ಚಿತ್ರದುರ್ಗ ಮೂಲದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಇಂದು ದರ್ಶನ್, ಪವಿತ್ರಾ ಗೌಡ ಹಾಗೂ ಇತರರನ್ನು64ನೇಸೆಷನ್ಸ್ಕೋರ್ಟ್ನಲ್ಲಿವಿಚಾರಣೆನಡೆಸಲಾಗಿದೆ.ಆದರೆಕೇಸಿನಲ್ಲಿ ಎ10 ವಿನಯ್ , ಎ15 ,ಕಾರ್ತಿಕ್ ಹಾಗೂ ಎ 16 ಕೇಶವಮೂರ್ತಿ ಮತ್ತು ಎ17 ನಿಖಿಲ್ ಕೋರ್ಟ್ಗೆ ಹಾಜಾರಾಗಿಲ್ಲ ಹೀಗಾಗಿ, ಸೆಪ್ಟೆಂಬರ್9 ಕ್ಕೆ ಮುಂದಿನ ದಿನಾಂಕ ವಿಚಾರಣೆಯನ್ನು ನಿಗದಿಪಡಿಸಲಾಗಿದೆ.ಆ ದಿನ ಪ್ರಕರಣದ ಎಲ್ಲಾ ಆರೋಪಿಗಳು ಕಡ್ಡಾಯವಾಗಿ ಹಾಜರು ಇರಬೇಕು ಎಂದು ನಿರ್ದೇಶಿಸಿದೆ.ಹೈಕೋರ್ಟ್ ಜಾಮೀನು ಆದೇಶ ರೀತಿಯ ಬಗ್ಗೆ ಆಕ್ಷೇಪಿಸಿದ್ದ ನ್ಯಾಯಪೀಠ ಲಿಖಿತ ವಾದಮಂಡನೆಗಳನ್ನು ಸಲ್ಲಿಸುವಂತೆ ಎರಡೂ ಕಡೆ ವಕೀಲರಿಗೆ ಸೂಚಿಸಿತ್ತು. ದರ್ಶನ್ ವಿರುದ್ಧದ ಹಳೆಯ ಕೇಸ್ ಗಳ ಬಗ್ಗೆಯೂ ದಾಖಲೆ ಸಲ್ಲಿಕೆ ಮಾಡುವಂತೆ ಕೇಳಿತ್ತು. ಪ್ರಾಸಿಕ್ಯೂಷನ್ ಪರ ವಕೀಲರಿಂದ ಸುಪ್ರೀಂಕೋರ್ಟ್ ಗೆ ಸಲ್ಲಿಕೆಯಾಗಿದೆ.
ಚಾರ್ಜ್ ಫ್ರೇಮ್
ಚಾರ್ಜ್ ಫ್ರೇಮ್ ಸಲುವಾಗ ಕೋರ್ಟ್ ಎರಡು ಕಡೆಯ ವಾದ ಆಲಿಸಲಿದೆ. ಚಾರ್ಜ್ ಫ್ರೇಮ್ ಎಂದರೆ ದೋಷಾರೋಪ ಹೊರಿಸುವುದು. ಯಾವ ಯಾವ ಸೆಕ್ಷನ್ಗಳಡಿ ಆರೋಪ ಇದೆ ಎಂದು ಕೋರ್ಟ್ನಲ್ಲಿ ಜಡ್ಜ್ ಆರೋಪ ಹೊರಿಸುತ್ತಾರೆ. ಆ ಸೆಕ್ಷನ್ಗಳ ಬಗ್ಗೆ ಕೋರ್ಟ್ನಲ್ಲಿ ಇನ್ನೂ ಮುಂದೆ ವಾದ ನಡೆಯುತ್ತೆ. ಹೀಗಾಗಿ ಆರೋಪಿಗಳಿಗೆ ಆತಂಕ ಎದುರಾಗಿದೆ.ಈಗಾಗಲೇ ಸುಪ್ರೀಂ ಕೋರ್ಟ್ ಜಾಮೀನು ಮೇಲ್ಮನವಿ ವಿಚಾರಣೆ ನಡೆಸಿ ಆದೇಶ ಕಾಯ್ದಿರಿಸಿದೆ. ಮೇಲ್ಮನವಿ ಅರ್ಜಿ ವಿಚಾರಣೆ ವೇಳೆ ಸುಪ್ರೀಂ ಕೋರ್ಟ್ ಟ್ರಯಲ್ ಬಗ್ಗೆ ಪ್ರಶ್ನಿಸಿತ್ತು. ವಿಚಾರಣೆ ವೇಳೆ ಎಷ್ಟು ದಿನದಲ್ಲಿ ಟ್ರಯಲ್ ಆರಂಭ ಮಾಡ್ತೀರಾ ಎಂದು ಪ್ರಶ್ನೆ ಮಾಡಿತ್ತು. ಆಗ ಸರ್ಕಾರದ ಪರ ವಕೀಲರು ಆರು ತಿಂಗಳಲ್ಲಿ ವಿಚಾರಣೆ ಮುಗಿಸುತ್ತೇವೆ ಎಂದು ಉತ್ತರಿಸಿದ್ದರು. ಈ ಹಿನ್ನೆಲೆಯಲ್ಲಿ ಇಂದು ಟ್ರಯಲ್ ದಿನಾಂಕ ನಿಗದಿ ಆಗುವ ಸಾಧ್ಯತೆ ಇತ್ತು. 64ನೇ ಸೆಷನ್ಸ್ ಕೋರ್ಟ್ನಲ್ಲಿ ನ್ಯಾಯಾಧೀಶರಾದ ಐ.ಪಿ.ನಾಯ್ಕ್ ಅವರು ವಿಚಾರಣೆಯನ್ನು ಸೆಪ್ಟೆಂಬರ್ 9ಕ್ಕೆ ಮುಂದೂಡಿದ್ದಾರೆ
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.







