ಧರ್ಮಸ್ಥಳ ಪ್ರಕರಣದ ಸಂಬಂಧ ವಿಶೇಷ ತನಿಖಾ ತಂಡದ ಎದುರು ಹೊಸ ಸಾಕ್ಷಿಯೊಬ್ಬರು ಸಾಕ್ಷಿ ಹೇಳಲು ಮುಂದೆ ಬಂದಿದ್ದಾರೆ. ಮಂಡ್ಯದ ಚಿಕ್ಕಕೆಂಪಮ್ಮ ಎಂಬ 62 ವರ್ಷದ ಮಹಿಳೆ ಎಸ್ಐಟಿಗೆ ಪತ್ರ ಬರೆದಿದ್ದು, ಕೆಲವು ಪುರುಷರು ಸೌಜನ್ಯಳನ್ನು ಎಳೆದುಕೊಂಡು ಹೋಗಿ ಕಾರಿನಲ್ಲಿ ಅಪಹರಿಸುವುದನ್ನು ನೋಡಿದ್ದೇನೆ ಎಂದು ಹೇಳಿದ್ದಾರೆ.ಧರ್ಮಸ್ಥಳದ ಸುತ್ತಮುತ್ತ ನಡೆದಿದೆ ಎನ್ನಲಾಗುತ್ತಿರುವ ಹಲವಾರು ಅಪಹರಣ, ಅತ್ಯಾಚಾರ ಅಪಹರಣ, ಅತ್ಯಾಚಾರ ಹಾಗೂ ಕೊಲೆ ಪ್ರಕರಣಗಳ ಸಮಗ್ರ ತನಿಖೆಗಾಗಿ ವಿಶೇಷ ತನಿಖಾ ತಂಡವನ್ನು ರಚನೆ ಮಾಡಲಾಗಿದ್ದು, ಇಲ್ಲಿನ ಪ್ರಕರಣಗಳಿಗೆ ಸಂಬಂಧಪಟ್ಟಂತೆ ಸಾಕ್ಷಿಗಳು ಇದ್ದರೆ ಬಂದು ಹೇಳಿಕೆ ನೀಡಬಹುದು ಎಂದು ತಿಳಿಸಿರುವುದು ಸ್ವಾಗತಾರ್ಹ ವಿಚಾರ ಹಾಗೂ ನನಗೆ ಹೆಚ್ಚು ಧೈರ್ಯವನ್ನು ಕೊಟ್ಟಿದೆ. ಹಾಗಾಗೀ ನಾನು ಒಂದು ಸಾಕ್ಷಿಯಾಗಿ ತಮ್ಮ ಮುಂದೆ ಬರಲು ಇಚ್ಚಿಸುತ್ತೇನೆ ಎಂದು ಹೇಳಿದ್ದಾರೆ. ಚಿಕ್ಕಕೆಂಪಮ್ಮ ನೀಡಿರುವ ದೂರು ಸ್ವೀಕರಿಸಲಾಗಿದೆಯೇ ಅಥವಾ ಇಲ್ಲವೇ ಎಂಬುದನ್ನು ಎಸ್ಐಟಿ ಇನ್ನೂ ದೃಢಪಡಿಸಿಲ್ಲ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.







