ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಸೇರಿರುವ ನಟ ದರ್ಶನ್ ಜೈಲು ಪರಿಸ್ಥಿತಿ ಕಂಡು ಪತ್ನಿ ವಿಜಲಯಕ್ಷ್ಮಿ ಕಣ್ಣೀರಿಟ್ಟಿದ್ದಾರೆ. ಜೈಲಿನಲ್ಲಿ ಕನಿಷ್ಠ ಸೌಲಭ್ಯವೂ ಸಿಗದೆ ದರ್ಶನ್ ಜೈಲಿನಲ್ಲಿ ದಿನಗಳೆಯಲು ಕಷ್ಟ ಪಡುತ್ತಿದ್ದಾರೆ. ಪತಿ ಭೇಟಿಗೆ ಬಂದ ಪತ್ನಿ ವಿಜಯಲಕ್ಷ್ಮಿ, ದರ್ಶನ್ ಪರಿಸ್ಥಿತಿ ಕಂಡು ಕಣ್ಣೀರು ಹಾಕಿದ್ದಾರೆ ಎನ್ನಲಾಗಿದೆ. ಪರಪ್ಪನ ಅಗ್ರಹಾರದ ಸಿಬ್ಬಂದಿ ಬಳಿ ಹಾಸಿಗೆ, ದಿಂಬು, ಮಂಚಕ್ಕೆ ಅಂಗಲಾಚಿದರೂ ಜೈಲಾಧಿಕಾರಿಗಳು ಮಾತ್ರ ಶಿಸ್ತಿನಿಂದಿದ್ದಾರೆ. ಕೂರಲು ಕುರ್ಚಿಯೂ ಇಲ್ಲದ ಪತಿಯ ಸಂಕಷ್ಟಕ್ಕೆ ವಿಜಯಲಕ್ಷ್ಮಿ ಕಣ್ಣೀರು ಹಾಕಿದ್ದಾರೆ. ರೇಣುಕಾಸ್ವಾಮಿ ಪ್ರಕರಣದಲ್ಲಿ ದರ್ಶನ್ ಎರಡನೇ ಬಾರಿ ಜೈಲು ಸೇರಿದ್ದು ಒಂದು ಕಡೆಯಾದರೆ, ಪ್ರಕರಣದ ಸಹ ಆರೋಪಿಗಳು ಸಹ ದರ್ಶನ್ ವಿರುದ್ಧ ಮುನಿಸಿಕೊಂಡಿದ್ದಾರಂತೆ. ದರ್ಶನ್ ಜೊತೆಗೆ ಮಾತು, ಸ್ನೇಹ ಅಷ್ಟಕಷ್ಟೇ ಎಂದು ವರದಿಯಾಗಿದೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.







