ರೇಣುಕಾ ಸ್ವಾಮಿ ಕೊಲೆ ಕೇಸ್ ಆರೋಪಿ ನಟ ದರ್ಶನ್ ಅವರಿಗೆ ಈ ಬಾರಿ ಜೈಲಿನಲ್ಲಿ ಯಾವುದೇ ಸವಲತ್ತು ಸಿಗುತ್ತಿಲ್ಲ. ಇದರಿಂದ ಅವರು ಹೈರಾಣವಾಗಿ ಹೊಗಿದ್ದಾರೆ. ಈ ಕಾರಣದಿಂದಲೇ ದರ್ಶನ್ ಅವರು ಜಡ್ಜ್ ಎದುರು ಬೇಡಿಕೆ ಒಂದನ್ನು ಇಟ್ಟಿದ್ದಾರೆ. ‘ನನಗೆ ವಿಷ ನೀಡಲು ಆದೇಶಿಸಿ’ ಎಂದು ಜಡ್ಜ್ ಎದುರೇ ಕೇಳಿದ್ದಾರೆ. ದರ್ಶನ್ ಬೇಡಿಕೆ ಕೇಳಿ ಜಡ್ಜ್ ಒಮ್ಮೆ ಶಾಕ್ ಆದರು. ‘ಹಾಗೆಲ್ಲ ಕೇಳಬಾರದು’ ಎಂದು ಜಡ್ಜ್ ದರ್ಶನ್ಗೆ ಕಿವಿ ಮಾತು ಹೇಳಿದ್ದಾರೆ.ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ದರ್ಶನ್ ಕಳೆದ ವರ್ಷ ಅರೆಸ್ಟ್ ಆಗಿದ್ದರು. ಆ ಬಳಿಕ ಅವರಿಗೆ ಕರ್ನಾಟಕ ಹೈಕೋರ್ಟ್ ಜಾಮೀನು ನೀಡಿತ್ತು. ಇದನ್ನು ಕರ್ನಾಟಕ ಸರ್ಕಾರ ಸುಪ್ರೀಂಕೋರ್ಟ್ನಲ್ಲಿ ಪ್ರಶ್ನೆ ಮಾಡಿತ್ತು. ಸುಪ್ರೀಂಕೋರ್ಟ್ ದರ್ಶನ್ ಅವರ ಜಾಮೀನನ್ನು ರದ್ದು ಮಾಡಿತು. ಅಲ್ಲದೆ, ಅವರಿಗೆ ಯಾವುದೇ ವಿಶೇಷ ಸವಲತ್ತು ಸಿಗಬಾರದು ಎಂದು ಎಚ್ಚರಿಸಿತ್ತು. ಹೀಗಾಗಿ, ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ದರ್ಶನ್ ಅವರನ್ನು ಇಡಲಾಗಿದೆ. ವಿಶೇಷ ಸವಲತ್ತು ಸಿಗದಂತೆ ನೋಡಿಕೊಳ್ಳಲಾಗುತ್ತಿದೆ. ಅಲ್ಲಿನ ಕಠಿಣ ನಿಯಮಗಳಿಂದ ಅವರಿಗೆ ನರಕಯಾತನೆ ಉಂಟಾಗುತ್ತಿದೆ.ಹೆಚ್ಚುವರಿ ದಿಂಬು ಹಾಗೂ ಬೇಡ್ಶೀಟ್ಗಾಗಿ ಬೆಂಗಳೂರಿನ 57ನೇ ಸಿಸಿಹೆಚ್ ನ್ಯಾಯಾಲಯದಲ್ಲಿ ದರ್ಶನ್ ಅರ್ಜಿ ಸಲ್ಲಿಸಿದ್ದಾರೆ. ಈ ಅರ್ಜಿ ವಿಚಾರಣೆ ನಡೆದಿದೆ. ಈ ವೇಳೆ ವಿಡಿಯೋ ಕಾಲ್ ಮೂಲಕ ದರ್ಶನ್ ವಿಚಾರಣೆಗೆ ಹಾಜರಾದರು. ಆಗ ಅವರು, ಮೊದಲಿಗೆ ಕೈ ಎತ್ತಿ ‘ಒಂದು ಮನವಿ ಇದೆ’ ಎಂದು ಹೇಳಿದ್ದಾರೆ. ಮನವಿ ಏನು ಎಂದು ಕೇಳಿದಾಗ, ದರ್ಶನ್ ಕೊಟ್ಟ ಉತ್ತರ ಜಡ್ಜ್ಗೆ ಶಾಕ್ ತಂದಿತು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.







