ಬೆಂಗಳೂರು: ರೇಣುಕಾಸ್ವಾಮಿ ಕುಟುಂಬದ ಪರ ನಟಿ ರಮ್ಯಾ ನಿಂತಿರುವುದು ದರ್ಶನ್ ಫ್ಯಾನ್ಸ್ ಕೋಪಕ್ಕೆ ಕಾರಣವಾಗಿದ್ದು, ಈ ವಿವಾದ ಇದೀಗ ಸ್ಯಾಂಡಲ್‌ವುಡ್‌ನಲ್ಲಿ ಬಿರುಗಾಳಿ ಎಬ್ಬಿಸಿದೆ.ಈ ನಡುವೆ ದರ್ಶನ್ ಅಭಿಮಾನಿಗಳಿಗಾಗಿಯೇ ತೆರೆಯಲಾಗಿರುವ ಅಫಿಶಿಯಲ್ ಫ್ಯಾನ್ಸ್ ಪೇಜ್ ನಲ್ಲಿ ʻಡಿ ಬಾಸ್’ ಮೇಲೆ ಅಭಿಮಾನ ಇರುವ ಯಾರೊಬ್ಬರೂ ಯಾವುದೇ ವಿವಾದಕ್ಕೂ ಕಿವಿಗೊಡದಂತೆ ಮನವಿ ಮಾಡಲಾಗಿದೆ.ಡಿ ಬಾಸ್ ಮೇಲೆ ಗೌರವವಿರುವ ಯಾವೊಬ್ಬ ಅಭಿಮಾನಿ ಕೂಡ ಯಾವುದೇ ವಿವಾದಕ್ಕೆ ಕಿವಿಗೊಡಬೇಡಿ. ಯಾವುದಕ್ಕೂ ರಿಯಾಕ್ಟ್ ಮಾಡಬೇಡಿ. ಯಾರಿಗೂ ಮೆಸೇಜ್ ಮಾಡಬೇಡಿ. ಪ್ರಚಾರಕ್ಕೆ ಆಗಲಿ, ಹುನ್ನಾರ ಮಾಡಲಿ, ಯಾರು ಏನೇ ಅಂದರೂ ತಲೆ ಕೆಡಸಿಕೊಳ್ಳಬೇಡಿ.
ದರ್ಶನ್ ಫ್ಯಾನ್ಸ್ ಏನೆಂದು, ಮಾಡಿರುವ ಸಮಾಜಮುಖಿ ಕಾರ್ಯಗಳು ಸಾಕ್ಷಿ. ಅವಮಾನಗಳು ಇನ್ನಷ್ಟು ಕೆಲಸ ಮಾಡಲು ಮೆಟ್ಟಿಲು ಆಗಲಿ ಎಂದು ಮನವಿ ಮಾಡಲಾಗಿದೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.



