ಬೆಂಗಳೂರು: ಅನಧಿಕೃತವಾಗಿ ತ್ಯಾಜ್ಯವನ್ನು ಸುರಿಯುವವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದು ಎಂದು ಪೌರಾಡಳಿತ ಸಚಿವ ರಹೀಂ ಖಾನ್ ತಿಳಿಸಿದರು. ವಿಧಾನ ಪರಿಷತ್ ಸದಸ್ಯರಾದ ಗೋವಿಂದರಾಜು ಮಂಡಿಸಿದ ಗಮನ ಸೆಳೆಯುವ ಸೂಚನೆಗೆ ಉತ್ತರಿಸಿದ ಸಚಿವರು, ಸ್ವಚ್ಛ ಭಾರತ್ ಮಿಷನ್ ಯೋಜನೆಯಡಿ ಕೋಲಾರದ ಕೆಂದಟ್ಟಿ ಗ್ರಾಮದ ಹತ್ತು ಎಕರೆ ಜಮೀನಿನಲ್ಲಿ ಘನತ್ಯಾಜ್ಯ ನಿರ್ವಹಣಾ ಘಟಕವನ್ನು ಸ್ಥಾಪಿಸಲಾಗಿದ್ದು, ಕೋಲಾರ ನಗರಸಭೆ ವ್ಯಾಪ್ತಿಯ ಘನತ್ಯಾಜ್ಯ ನಿರ್ವಹಣೆಯನ್ನು ಆ ಮೂಲಕ ನಿರ್ವಹಿಸಲಾಗುತ್ತಿದೆ. ಪ್ರತಿ ನಿತ್ಯ 35 ಟನ್ ಹಸಿ ತ್ಯಾಜ್ಯವನ್ನು ಸಂಸ್ಕರಿಸಿ ಕೋಲಾರ ಅಗ್ರಿಗೋಲ್ಡ್ ಬ್ರಾಂಡ್ ಹೆಸರಿನಲ್ಲಿ ಗೊಬ್ಬರ ಮಾರಾಟ ಮಾಡಲಾಗುತ್ತಿದೆ. ಇದರ ಜೊತೆಗೆ ಮಣಿಘಟ್ಟ ರಸ್ತೆಯ ಬಳಿ ಹಾಗೂ ಕೆಂದಟ್ಟಿಯ ಸಂಗ್ರಹಣಾ ಘಟಕದಲ್ಲಿ ತ್ಯಾಜ್ಯವನ್ನು ಸಂಸ್ಕರಿಸಿ ಮರು ಬಳಕೆದಾರರಿಗೆ ಮಾರಾಟ ಮಾಡಿ ಬಂದ ಹಣವನ್ಬು ನಗರಸಭೆಗೆ ಪಾವತಿ ಮಾಡಿಕೊಳ್ಳಲಾಗುತ್ತಿದೆ ಎಂದರು
ನಿರಂತರವಾಗಿ ಸಾರ್ವಜನಿಕರಿಗೆ ಈ ಬಗ್ಗೆ ಅರಿವು ಮೂಡಿಸಲಾಗುತ್ತಿದೆ. ಹಾಗಿದ್ದೂ ಅನಧಿಕೃತವಾಗಿ ಹೆಚ್ಚು ತ್ಯಾಜ್ಯ ಸುರಿಯುತ್ತಿರುವ ಸ್ಥಳಗಳನ್ನು ಗುರುತಿಸಿ ಅಲ್ಲಿ ಸಿಸಿ ಕ್ಯಾಮರಾಗಳನ್ನು ಅಳವಡಿಸಲಾಗಿದೆ. ಜೊತೆಗೆ ದಂಡ ಸಹ ವಿಧಿಸಲಾಗುತ್ತಿದ್ದು, ಮುಂದುವರೆದು ತಪ್ಪಿತಸ್ಥರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲು ಕ್ರಮ ವಹಿಸಲಾಗುತ್ತಿದೆ ಎಂದರು
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.







