ಬಾಗಲಕೋಟೆ: 1979 ರಿಂದ 1995ರವರೆಗೆ ನಾನೇ ಕಾಂಗ್ರೆಸ್ ಪಕ್ಷದ ಸಂಘಟನೆ ನಿರ್ವಹಿಸಿದ್ದೆ. ಆದರೆ, ಆಗ ನನ್ನ ಬದಲು ಆರ್.ಗುಂಡೂರಾವ್ ಮುಖ್ಯಮಂತ್ರಿ ಆದರು. ಆಮೇಲೆ, ಬಂಗಾರಪ್ಪ ಸಿಎಂ ಆದರು. ಅದಕ್ಕಿಂತ ಮೊದಲು ವೀರೇಂದ್ರ ಪಾಟೀಲರು ಅದರು. ಆದರೆ, ಆಗ ನಾನು ಸಿಎಂ ಆಗಲಿಲ್ಲ ಎಂದು ಪಶ್ಚಾತ್ತಾಪ ಪಡಲಿಲ್ಲ’ ಎಂದು ಮಾಜಿ ಸಿಎಂ ವೀರಪ್ಪ ಮೊಯ್ಲಿ ಹೇಳಿದರು. ಈ ಮೂಲಕ ಸಿಎಂ ಸ್ಥಾನ ಸಿಗದ್ದಕ್ಕೆ ಬೇಸರ ವ್ಯಕ್ತಪಡಿಸಿದ್ದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಟಾಂಗ್ ನೀಡಿದರು.ಇತ್ತೀಚೆಗೆ ವಿಜಯಪುರದಲ್ಲಿ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ್ದಖರ್ಗೆ ಅವರು, 1999ರಲ್ಲಿ ನಾನು ಪಕ್ಷ ಸಂಘಟಿಸಿದ್ದೆ. ಆದರೆ ಎಸ್.ಎಂ.ಕೃಷ್ಣ ಅವರು ಮುಖ್ಯಮಂತ್ರಿ ಆದರು. ಬಯಸಿದ್ದ ಸ್ಥಾನ ಸಿಗಲಿಲ್ಲ ಎಂದು ಬೇಸರದಿಂದ ನುಡಿದಿದ್ದರು. ಈಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಮೋಯ್ಲಿ, ನಮಗೆ ಅರ್ಹತೆ ಇದ್ದರೆ, ಸರದಿ ಬಂದರೆ ಸಿಎಂ ಆಗೇ ಆಗ್ತಿವಿ. ನಾನು 1980ರಲ್ಲೇ ಸಿಎಂ ಆಗಬೇಕಿತ್ತು, ಆಗಲಿಲ್ಲ. ಹತ್ತು ವರ್ಷ ಕಾದೆ. ಹಾಗಂತ ನನ್ನಿಂದಲೇ ಪಕ್ಷ ಅಧಿಕಾರಕ್ಕೆ ಬಂತು ಅಂತ ಹೇಳಲಿಕ್ಕೆ ಆಗೋದಿಲ್ಲ. ನಾವು ಎಷ್ಟು ವರ್ಷ ಸಿಎಂ ಆದೆವು ಅನ್ನೋದು ಮುಖ್ಯವಲ್ಲ, ಏನು ಕೆಲಸ ಮಾಡಿದೆವು ಎಂಬುದು ಮುಖ್ಯ. ನನ್ನ ರಾಜ್ಯದಲ್ಲಿ ಮುಖ್ಯಮಂತ್ರಿಯಾಗಬೇಕು ಅಂತ ಎಲ್ಲರಿಗೂ ಆಸೆ ಇರುತ್ತದೆ ಎಂದು ಮೊಯ್ಲಿ ಹೇಳಿದರು.
ಡಿಸಿಎಂ ಆದವರು ಸಿಎಂ ಆಗಲ್ಲ
ಡಿಸಿಎಂ ಆದವರು ಸಿಎಂ ಆಗಬೇಕು ಅಂತ ಆಸೆ ಪಡ್ತಾರೆ. ಆದರೆ, ಕೆಲವೊಂದು ಬಾರಿ ಡಿಸಿಎಂ ಆಗಿಯೇ ನಿವೃತ್ತಿಯಾಗಬಹುದು. ನನಗೆ ಸಿಗಲಿಲ್ಲ ಎಂದು ಪಶ್ಚಾತ್ತಾಪ ಪಡೋದು ಬೇಡ ಎಂದು ಪರೋಕ್ಷವಾಗಿ ಡಿ.ಕೆ. ಶಿವಕುಮಾರ್ ಅವರಿಗೆ ಕಿವಿಮಾತು ಹೇಳಿದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.



