ಮಾಜಿ ಸಚಿವ ಮತ್ತು ಹಿರಿಯ ಬಿಜೆಪಿ ನಾಯಕ ಜೆ.ಸಿ ಮಾಧುಸ್ವಾಮಿ ಕಾಂಗ್ರೆಸ್ ಸೇರ್ತಾರೆ ಎಂಬ ಮಾತುಗಳ ಮಧ್ಯೆಯೇ ಮಧುಸ್ವಾಮಿ ಕುತೂಹಲಕಾರಿ ಹೇಳಿಕೆ ನೀಡಿ ಸುದ್ದಿಯಲ್ಲಿದ್ದಾರೆ. ತುಮಕೂರಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿ, ನಾನು ಸಂತೆಯಲ್ಲಿ ಕಳೆದ ಮಗು, ಯಾರು ಕೈ ಹಿಡಿದು ಬಸ್ ಹತ್ತಿಸುತ್ತಾರೋ ಅವರ ಜೊತೆ ಹೋಗುತ್ತೇನೆ ಎಂದು ಹೇಳುವ ಮೂಲಕ ಬಿಜೆಪಿ ಪಕ್ಷ ಸರಿಯಾಗಿ ನಡೆಸಿಕೊಳ್ಳದಿದ್ದರೆ ಕಾಂಗ್ರೆಸ್ ಪಕ್ಷಕ್ಕೆ ಸೇರುತ್ತೇನೆ ಎಂಬ ಸಂದೇಶವನ್ನು ಪರೋಕ್ಷವಾಗಿ ಸ್ಪಷ್ಟಪಡಿಸಿದ್ದಾರೆ. ಇನ್ನು ರಾಜಕೀಯ ನಿವೃತ್ತಿ ತೆಗೆದುಕೊಳ್ಳುವುದಿಲ್ಲ, ಮುಂದಿನ ಚುನಾವಣೆಯಲ್ಲಿ ಚಿಕ್ಕನಾಯಕನಹಳ್ಳಿ ಕ್ಷೇತ್ರದಿಂದ ಸ್ಪರ್ಧೆ ಮಾಡುತ್ತೇನೆ ಎಂದು ಹೇಳಿದ್ದಾರೆ.
ಇತ್ತೀಚಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯರನ್ನು ಮಧುಸ್ವಾಮಿ ಭೇಟಿಯಾಗಿದ್ದು ಚರ್ಚೆಗೆ ಗ್ರಾಸವಾಗಿತ್ತು. ಅದೇ ವೇಳೆ ತಮ್ಮ ಭೇಟಿಗೆ ಹೆಚ್ಚಿನ ಪ್ರಾಮುಖ್ಯತೆ ನೀಡುವ ಅಗತ್ಯವಿಲ್ಲ ಎಂದು ಹೇಳಿದ್ದ ಅವರು, ತಮ್ಮ ಸಮಾಜದ ಹಾಸ್ಟೆಲ್ವೊಂದರ ವಿಷಯಕ್ಕೆ ಸಂಬಂಧಿಸಿದಂತೆ ಸಿಎಂ ಅವರನ್ನು ಭೇಟಿಯಾಗಿದ್ದು, ರಾಜಕೀಯದ ಚರ್ಚೆ ನಡೆದಿಲ್ಲ, ಅವರು ತನ್ನನ್ನು ಪಕ್ಷಕ್ಕೆ ಆಹ್ವಾನಿಸಿಲ್ಲ ಮತ್ತು ತಾನು ಅದರ ಬಗ್ಗೆ ಪ್ರಸ್ತಾಪವೂ ಮಾಡಿಲ್ಲ ಎಂದು ಮಾಧುಸ್ವಾಮಿ ಹೇಳಿದರು. ಮುಚ್ಚುಮರೆ ಮಾಡಿ ಮಾತಾಡುವ ಜಾಯಮಾನ ತನ್ನದಲ್ಲ, ಅಷ್ಟಾಗಿಯೂ ಸಿದ್ದರಾಮಯ್ಯರನ್ನು ಒಂದು ಪಕ್ಷದ ಮುಖಂಡರನ್ನಾಗಿ ನೋಡೋದು ಯಾಕೆ? ಅವರು ಈ ರಾಜ್ಯದ ಮುಖ್ಯಮಂತ್ರಿ ಎಂದು ಮಾಧುಸ್ವಾಮಿ ಹೇಳಿದ್ದರು. ಆದರೆ ಈಗ ಮಧುಸ್ವಾಮಿ ಕೈ ಹಿಡಿಯೋದು ಪಕ್ಕ ಎಂಬ ಸಂದೇಶ ನೀಡುವ ಮೂಲಕ ಸಂಚಲನ ಸೃಷ್ಟಿಸಿದ್ದಾರೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.



