ಬೆಂಗಳೂರು: ಮಾಜಿ ಪ್ರಧಾನಿ ದೇವೇಗೌಡ ಅವರೇ ನನ್ನ ರಾಜಕೀಯ ಗುರುಗಳು ಎಂದು ವಸತಿ ಸಚಿವ ಜಮೀರ್ ಅಹಮದ್ ಹೇಳಿದ್ದಾರೆ. ಬುಧವಾರ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ವಿತರಣಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನಾನು ಯಾವುದೇ ಪಕ್ಷದಲ್ಲಿ ಇರಬಹುದು. ಆದರೆ ಗುರುವನ್ನಂತೂ ಬದಲಾಯಿಸಲು ಸಾಧ್ಯವಿಲ್ಲ. ಬಹಳ ಬಡತನದ ಕುಟುಂಬದಿಂದ ಮೇಲೆ ಬಂದು ಸಿಎಂ ಆಗಿ, ಈ ದೇಶದ ಪ್ರಧಾನಿಯಾದರು. ಇಂದಿನ ವಿದ್ಯಾರ್ಥಿಗಳಿಗೆ ಅವರು ಪ್ರೇರಣೆ. ಸಾಧಿಸಬೇಕೆಂಬ ಛಲ, ಕಠಿಣ ಪರಿಶ್ರಮ, ಶ್ರದ್ದೆಯಿದ್ದರೆ ಜೀವನದಲ್ಲಿ ಏನನ್ನೂ ಬೇಕಾದರು ಸಾಧಿಸಬಹುದು. ವಿದ್ಯಾರ್ಥಿಗಳು ಶಿಕ್ಷಣಕ್ಕೆ ಹೆಚ್ಚಿನ ಆಧ್ಯತೆ ನೀಡಿ ಪೋಷಕರ ಆಸೆಯನ್ನು ನನಸು ಮಾಡಬೇಕು ಎಂದು ಸಲಹೆ ನೀಡಿದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.



