ನವದೆಹಲಿ: ದೇಶದ 15ನೇ ಉಪರಾಷ್ಟ್ರಪತಿಯಾಗಿ ಸಿ.ಪಿ ರಾಧಾಕೃಷ್ಣನ್ (CP Radhakrishan) ಅವರಿಂದು ಗಣ್ಯರ ಸಮ್ಮುಖದಲ್ಲಿ ಪ್ರಮಾಣವಚನ ಸ್ವೀಕರಿಸಿದರು.ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ, ರಾಜನಾಥ್ ಸಿಂಗ್, ನಿರ್ಗಮಿತ ರಾಜ್ಯಪಾಲರಾದ ಜಗದೀಪ್ ಧನ್ಕರ್ ಸೇರಿದಂತೆ ನೂರಾರು ಗಣ್ಯರ ಸಮ್ಮುಖದಲ್ಲಿ ಇಂದು ಬೆಳಗ್ಗೆ 10ಗಂಟೆ ಸುಮಾರು ಪ್ರಮಾಣ ವಚನ ಸ್ವೀಕರಿಸಿದರು. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪ್ರಮಾಣವಚನ ಬೋಧಿಸಿದರು.
ರಾಜೀನಾಮೆ ಬಳಿಕ ಕಾಣಿಸಿಕೊಂಡ ಧನಕರ್
ಇನ್ನೂ ಪ್ರಮಾಣವಚನ ಕಾರ್ಯಕ್ರಮದಲ್ಲಿ ಮಾಜಿ ಉಪರಾಷ್ಟ್ರಪತಿ, ರಾಜೀನಾಮೆ ನೀಡಿದ ಉಪರಾಷ್ಟ್ರಪತಿ ಹಾಗೂ ಪ್ರಸ್ತುತ ಉಪರಾಷ್ಟ್ರಪತಿಗಳು ಒಟ್ಟಿಗೆ ಕಾಣಿಸಿಕೊಂಡಿದ್ದಾರೆ. ಜಗದೀಪ್ ಧನಕರ್ ರಾಜೀನಾಮೆ ಬಳಿಕ ಮೊದಲ ಬಾರಿ ಕಾರ್ಯಕ್ರಮದಲ್ಲಿ ಕಾಣಿಸಿಕೊಂಡಿದ್ದು, ಹಲವರ ಅಚ್ಚರಿಗೆ ಕಾರಣವಾಗಿದೆ.
ಇದರೊಂದಿಗೆ ಒಡಿಶಾ ಸಿಎಂ ಮೋಹನ್ ಚರಣ್ ಮಾಝಿ, ಕರ್ನಾಟಕ ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್, ಆಂಧ್ರ ಸಿಎಂ ಚಂದ್ರಬಾಬು ನಾಯ್ಡು, ಪಂಜಾಬ್ ರಾಜ್ಯಪಾಲ ಮತ್ತು ಚಂಡೀಗಢ ಆಡಳಿತಾಧಿಕಾರಿ ಗುಲಾಬ್ ಚಂದ್ ಕಟಾರಿಯಾ, ಜಾರ್ಖಂಡ್ ರಾಜ್ಯಪಾಲ ಸಂತೋಷ್ ಗಂಗ್ವಾರ್ ಮತ್ತು ಮಧ್ಯಪ್ರದೇಶ ಸಿಎಂ ಮೋಹನ್ ಯಾದವ್ ಸೇರಿದಂತೆ ಹಲವರು ಭಾಗಿಯಾಗಿದ್ದಾರೆ.ಜಗದೀಪ್ ಧನ್ಕರ್ ಅವರ ರಾಜೀನಾಮೆಯಿಂದ ತೆರವಾಗಿದ್ದ ಉಪರಾಷ್ಟ್ರಪತಿ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಸ್ಪಷ್ಟ ಬಹುಮತ ಪಡೆಯುವ ಮೂಲಕ ಸಿ.ಪಿ ರಾಧಾಕೃಷ್ಣನ್ ಗೆಲುವು ಸಾಧಿಸಿದ್ದರು. ರಾಧಾಕೃಷ್ಣನ್ ಅವರು 452 ಮೊದಲ ಪ್ರಾಶಸ್ತ್ಯದ ಮತಗಳನ್ನ ಪಡೆದು ಗೆಲುವು ಸಾಧಿಸಿದ್ರೆ, ಪ್ರತಿಸ್ಪರ್ಧಿ ಸುರ್ದಶನ್ ರೆಡ್ಡಿ 300 ಮತಗಳನ್ನು ಪಡೆದು ಪರಾಭವಗೊಂಡಿದ್ದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.







