ಬೆಂಗಳೂರು: ಮುಖ್ಯಮಂತ್ರಿ ಬದಲಾವಣೆ ಇಲ್ಲ ಎದು ಹೈಕಮಾಂಡ್ ಸ್ಪಷ್ಟಪಡಿಸಿದೆ. ರಾಜ್ಯ ಉಸ್ತುವಾರಿ ಸಹ ಮಾಧ್ಯಮಗಳ ಎದುರೇ ಹೇಳಿದ್ದರು. ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಸ್ಪಷ್ಟ ಸಂದೇಶ ನೀಡಿದ್ದು. ಇನ್ನು ಯಾವುದೇ ಚರ್ಚೆ ಅಗತ್ಯವಿಲ್ಲ ಎಂದು ಸಚಿವ ಎಚ್.ಸಿ.ಮಹದೇವಪ್ಪ ಹೇಳಿದ್ದಾರೆ.
ಮುಖ್ಯಮಂತ್ರಿಗಳೇ ಸ್ಪಷ್ಟಪಡಿಸಿರುವುದರಿಂದ ಇನ್ನು ಮುಂದೆ ಯಾವುದೇ ಚರ್ಚೆ ಅಗತ್ಯವಿಲ್ಲ. ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ ಆಗಿರುತ್ತಾರೆ ಎಂದು ಹೇಳಿದರು.
ನಗರದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿ, ಮುಖ್ಯಮಂತ್ರಿ ಬದಲಾವಣೆ ವಿಚಾರ ಪಕ್ಷದಲ್ಲಿ ಚರ್ಚೆಯಲ್ಲಿರಲಿಲ್ಲ. ಮಾಧ್ಯಮಗಳು ಸೃಷ್ಟಿಸಿರುವ ವದಂತಿಗೆ ಹೈಕಮಾಂಡ್ ಹಾಗೂ ರಾಜ್ಯ ಉಸ್ತುವಾರಿಗಳು ಸ್ಪಷ್ಟನೆ ನೀಡಿದ್ದರು. ಇದೀಗಜನರು ಐದು ವರ್ಷ ಆಡಳಿತ ನಡೆಸಲು ನಮಗೆ ಅಧಿಕಾರ ನೀಡಿದ್ದಾರೆ. ಇದಕ್ಕೆ ವಿರುದ್ಧವಾಗಿ ಬಿಜೆಪಿಯ ವರೇ ಹೈಕಮಾಂಡ್ ನಂತೆ ಮುಖ್ಯಮಂತ್ರಿ ಬದಲಾ ವಣೆ ಎಂದು ಮಾತನಾಡುತ್ತಾರೆ. ಆಪರೇ ಷನ್ ಕಮಲದ ರುಚಿ ನೋಡಿರುವ ಪರಿಣಾಮವದು. ಮುಖ್ಯಮಂತ್ರಿಗಳು ಈಗಾಗಲೇ ಸ್ಪಷ್ಟಪಡಿಸಿದ್ದು ಈಗ ಮತ್ತೊಮ್ಮೆ ಸಂದೇಶ ನೀಡಿದ್ದಾರೆ. ಯಾವುದೇ ಕಾರಣಕ್ಕೂ ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಚರ್ಚೆಯಿಲ್ಲ ಎಂದು ಅವರು ಹೇಳಿದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.



