ಅಖಾಡಕ್ಕೆ ಸಿಎಂ-ಡಿಸಿಎಂ ; ಗೆಲುವಿಗೆ ರಣತಂತ್ರ
ದಾವಣಗೆರೆ: ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಉಪ ಚುನಾವಣೆಯಲ್ಲಿ ಗೆಲುವು ಸಾಧಿಸಲು ಕಾಂಗ್ರೆಸ್ ನಾನಾ ರಣತಂತ್ರ ರೂಪಸಿದೆ. ಸೋಮವಾರ ದಾವಣಗೆರೆ ಹಾಗೂ ಬಾಗಲಕೋಟೆ ಎರಡೂ ಕ್ಷೇತ್ರಗಳಿಗೆ ಹೆಲಿಕಾಪ್ಟರ್ ಮೂಲಕ ಸಿಎಂ, ಡಿಸಿಎಂ ತೆರಳಲಿದ್ದಾರೆ. ಎರಡೂ ಕ್ಷೇತ್ರಗಳ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆಯಲ್ಲಿ ಭಾಗಿಯಾಗಲಿದ್ದಾರೆ.
ಬೆಳಿಗ್ಗೆ 11.15ಕ್ಕೆ ದಾವಣಗೆರೆ ಮಹಾನಗರ ಪಾಲಿಕೆ ಕಚೇರಿಗೆ ಆಗಮಿಸಲಿರುವ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅವರು ಅಭ್ಯರ್ಥಿ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ ವೇಳೆ ಹಾಜರಿರಲಿದ್ದಾರೆ. ಬಳಿಕ ಮಧ್ಯಾಹ್ನ 2 ಘಂಟೆಗೆ ಬಾಗಲಕೋಟೆ ಮಿನಿವಿಧಾನಸೌಧದಲ್ಲಿ ನಾಮಪತ್ರ ಸಲ್ಲಿಸಲಿರುವ ಕಾಂಗ್ರೆಸ್ ಅಭ್ಯರ್ಥಿಗೂ ಸಾಥ್ ನೀಡಲಿದ್ದಾರೆ.
