ಚಿತ್ರದುರ್ಗ: ರಾಜ್ಯದಲ್ಲಿ ನಾಲ್ವಡಿ ಕೃಷ್ಣರಾಜ ಒಡೆಯರ್ ಮಾಡಿದಷ್ಟು ಅಭಿವೃದ್ಧಿ ಕೆಲಸ ಯಾರು ಮಾಡಿಲ್ಲ ಎಂದು ಹೇಳುವ ಮೂಲಕ ಪರೋಕ್ಷವಾಗಿ ಯತೀಂದ್ರ ಸಿದ್ದರಾಮಯ್ಯ ಅವರಿಗೆ ಸಚಿವ ಡಿ.ಸುಧಾಕರ್ ತಿರುಗೇಟು ನೀಡಿದ್ದಾರೆ.
ನಗರದ ಜಿಲ್ಲಾ ಪಂಚಾಯತ್ ಬಳಿಯಿರುವ ಅಕ್ಕ ಕೆಫೆ ಉದ್ಘಾಟಿಸಿ, ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಕೆ ಆರ್ ಎಸ್ ಜಲಾಶಯಕ್ಕೆ ಬುನಾದಿ ಹಾಕಿದ್ದೆ ಟಿಪ್ಪು ಎಂಬ ಸಚಿವ ಮಹದೇವಪ್ಪ ಹೇಳಿಕೆಗೆ ಪ್ರತಿಕ್ರಿಯಿಸಿ, ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ರಾಜ್ಯದ ಅಭಿವೃದ್ಧಿಗಾಗಿ ಮನೆಯಲ್ಲಿದ್ದ ಒಡವೆಯನ್ನು ಅಡವಿಟ್ಟು ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದಾರೆ. ಅವರಂತಹ ಕೆಲಸಗಳನ್ನು ಯಾರು ಮಾಡಲು ಆಗಲ್ಲ. ಇತಿಹಾಸದ ಬಗ್ಗೆ ಮಾತಾಡೋಕೆ ತಜ್ಞರಿದ್ದಾರೆ. ಅವರು ಮಾತಾಡುತ್ತಾರೆ ಅದರ ಬಗ್ಗೆ ನಾನು ಹೆಚ್ಚು ಮಾತಾಡಲ್ಲ ಎಂದು ಮಹದೇವಪ್ಪ ಹೇಳಿಕೆಗೆ ಟಾಂಗ್ ಕೊಟ್ರು. ಇನ್ನು ಚಿತ್ರದುರ್ಗ ನೂತನ ಜಿಲ್ಲಾಧಿಕಾರಿ ಕಟ್ಟಡವನ್ನು ಮೆಡಿಕಲ್ ಕಾಲೇಜಿಗೆ ವರ್ಗಾಯಿಸುವ ಬಗ್ಗೆ ಜಿಲ್ಲೆಯ ಶಾಸಕರು ತೀರ್ಮಾನ ಮಾಡಿದ್ದೇವೆ. ಆ ಕಟ್ಟಡ ಅವೈಜ್ಞಾನಿಕವಾಗಿದೆ ಎಂಬ ದೂರುಗಳು ಕೇಳಿ ಬಂದ ಹಿನ್ನಲೆ ಕಟ್ಟಡವನ್ನು ಮೆಡಿಕಲ್ ಕಾಲೇಜಿಗೆ ನೀಡಿ ಅಲ್ಲಿ ಹಾಸ್ಟೆಲ್, ಕ್ಯಾಂಪಸ್ ನಿರ್ಮಾಣ ಮಾಡಲು ಉದ್ದೇಶಿಸಲಾಗಿದೆ. ಆಸ್ಪತ್ರೆ ಆವರಣದಲ್ಲಿ ಆಸ್ಪತ್ರೆಯನ್ನು ನಿರ್ಮಾಣ ಮಾಡಲಾಗುತ್ತಿದೆ ಎಂದು ಹೇಳಿದರು. ಇನ್ನು ಜಿಲ್ಲಾಧಿಕಾರಿ ಕಚೇರಿಯನ್ನು ಈಗಿರುವ ಜಿಲ್ಲಾಧಿಕಾರಿ ನಿವಾಸದ ಜಾಗದಲ್ಲಿ ಯೋಜನೆ ರೂಪಿಸಲಾಗುತ್ತಿದೆ. ಸಾರ್ವಜನಿಕರಿಗೆ ತೊಂದರೆ ಆಗಬಾರದು ಎಂಬ ಉದ್ದೇಶದಿಂದ ಈ ನಿರ್ಧಾರ ಮಾಡಿದ್ದೇವೆ ಎಂದು ಹೇಳಿದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.



