ನವದೆಹಲಿ: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಸೇರಿ 7 ಆರೋಪಿಗಳಿಗೆ ಕರ್ನಾಟಕ ಹೈಕೋರ್ಟ್ ನೀಡಿರುವ ಜಾಮೀನು ರದ್ದು ಕೋರಿ ಬೆಂಗಳೂರು ಪೊಲೀಸರು ಸಲ್ಲಿಸಿರುವ ಮೇಲ್ಮನವಿ ಅರ್ಜಿ ವಿಚಾರಣೆ ಇಂದು ಸುಪ್ರೀಂನಲ್ಲಿ ನಡೆಯಲಿದ್ದು, ಬರಲಿದೆ. ಹೀಗಾಗಿ, ದರ್ಶನ್‌ಗೆ ಟೆನ್ಸನ್ ಶುರುವಾಗಿದೆ.2024ರ ಜೂ.8ರಂದು ನಡೆದ ರೇಣುಕಾ ಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್, ಪವಿತ್ರಾ ಗೌಡ ಸೇರಿದಂತೆ 17 ಮಂದಿಯನ್ನು ಪೊಲೀಸರು ಬಂಧಿಸಿದ್ದರು. ಬಂಧನವಾಗಿ 6 ತಿಂಗಳ ಬಳಿಕ, 2024ರ ಡಿ.13 ರಂದು ಹೈಕೋರ್ಟ್ ಜಾಮೀನು ನೀಡಿತ್ತು.
ದರ್ಶನ್, ಪವಿತ್ರಾ ಸೇರಿ 7 ಮಂದಿಗೆ, ವಿಚಾರಣಾಧೀನ ನ್ಯಾಯಾಲಯ ಇತರರಿಗೆ ಜಾಮೀನು ಮಂಜೂರು ಮಾಡಿತ್ತು. 7 ಮಂದಿಗೆ ಜಾಮೀನು ಪ್ರಶ್ನಿಸಿ ಬೆಂಗಳೂರು ನಗರ ಪೊಲೀಸರು ಸುಪ್ರೀಂಕೋರ್ಟ್‌ಗೆಮೇಲ್ಮನವಿ ಸಲ್ಲಿಸಿದ್ದರು.ಕಳೆದ ಗುರುವಾರ ಅರ್ಜಿ ವಿಚಾರಣೆ ನಡೆಸಿದ್ದ ಸುಪ್ರೀಂ ನ್ಯಾ. ಜೆ.ಬಿ.ಪಾರ್ದಿವಾಲಾ ನೇತೃತ್ವದ ವಿಭಾಗೀಯ ಪೀಠ, ಕರ್ನಾಟಕ ಹೈಕೋರ್ಟ್ ನೀಡಿರುವ ಜಾಮೀನಿನ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿತ್ತು. ಪ್ರಕರಣದಲ್ಲಿ ಹೈಕೋರ್ಟ್ ತನ್ನ ವಿವೇಚ ನೆಯನ್ನು ಸರಿಯಾಗಿ ಬಳಸಿಲ್ಲ ಎಂದು ಅಭಿಪ್ರಾಯಪಟ್ಟು, ವಿಚಾರಣೆ ಯನ್ನು ಜು.22, ಮಂಗಳವಾರಕ್ಕೆ ಮುಂದೂಡಿತ್ತು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.



