ಮೈಸೂರು, ಜೂನ್ 30: ನಾನು ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಇಬ್ಬರೂ ಒಟ್ಟಾಗಿದ್ದೇವೆ, ಯಾರೂ ಏನೂ ಹೇಳಿದರು ನಮ್ಮ ಮಧ್ಯೆ ಭಿನ್ನಾಭಿಪ್ರಾಯವಿಲ್ಲ. ಕೇಳುವುದಿಲ್ಲ. ಸರ್ಕಾರ ಐದು ವರ್ಷ ಬಂಡೆಯಂತೆ ಭದ್ರವಾಗಿರುತ್ತದೆ ಎಂದು ಮುಖ್ಯಮಂತ್ರಿಗಳು ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.ಅವರು ಇಂದು ಮೈಸೂರು ವಿಮಾನನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರ.
ಸುರ್ಜೆವಾಲಾ ಅಭಿಪ್ರಾಯ ಪಡೆಯಲಿದ್ದಾರೆ.
ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕಾರ್ಯದರ್ಶಿ ಸುರ್ಜೆವಾಲಾ ಅವರು ರಾಜ್ಯಕ್ಕೆ ಭೇಟಿ ನೀಡುತ್ತಿರುವ ಬಗ್ಗೆ ಮಾತನಾಡಿ ಅವರು ಅಭಿಪ್ರಾಯ ಕೇಳಿ, ಅವರ ಕೆಲಸವನ್ನು ಮಾಡುತ್ತಾರೆ ಎಂದರು
ಬಿಜೆಪಿ ಯವರು ಸುಳ್ಳು ಹೇಳುವುದರಲ್ಲಿ ನಿಸ್ಸೀಮರು
ಸಿದ್ದರಾಮಯ್ಯ ಅವರು ಈ ಬಾರಿಯ ದಸರಾ ಉದ್ಘಾಟಿಸುವುದಿಲ್ಲ ಎಂದು ಬಿಜೆಪಿಯವರು ಹೇಳಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಸುಳ್ಳು ಹೇಳುವುದರಲ್ಲಿ ನಿಸ್ಸೀಮರು. ಶ್ರೀರಾಮುಲು ಲೋಕಸಭಾ ಮತ್ತು ವಿಧಾನಸಭಾ ಚುನಾವಣೆಯಲ್ಲಿ ಸೋತಿದ್ದಾರೆ. ಅವರು ಹೇಗೆ ಭವಿಷ್ಯ ನುಡಿಯುತ್ತಾರೆ ಎಂದು ಪ್ರಶ್ನಿಸಿದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.



