Close Menu
  • ಪ್ರಮುಖ ಸುದ್ದಿ
    • ಅಡಿಕೆ ರೇಟ್‌
    • ಮಾರುಕಟ್ಟೆ ಧಾರಣೆ
  • ಅಪರಾಧ ಸುದ್ದಿ
  • ದಿನದ ವಿಶೇಷ
  • ನಮ್ಮ ಚಿತ್ರದುರ್ಗ
    • ಬಯಲುಸೀಮೆ ನೋಟ
What's Hot

ಮೋದಿ ಬಂದ ಮೇಲೆ ರಕ್ಷಣಾ ವ್ಯವಸ್ಥೆಯಲ್ಲಿ ಏನೆಲ್ಲ ಬದಲಾವಣೆ ಆಗಿದೆ ಗೊತ್ತೇ; ಶಾಸಕ ಎಂ.ಚಂದ್ರಪ್ಪ

ಪ್ರತಿದಿನ ಭಾರತ ಮಾತೆಯ ವೀರ ಪುತ್ರರ ಧೈರ್ಯವನ್ನು ನೆನಪಿಸಿಕೊಳ್ಳಬೇಕು – ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ

ಕಾಂತರಾಜ್ ವರದಿಯನ್ನು ಮೇಲ್ಜಾತಿಯವರು ಮೂಲೆಯಲ್ಲಿ ಕೂರಿಸಿದ್ದಾರೆ – ರಾಮಚಂದ್ರಪ್ಪ

Facebook X (Twitter) Instagram
  • ಪ್ರಮುಖ ಸುದ್ದಿ
  • ನಮ್ಮ ಚಿತ್ರದುರ್ಗ
  • ಬಯಲುಸೀಮೆ ನೋಟ
Facebook X (Twitter) Instagram
Bayaluseeme Times | ಬಯಲುಸೀಮೆ ಟೈಮ್ಸ್
  • ಪ್ರಮುಖ ಸುದ್ದಿ
    • ಅಡಿಕೆ ರೇಟ್‌
    • ಮಾರುಕಟ್ಟೆ ಧಾರಣೆ
  • ಅಪರಾಧ ಸುದ್ದಿ
  • ದಿನದ ವಿಶೇಷ
  • ನಮ್ಮ ಚಿತ್ರದುರ್ಗ
    • ಬಯಲುಸೀಮೆ ನೋಟ
Subscribe
Bayaluseeme Times | ಬಯಲುಸೀಮೆ ಟೈಮ್ಸ್
Home»ಪ್ರಮುಖ ಸುದ್ದಿ»ವಿಜ್ರಂಭಣೆ ರಭಸದಲ್ಲಿ ದಸರಾದ ಚಾರಿತ್ರಿಕ‌ ಮಹತ್ವ ಮರೆಯಾಗಬಾರದು: ಮುಖ್ಯಮಂತ್ರಿ ಸಿದ್ದರಾಮಯ್ಯ
ಪ್ರಮುಖ ಸುದ್ದಿ

ವಿಜ್ರಂಭಣೆ ರಭಸದಲ್ಲಿ ದಸರಾದ ಚಾರಿತ್ರಿಕ‌ ಮಹತ್ವ ಮರೆಯಾಗಬಾರದು: ಮುಖ್ಯಮಂತ್ರಿ ಸಿದ್ದರಾಮಯ್ಯ

Times of bayaluseemeBy Times of bayaluseemeJune 28, 2025No Comments3 Mins Read
Share WhatsApp Facebook Twitter Telegram Copy Link
Follow Us
Google News Flipboard
Share
Facebook Twitter LinkedIn Pinterest Email Copy Link

ಬೆಂಗಳೂರು ಜೂ 29: ವಿಜ್ರಂಭಣೆ ರಭಸದಲ್ಲಿ ದಸರಾದ ಚಾರಿತ್ರಿಕ‌ ಮಹತ್ವ ಮರೆಯಾಗಬಾರದು.
ಅನಗತ್ಯವಾಗಿ ಹಣ ಖರ್ಚು ಮಾಡುವುದು ವೈಭವ ಅಲ್ಲ. ಜನರ, ಪ್ರವಾಸಿಗರ ಸುರಕ್ಷತೆ ಮತ್ತು ಅನುಕೂಲಕ್ಕೆ ಪ್ರಥಮ ಆದ್ಯತೆ ಇರಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚನೆ ನೀಡಿದರು.ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಾಡಹಬ್ಬ ಮೈಸೂರು ದಸರಾ-2025 ಆಚರಣೆ ಕುರಿತು ನಡೆದ ಉನ್ನತ ಮಟ್ಟದ ಸಮಿತಿ ಸಭೆಯಲ್ಲಿ ಸೂಚನೆಗಳನ್ನು ನೀಡಿದರು.

ಸರ್ಕಾರದ ಸಾಧನೆಗಳು, ನಾವು ಪ್ರತೀ ಇಲಾಖೆಯಲ್ಲೂ ಜಾರಿ ಮಾಡಿರುವ ಜನಪರ ಕಾರ್ಯಕ್ರಮಗಳು ಜನರಿಗೆ ಸಮರ್ಪಕವಾಗಿ ಮನವರಿಕೆ ಆಗುವ ರೀತಿಯಲ್ಲಿ ಯೋಜನೆ ರೂಪಿಸಬೇಕು.ಈ ಬಾರಿ ರಾಜ್ಯದಾದ್ಯಂತ ಮಳೆ ಬೆಳೆ ಉತ್ತಮವಾಗಿದ್ದು, ನದಿ, ಕೆರೆಗಳು ತುಂಬಿದ್ದು, ವೈಭವದಿಂದ ದಸರಾ ಆಚರಿಸಲಾಗುವುದು.

• ಸೆಪ್ಟಂಬರ್‌ 22ರಂದು ದಸರಾ ಹಬ್ಬಕ್ಕೆ ಚಾಲನೆ ದೊರೆಯಲಿದ್ದು, ಅಕ್ಟೋಬರ್‌ 2ರಂದು ವಿಜಯದಶಮಿ, ಜಂಬೂ ಸವಾರಿ ನಡೆಯಲಿದೆ. ದಸರಾ ಈ ಬಾರಿ 10ದಿನಗಳ ಬದಲು 11ದಿನಗಳ ಕಾಲ ನಡೆಯಲಿದೆ.

• ದಸರಾಕ್ಕೆ ತನ್ನದೇ ಆದ ಚಾರಿತ್ರಿಕ, ಧಾರ್ಮಿಕ ಮತ್ತು ಸಾಂಸ್ಕೃತಿಕ ಹಿನ್ನೆಲೆಯಿದ್ದು, ಇದಕ್ಕೆ ಪೂರಕವಾಗಿ ದಸರಾ ಆಚರಿಸಲಾಗುವುದು.
• ವಿಶ್ವ ವಿಖ್ಯಾತ ದಸರಾದ ಪರಂಪರೆಯನ್ನು ಮುಂದುವರೆಸುವ ನಿಟ್ಟಿನಲ್ಲಿ ಕಾರ್ಯಕ್ರಮಗಳನ್ನು ಆಯೋಜಿಸಬೇಕು.

• ಕಳೆದ ವರ್ಷ ದಸರಾ ಆಚರಣೆಗೆ ಒಟ್ಟು ರೂ. 40 ಕೋಟಿ ಅನುದಾನ ಒದಗಿಸಲಾಗಿತ್ತು. ಈ ಬಾರಿ ಅದ್ದೂರಿಯಾಗಿ ದಸರಾ ಆಚರಣೆಗೆ ಬೇಕಾದಷ್ಟು ಅನುದಾನವನ್ನು ಒದಗಿಸಲಾಗುವುದು.
• ಸರ್ಕಾರದ ಸಾಧನೆಗಳನ್ನು ಮತ್ತು ಇಲಾಖಾ ಕಾರ್ಯಕ್ರಮಗಳನ್ನು ಸರಿಯಾಗಿ ಪ್ರತಿಬಿಂಬಿಸುವಂತಹ ವಸ್ತು ಪ್ರದರ್ಶನ, ಸ್ತಬ್ಧಚಿತ್ರ ಪ್ರದರ್ಶನ ಆಯೋಜಿಸಬೇಕು. ಅಕ್ಟೋಬರ್‌ 2ರಂದು ವಿಜಯದಶಮಿ ಬಂದಿರುವ ಕಾರಣ ಸ್ತಬ್ಧ ಚಿತ್ರಗಳಲ್ಲಿ ಗಾಂಧೀಜಿ ವಿಚಾರಧಾರೆಗಳಿಗೆ ಸಹ ಅವಕಾಶ ಕಲ್ಪಿಸಬೇಕು.

• ಕಲ್ಯಾಣ ಕಾರ್ಯಕ್ರಮಗಳು, ಗ್ಯಾರಂಟಿ ಯೋಜನೆಗಳ ಮಾಹಿತಿ ಒದಗಿಸಲು ವ್ಯವಸ್ಥೆ ಮಾಡಬೇಕು.

• ದಸರಾ ಸಂದರ್ಭದಲ್ಲಿ ಜನದಟ್ಟಣೆ ನಿಯಂತ್ರಣಕ್ಕೆ ಹೆಚ್ಚಿನ ಒತ್ತು ನೀಡಬೇಕು. 10ಲಕ್ಷಕ್ಕೂ ಹೆಚ್ಚು ಮಂದಿ ಸೇರುವ ಸಂದರ್ಭ ಇದಾಗಿದೆ. ವಿದೇಶಿಗರೂ ಹೆಚ್ಚಿನ ಪ್ರಮಾಣದಲ್ಲಿ ಆಗಮಿಸುತ್ತಾರೆ. ಯಾವುದೇ ಕಾರಣಕ್ಕೂ ಅನಾಹುತ ಸಂಭವಿಸದಂತೆ ಎಲ್ಲಾ ಕಡೆ ಮುನ್ನೆಚ್ಚರಿಕೆ ವಹಿಸಬೇಕು.

• ಅರಮನೆ ಮುಂಭಾಗದಲ್ಲಿ ಆಸನದ ವ್ಯವಸ್ಥೆಯನ್ನು ಕಳೆದ ಬಾರಿಗಿಂತ ಈ ಬಾರಿ ಕಡಿಮೆ ಮಾಡಿ ಜನದಟ್ಟಣೆಯನ್ನು ನಿಯಂತ್ರಿಸಲು ಕ್ರಮ ಕೈಗೊಳ್ಳಿ.

• ಪೊಲೀಸರು ಜನಸ್ನೇಹಿಯಾಗಿ ಕರ್ತವ್ಯ ನಿರ್ವಹಿಸಬೇಕು. ಕಾನೂನು ಸುವ್ಯವಸ್ಥೆಗೆ ಯಾವುದೇ ಧಕ್ಕೆಯಾಗದಂತೆ ನೋಡಿಕೊಳ್ಳಬೇಕು.

• ಚಾಮುಂಡಿ ಬೆಟ್ಟಕ್ಕೆ ಹೋಗುವ ರಸ್ತೆ, ಕೆಆರ್‌ಎಸ್‌ಗೆ ಹೋಗುವ ರಸ್ತೆ ಸೇರಿದಂತೆ ಎಲ್ಲಾ ಪ್ರಮುಖ ರಸ್ತೆಗಳನ್ನು ದುರಸ್ತಿ ಮಾಡುವ ಕಾರ್ಯವನ್ನು ಈಗಲೇ ಆರಂಭಿಸಬೇಕು.

• ಜಾನಪದ ಕಲೆಗಳನ್ನು ಪ್ರದರ್ಶಿಸಲು ವೇದಿಕೆ ಕಲ್ಪಿಸಬೇಕು. ಜಾನಪದ ಪ್ರದರ್ಶನದಲ್ಲಿ ಏಕತಾನತೆ ಇಲ್ಲದಂತೆ ನೋಡಿಕೊಳ್ಳಬೇಕು.

• ಕಳೆದ ಬಾರಿ ವಿದ್ಯುತ್‌ ದೀಪ ಅಲಂಕಾರವನ್ನು ವೈಭವದಿಂದ ಮಾಡಲಾಗಿತ್ತು. ಇದಕ್ಕೆ ಎಲ್ಲರೂ ಮೆಚ್ಚುಗೆ ವ್ಯಕ್ತಪಡಿಸಿದ್ದರು. ಈ ಬಾರಿಯೂ ವಿದ್ಯುತ್‌ ದೀಪಾಲಂಕಾರವನ್ನು ಇನ್ನಷ್ಟು ಉತ್ತಮವಾಗಿ ಮಾಡಬೇಕು.

• ಎಲ್ಲಾ ಜಿಲ್ಲೆಗಳಿಂದ ಆಗಮಿಸುವ ಸ್ತಬ್ಧಚಿತ್ರಗಳು ವೈವಿಧ್ಯಮಯವಾಗಿರುವಂತೆ ನೋಡಿಕೊಳ್ಳಬೇಕು.

• ವಸ್ತು ಪ್ರದರ್ಶನದ ಮಳಿಗೆಗಳು ಉದ್ಘಾಟನೆ ಸಂದರ್ಭದಲ್ಲೇ ಪೂರ್ಣ ಪ್ರಮಾಣದಲ್ಲಿ ಸಜ್ಜುಗೊಂಡಿರಬೇಕು. ಯಾವುದೇ ಮಳಿಗೆಗಳು ಖಾಲಿಯಿರಬಾರದು.

• ಗೋಲ್ಡ್ ಕಾರ್ಡ್‌ ಯಾವುದೇ ಗೊಂದಲಕ್ಕೆ ಆಸ್ಪದವಾಗದಂತೆ ವಿತರಿಸಬೇಕು.

• ಮೈಸೂರು ನಗರದ ಸೌಂದರ್ಯವನ್ನು ಹೆಚ್ಚಿಸಲು ಕ್ರಮ ಕೈಗೊಳ್ಳಬೇಕು.

• ದಸರಾ ವೀಕ್ಷಿಸಲು ಆಗಮಿಸುವವರಿಗೆ ಹೆಚ್ಚಿನ ಪ್ರಮಾಣದಲ್ಲಿ ಶೌಚಾಲಯ, ವಾಹನ ಪಾರ್ಕಿಂಗ್‌ ವ್ಯವಸ್ಥೆ ಸೇರಿದಂತೆ ಅಗತ್ಯ ಮೂಲಸೌಲಭ್ಯಗಳನ್ನು ಕಲ್ಪಿಸಬೇಕು.

• ಈ ಬಾರಿಯೂ ದೊಡ್ಡ ಪ್ರಮಾಣದಲ್ಲಿ ಡ್ರೋಣ್‌ ಶೋ ಆಯೋಜಿಸಲಾಗುವುದು.

• ದಸರಾ ಸಂದರ್ಭದಲ್ಲಿ ಅಧಿಕಾರಿಗಳು ಜನಸಾಮಾನ್ಯರಿಗೆ ದೊರೆಯುವುದಿಲ್ಲ ಎಂಬ ದೂರುಗಳಿದ್ದು, ಇದಕ್ಕೆ ಈ ಬಾರಿ ಅವಕಾಶ ನೀಡಬಾರದು. ಜನಸಾಮಾನ್ಯರ ಕೆಲಸ ಕಾರ್ಯಗಳು, ಅಭಿವೃದ್ದಿ ಕಾರ್ಯಗಳು ಯಾವುದೇ ಕಾರಣಕ್ಕೂ ಕುಂಠಿತವಾಗಬಾರದು.

• ಈ ಬಾರಿ ದಸರಾ ಉದ್ಘಾಟನೆಗೆ ಯಾರನ್ನು ಆಹ್ವಾನಿಸಬೇಕು ಎಂಬುವುದನ್ನು ಮುಖ್ಯಮಂತ್ರಿ ಅವರ ವಿವೇಚನೆಗೆ ಬಿಡಲು ಸಭೆಯಲ್ಲಿ ನಿರ್ಧರಿಸಲಾಯಿತು.

• ಕಳೆದ ಬಾರಿ ಅರಮನೆ ಮುಂದೆ ಆಸನ ವ್ಯವಸ್ಥೆಯನ್ನು 54ಸಾವಿರಕ್ಕೆ ಹೆಚ್ಚಿಸಲಾಗಿತ್ತು. ಇದರಿಂದಾಗಿ ಜಂಬೂ ಸವಾರಿ ಸಂದರ್ಭದಲ್ಲಿ ಜನದಟ್ಟಣೆ ಉಂಟಾಗಿತ್ತು. ಈ ಬಾರಿ ಜನದಟ್ಟಣೆ ಕಡಿಮೆ ಮಾಡಲು ಕ್ರಮ ಕೈಗೊಳ್ಳಬೇಕಾಗಿದೆ. ಯಾವುದೇ ಕಾರ್ಯಕ್ರಮಗಳ ಸ್ಥಳಗಳಲ್ಲಿ ಯಾವುದೇ ಕಾರಣಕ್ಕೂ ಜನದಟ್ಟಣೆಯಾಗದಂತೆ ಎಚ್ಚರಿಕೆ ವಹಿಸಬೇಕು. ಪ್ರಜಾಪ್ರಭುತ್ವ, ಸಂವಿಧಾನ, ಅಭಿವೃದ್ಧಿ, ಉತ್ತಮ ಆಡಳಿತದ ಆಶಯದಲ್ಲಿ ದಸರಾ ಆಚರಿಸಲಾಗುವುದು. – ಡಾ. ಹೆಚ್.ಸಿ.ಮಹದೇವಪ್ಪ

• ಮೈಸೂರು ದಸರಾ ಪ್ರಾಧಿಕಾರ ಸ್ಥಾಪಿಸಿ ಅದರ ಮೂಲಕ ದಸರಾ ವ್ಯವಸ್ಥಿತವಾಗಿ ಆಚರಿಸಬೇಕು. ಕುಳಿತುಕೊಳ್ಳುವ ಸ್ಥಳಾವಕಾಶ ಹೆಚ್ಚಿಸಬೇಕು. ಪಾರ್ಕಿಂಗ್‌ ವ್ಯವಸ್ಥೆಯನ್ನು ವ್ಯವಸ್ಥಿತಗೊಳಿಸಬೇಕು-ತನ್ವೀರ್‌ ಸೇಠ್

• ಉತ್ತಮ ಮಳೆಯಾಗಿದ್ದು, ರೈತರು ಉತ್ತಮ ಬೆಳೆ ನಿರೀಕ್ಷೆಯಲ್ಲಿದ್ದಾರೆ. ನದಿಗಳು ತುಂಬಿದ್ದು, ಕೆಆರ್‌ಎಸ್‌ ಈ ಬಾರಿ ಬೇಗನೇ ತುಂಬಿದೆ. ಜಂಬೂ ಸವಾರಿ ಸಂದರ್ಭದಲ್ಲಿ ಕಲಾ ತಂಡಗಳನ್ನು ಹೊರತುಪಡಿಸಿ ಬೇರೆ ಯಾರೂ ಓಡಾಡಲು ಅವಕಾಶ ಮಾಡಬಾರದು. ಕಲಾ ತಂಡಗಳಲ್ಲಿ ವೈವಿಧ್ಯತೆ ಇರಬೇಕು- ಜಿ.ಟಿ.ದೇವೇಗೌಡ

• ವಿವಿಧ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಇಕೋ ಫ್ರೆಂಡ್ಲಿ ಹಸಿರು ದಸರಾ ಆಚರಿಸಲು ಕ್ರಮ ಕೈಗೊಳ್ಳಬೇಕು. ಮಹಿಳೆಯರ ಸುರಕ್ಷತೆಗೆ ಹೆಚ್ಚಿನ ಕ್ರಮ ಕೈಗೊಳ್ಳಬೇಕು- ಪುಷ್ಪಾ ಅಮರನಾಥ

ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವರಾದ ಎಚ್.ಸಿ.ಮಹದೇವಪ್ಪ, ಕೆ.ಜೆ.ಜಾರ್ಜ್‌, ಶಿವರಾಜ ತಂಗಡಗಿ, ಕೆ. ವೆಂಕಟೇಶ್, ಸುರೇಶ್‌ ಭೈರತಿ, ಜಿ.ಟಿ.ದೇವೇಗೌಡ, ರಮೇಶ್‌ ಬಂಡಿಸಿದ್ದೇಗೌಡ, ಪುಟ್ಟರಂಗಶೆಟ್ಟಿ,, ತನ್ವೀರ್‌ ಸೇಠ್‌, ಡಾ.ಯತೀಂದ್ರ ಎಸ್‌, ಡಾ.ಡಿ.ತಿಮ್ಮಯ್ಯ, ಅನಿಲ್‌ ಕುಮಾರ್, ಎ.ಆರ್.ಕೃಷ್ಣಮೂರ್ತಿ, ಮಧು ಜಿ ಮಾದೇಗೌಡ, ಕೆ.ಹರೀಶ್‌ ಗೌಡ, ದರ್ಶನ್‌ ಧ್ರುವನಾರಾಯಣ, ಡಾ.ಮಾನಸ, ಪುಷ್ಪಾ ಅಮರನಾಥ್, ಅಯೂಬ್‌ ಖಾನ್, ಅಪರ ಮುಖ್ಯ ಕಾರ್ಯದರ್ಶಿ ಗೌರವ ಗುಪ್ತಾ, ಮುಖ್ಯಮಂತ್ರಿ ಅವರ ಅಪರ ಮುಖ್ಯ ಕಾರ್ಯದರ್ಶಿ ಅಂಜುಂ ಪರ್ವೇಜ್ ಮತ್ತಿತರರು ಉಪಸ್ಥಿತರಿದ್ದರು.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿ‌ನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

bayaluseeme times ads (2)
cm siddaramayya dasara mysore
Follow on Google News Follow on Instagram
Share. Facebook Twitter Telegram WhatsApp
Previous Articleಸಣ್ಣ ಕೈಗಾರಿಕೆಗಳಿಗಾಗಿ ಪ್ರತ್ಯೇಕ ಸಚಿವಾಲಯಕ್ಕೆ ಸಿದ್ಧತೆ: ಡಿಸಿಎಂ ಡಿ.ಕೆ. ಶಿವಕುಮಾರ್
Next Article ಜುಲೈ ೧ ರಂದು‌ ವಾರ್ತಾಸೌಧದಲ್ಲಿ ಪತ್ರಿಕಾ ದಿನಾಚರಣೆ ಅಚರಣೆ ಮಾನ್ಯ ಮುಖ್ಯಮಂತ್ರಿಗಳಿಂದ ಕಾರ್ಯಕ್ರಮ ಉದ್ಘಾಟನೆ
Times of bayaluseeme
  • Website

Related Posts

ಹೆಣ್ಣು ಮಕ್ಕಳಿಗೆ ಕಡ್ಡಾಯ ಶಿಕ್ಷಣ ಕೊಡಿಸಿ – ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ

July 27, 2025

ಪತ್ರಿಕೋದ್ಯಮ ಯಾರ ಪರವಾಗಿ ಕನ್ನಡಿ ಹಿಡಿಯುತ್ತಿದೆ ಎಂಬುದನ್ನು ಅರಿಯಬೇಕು – ಕೆ.ವಿ.ಪ್ರಭಾಕರ್

July 27, 2025

ನಟ ಪ್ರಥಮ್ ಗೆ ಜೀವ ಬೆದರಿಕೆ; ಘಟನೆಯಲ್ಲಿ ರಕ್ಷಕ್ ಬುಲೆಟ್ ಬಂದಿದ್ದೇಕೆ..?

July 27, 2025
Add A Comment
Leave A Reply Cancel Reply

Advertisement
Latest Posts

ಮೋದಿ ಬಂದ ಮೇಲೆ ರಕ್ಷಣಾ ವ್ಯವಸ್ಥೆಯಲ್ಲಿ ಏನೆಲ್ಲ ಬದಲಾವಣೆ ಆಗಿದೆ ಗೊತ್ತೇ; ಶಾಸಕ ಎಂ.ಚಂದ್ರಪ್ಪ

ಪ್ರತಿದಿನ ಭಾರತ ಮಾತೆಯ ವೀರ ಪುತ್ರರ ಧೈರ್ಯವನ್ನು ನೆನಪಿಸಿಕೊಳ್ಳಬೇಕು – ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ

ಕಾಂತರಾಜ್ ವರದಿಯನ್ನು ಮೇಲ್ಜಾತಿಯವರು ಮೂಲೆಯಲ್ಲಿ ಕೂರಿಸಿದ್ದಾರೆ – ರಾಮಚಂದ್ರಪ್ಪ

ಹೆಣ್ಣು ಮಕ್ಕಳಿಗೆ ಕಡ್ಡಾಯ ಶಿಕ್ಷಣ ಕೊಡಿಸಿ – ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ

Trending Posts

Subscribe to News

Get the latest sports news from NewsSite about world, sports and politics.

Facebook X (Twitter) Pinterest Vimeo WhatsApp TikTok Instagram

News

  • World
  • US Politics
  • EU Politics
  • Business
  • Opinions
  • Connections
  • Science

Company

  • Information
  • Advertising
  • Classified Ads
  • Contact Info
  • Do Not Sell Data
  • GDPR Policy
  • Media Kits

Services

  • Subscriptions
  • Customer Support
  • Bulk Packages
  • Newsletters
  • Sponsored News
  • Work With Us

Subscribe to Updates

Get the latest creative news from FooBar about art, design and business.

© 2025 Bayaluseeme Time. Designed by Bayaluseeme time
  • Privacy Policy
  • Terms
  • Accessibility

Type above and press Enter to search. Press Esc to cancel.