ರಾಜ್ಯ ಉನ್ನತ ಶಿಕ್ಷಣ ಇಲಾಖೆಯು ತನ್ನ ವ್ಯಾಪ್ತಿಯ ಎಲ್ಲ ಸಾರ್ವಜನಿಕ, ಖಾಸಗಿ ವಿಶ್ವ ವಿದ್ಯಾಲಯಗಳು, ಸರ್ಕಾರಿ, ಖಾಸಗಿ ಹಾಗೂ ಅನುದಾನಿತ ಪದವಿ ಹಾಗೂ ಪಾಲಿಟೆಕ್ನಿಕ್ ಕಾಲೇಜುಗಳಲ್ಲಿ ಸಿಸಿಟಿವಿ ಅಳವಡಿಕೆ ಕಡ್ಡಾಯಗೊಳಿಸಿ ಸುತ್ತೋಲೆ ಹೊರಡಿಸಿದೆ.ಈಗಾಗಲೇ ರಾಜ್ಯದ ಎಂಜಿನಿಯರಿಂಗ್ ಕಾಲೇಜುಗಳಲ್ಲಿ ಸಿಸಿಟಿವಿ ಅಳವಡಿಕೆ ಕಡ್ಡಾಯ ಮಾಡಿದ್ದ ಇಲಾಖೆ ಇದನ್ನು ಇದೀಗ ಪದವಿ, ಪಾಲಿಟೆಕ್ನಿಕ್ ಕಾಲೇಜು ಗಳಿಗೂ ವಿಸ್ತರಿಸಿದೆ. ರಾಜ್ಯದ ಶಾಲಾ-ಕಾಲೇಜುಗಳಲ್ಲಿ ವಿದ್ಯಾರ್ಥಿಗಳು ಮಾದಕ ದ್ರವ್ಯಗಳ ವ್ಯಸನ, ರ್ರಾಗಿಂಗ್ ಹಾಗೂ ಲೈಂಗಿಕ ದೌರ್ಜನ್ಯ ಸೇರಿ ಇನ್ನಿತರ ಅಕ್ರಮ, ಅನೈತಿಕ ಚಟುವಟಿಕೆಗಳಲ್ಲಿ ಭಾಗಿಯಾಗುತ್ತಿ ರುವುದು ಕಂಡು ಬರುತ್ತಿರುವ ಹಿನ್ನೆಲೆಯಲ್ಲಿಇದರ ನಿಯಂತ್ರಣಕ್ಕೆ ಸಿಸಿಟಿವಿ ಅಥವಕೆ ಕಡ್ಡಾಯಗೊಳಿಸಲಾಗಿದೆ. ವಿವಿಗಳು ಹಾ ಕಾಲೇಜುಗಳ ಪ್ರಾಂಶು ಪಾಲರು ಸಿಸಿಸಿಎ ಅಳವಡಿಕೆ ಬಗ್ಗೆ ಕ್ರಮ ಕೈಗೊಳ್ಳಬೇಕು. ಈಗಾಗಲೇ ಸಿಸಿಟಿವಿ ಅಳವಡಿಕೆ ಆಗಿರುವ ಕಾಲೇಜುಗಳಲ್ಲಿ ಅವುಗಳ ಕಾರ್ಯನಿರ್ವ ಹಿಸುತ್ತಿರುವ ವಿವರಗಳನ್ನು ಜು.21ರೊಳಗೆ ಮಾಹಿತಿ ಒದಗಿಸುವಂತೆ ಕಾಲೇಜು ಶಿಕ್ಷಣ ಇಲಾಖೆ ನಿರ್ದೇಶಕರು ಸೂಚಿಸಿದ್ದಾರೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.



