ್ಲಿ ನಡೆದ ಸರ್ಕಾರದ ಕಾರ್ಯಕ್ರಮದಿಂದ ಅರ್ಧಕ್ಕೆ ನಿರ್ಗಮಿಸಿ ತರಾತುರಿಯಲ್ಲಿ ದೆಹಲಿಗೆ ಹೊರಟಿದ್ದು ಕುತೂಹಲ ಮೂಡಿಸಿದೆ.ಕಳೆದ ಕೆಲವು ದಿನಗಳ ಹಿಂದಷ್ಟೇ ಡಿಕೆ ಶಿವಕುಮಾರ್ ದೆಹಲಿಗೆ ತೆರಳಿದ್ದರು. ಈಗ ಮತ್ತೆ ತರಾತುರಿಯಲ್ಲಿ ದೆಹಲಿಗೆ ಪ್ರಯಾಣ ಬೆಳೆಸಿರುವುದು ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದೆ. ಜುಲೈ 11 ಹಾಗೂ 12ರಂದು ಶಿರಡಿಗೆ ತೆರಳಿದ್ದ ಡಿಕೆಶಿ ದಿಢೀರ್ ದೆಹಲಿಗೆ ತೆರಳಿ ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿದ್ದರು. ಇದಾದ 8 ದಿನಗಳ ಅಂತರದಲ್ಲೇ ದೆಹಲಿಗೆ ತೆರಳಿರುವುದು ಕುತೂಹಲ ಮೂಡಿಸಿದೆ
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.



