ಸಚಿವ ಡಿ. ಸುಧಾಕರ್‌ಗೆ ಶಸ್ತ್ರ ಚಿಕಿತ್ಸೆ; ಆರೋಗ್ಯ ವಿಚಾರಿಸಲು ಸದ್ಯಕ್ಕಿಲ್ಲ ಅವಕಾಶ
ಜಿಲ್ಲಾ ಉಸ್ತುವಾರಿ ಸಚಿವರಾದ ಡಿ. ಸುಧಾಕರ್ ಅವರು ಶಸ್ತ್ರಚಿಕಿತ್ಸೆಗೆ ಒಳಗಾಗಿರುವ ಹಿನ್ನೆಲೆಯಲ್ಲಿ ವೈದ್ಯರು ಕಟ್ಟುನಿಟ್ಟಿನ ವಿಶ್ರಾಂತಿ ಸೂಚಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಆಸ್ಪತ್ರೆಯಲ್ಲಿ ಯಾರಿಗೂ ಭೇಟಿ ಮಾಡಲು ಅವಕಾಶ ಇರುವುದಿಲ್ಲ.
ವೈದ್ಯರ ಸಲಹೆಯ ಮೇರೆಗೆ ಮುಂದಿನ ಒಂದು ವಾರದವರೆಗೆ ಯಾವುದೇ ಭೇಟಿ ಇರುವುದಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ.
ಈ ಹಿನ್ನೆಲೆ ಸಚಿವರ ಅಭಿಮಾನಿಗಳು, ಬೆಂಬಲಿಗರು ಹಾಗೂ ಸಾರ್ವಜನಿಕರು ದಯವಿಟ್ಟು ಸಹಕರಿಸಿ ಆಸ್ಪತ್ರೆಗೆ ಭೇಟಿ ನೀಡುವುದನ್ನು ತಪ್ಪಿಸಬೇಕೆಂದು ಮನವಿ ಮಾಡಲಾಗಿದೆ.
ಸಚಿವರ ಆರೋಗ್ಯ ಶೀಘ್ರ ಸುಧಾರಿಸಲಿ ಎಂದು ಅಭಿಮಾನಿಗಳು ಮತ್ತು ಸಾರ್ವಜನಿಕರು ಹಾರೈಸಿದ್ದಾರೆ.
