ಬೆಂಗಳೂರು: ಕೇಂದ್ರ ಸರ್ಕಾರ ರಾಜ್ಯಕ್ಕೆ ಅಗತ್ಯವಾದ ರಸಗೊಬ್ಬರ ಸರಬರಾಜು ಮಾಡದೆ ಅನ್ಯಾಯ ಎಸಗಿದೆ. ಈ ಸಂದರ್ಭದಲ್ಲಿ ಕಾಳ ಸಂತೆಕೋರರು ತಲೆ ಎತ್ತದಂತೆ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ರಾಜ್ಯ ಪೊಲೀಸ್ ಮಹಾ ನಿರ್ದೇಶಕರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.ರಾಜ್ಯ ಸರ್ಕಾರವು ಕೇಂದ್ರ ಸರ್ಕಾರದ ಅಸಹಾಕಾರದ ನಡುವೆಯೂ ರಾಜ್ಯದ ರೈತರಿಗೆ ಅನಾನುಕೂಲ ಆಗದಂತೆ ಅಗತ್ಯ ಕ್ರಮ ಕೈಗೊಳ್ಳುತ್ತಿದೆ. ಈ ನಡುವೆ ರಸ ಗೊಬ್ಬರದ ಕೃತಕ ಅಭಾವ ಸೃಷ್ಟಿಸಿ ದುರ್ಲಾಭಮಾಡಿಕೊಳ್ಳಲು ಕಾಳಸಂತೆಕೋರರು ಪ್ರಯತ್ನಿಸುತ್ತಿರುವ ದೂರುಗಳು ಬಂದಿವೆ. ಈ ಬಗ್ಗೆ ತೀವ್ರ ನಿಗಾ ವಹಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.ವಿಧಾವಿಧಾನಸೌಧದ ತಮ್ಮ ಕಚೇರಿಯಲ್ಲಿ ಸಚಿವರು ಮತ್ತು ಶಾಸಕರ ಜೊತೆ ಸಭೆ ನಡೆಸಿ ತ್ತಿದ್ದ ಸಿದ್ದರಾಮಯ್ಯ ಅವರು ನಡುವೆಯೇ ರಾಜ್ಯ ಪೊಲೀಸ್ ಮಹ ನಿರ್ದೇಶಕರಿಗೆ ದೂರವಾಣಿ ಮೂಲಕ ಮಾತನಾಡಿ ಸ್ಪಷ್ಟ ಸೂಚನೆ ನೀಡಿದರು ಎಂದು ತಿಳಿದು ಬಂದಿದೆ.
ಜಿಲ್ಲೆ ಮತ್ತು ತಾಲೂಕು, ಹೋಬಳಿ ಎಲ್ಲ ರಸಗೊಬ್ಬರಕ್ಕೆ ಕೃತಕ ಅಭಾವ ಸೃಷ್ಟಿಯಾಗಬಾರದು. ಈ ರೀತಿ ಅಭಾವ ಸೃಷ್ಟಿಸುತ್ತಿರುವವರ ಬಗ್ಗೆ ತೀವ್ರ ನಿಗಾ ಇಟ್ಟು ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದ್ದಾರೆ ಎಂದು ಮುಖ್ಯಮಂತ್ರಿಗಳ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.



