ಬೆಂಗಳೂರು: ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರ ಕಚೇರಿ ಮತ್ತು ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಾಂಬ್ ಸ್ಫೋಟಿಸುವುದಾಗಿ ಬೆದರಿಕೆ ಸಂದೇಶ ಬಂದಿದೆ.ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಸಂದೇಶ ಕಳುಹಿಸಲಾಗಿದ್ದು, ತಕ್ಷಣ ಪೊಲೀಸರು, ಬಾಂಬ್ ನಿಷ್ಕ್ರಿಯ ದಳ ಹಾಗೂ ಬಾಂಬ್ ಪತ್ತೆ ದಳ ಸಿಬ್ಬಂದಿ ಸ್ಥಳಕ್ಕೆ ತೆರಳಿದ ಪರಿಶೀಲನೆ ನಡೆಸಿದರು. ಆದರೆ ಯಾವುದೇ ಬಾಂಬ್ ಪತ್ತೆಯಾಗದ ಹಿನ್ನೆಲೆಯಲ್ಲಿ ಇದು ಹುಸಿ ಬಾಂಬ್ ಬೆದರಿಕೆ ಸಂದೇಶ ಎಂದು ಗೊತ್ತಾಗಿದೆ. ಬಾಂಬ್ ಬೆದರಿಕೆ ಸಂದೇಶದಿಂದಕೆಲಕಾಲಆತಂಕದವಾತಾವರಣನಿರ್ಮಾಣವಾಗಿತ್ತು.bhagwan thmannyandex ಮೇಲ್‌ನಿಂದ ಬಾಂಬ್ ಬೆದರಿಕೆ ಸಂದೇಶ ಬಂದಿದ್ದು, ಟರ್ಮಿನಲ್ 1, 2ರಲ್ಲಿ ಬಾಂಬ್ ಇಟ್ಟಿದ್ದು ಎಲ್ಲರನ್ನೂ ತೆರವುಗೊಳಿಸಿ. ಏಕಕಾಲದಲ್ಲಿ ಡಿಸಿಎಂ ಕಚೇರಿ, ಏರ್‌ಪೋರ್ಟ್‌ನಲ್ಲಿ ಬ್ಲಾಸ್ಟ್ ಆಗಲಿದೆ ಎಂದು ಮೇಲ್ನಲ್ಲಿ ಬರೆಯಲಾಗಿತ್ತು.ಈ ಸಂಬಂಧ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಎಫ್‌ಐಆರ್ ದಾಖಲಿಸಿಕೊಂಡು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.



