ಚಿತ್ರದುರ್ಗ: ಡಿಸೆಂಬರ್ ಬಳಿಕ ಮಧ್ಯಂತರ ಚುನಾವಣೆ ಬಂದರೂ ಬರಬಹುದು ನಮ್ಮ ಪಕ್ಷದ ಕಾರ್ಯಕರ್ತರು ಎಲ್ಲದಕ್ಕೂ ಸಿದ್ಧವಾಗಿರಬೇಕು ಎಂದು ಚಿತ್ರದುರ್ಗ ಸಂಸದ ಗೋವಿಂದ ಕಾರಜೋಳ ರಾಜಕೀಯ ಕ್ರಾಂತಿಯ ಬೆನ್ನಲ್ಲೇ ಹೊಸ ಬಾಂಬ್ ಸಿಡಿಸಿದ್ದಾರೆ.
ಚಳ್ಳಕೆರೆ ಪಟ್ಟಣದಲ್ಲಿ ನಡೆದ ನೂತನ ಜಿಲ್ಲಾಧ್ಯಕ್ಷರ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದ ಅವರು, ಸೆಪ್ಟೆಂಬರ್ ಅಕ್ಟೋಬರ್ ನಲ್ಲಿ ಕ್ರಾಂತಿ ಆಗಬಹುದು. ಬಳಿಕ 150 ಶಾಸಕರ ಬೆಂಬಲದಿಂದ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಬಹುದು ಎಂದು ಭರವಸೆ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಾಗಿನಿಂದ ಶೂನ್ಯ ಸಾಧನೆ ಮಾಡಿದೆ.
ಸರ್ಕಾರದ ಕಾಟಕ್ಕೆ ಜನರು ಬೇಸತ್ತು ಹೋಗಿದ್ದಾರೆ. ಹೊಸ ಸರ್ಕಾರಕ್ಕಾಗಿ ಕಾಯುತ್ತಿದ್ದಾರೆ. ಕಾಂಗ್ರೆಸ್ ಪಕ್ಷದಲ್ಲಿ ಬದಲಾವಣೆ ಬಿರುಗಾಳಿ ಬೀಸಲಿದ್ದು, ಅದು ನಮಗೆ ಒಳ್ಳೇದಗುವ ಭರವಸೆ ಇದೆ ಎಂದು ಹೇಳಿದ್ದಾರೆ. ಒಟ್ನಲ್ಲಿ ಇತ್ತೀಚಿಗೆ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳಲ್ಲಿ ರಾಜಕೀಯ ಕ್ರಾಂತಿ ಮಾತುಗಳು ಹೆಚ್ಚಾಗಿದ್ದು, ಈಗ ಸಂಸದ ಕಾರಜೋಳ ಅಪರೇಷನ್ ಕಮಲದ ಬಗ್ಗೆ ಸುಳಿವು ನೀಡುವ ಮೂಲಕ ರಾಜಕೀಯ ವಲಯದಲ್ಲಿ ಸಂಚಲನ ಸೃಷ್ಟಿಸಿದ್ದಾರೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.



