ಧಾರವಾಡ:ಕರ್ನಾಟಕವಿಶ್ವವಿದ್ಯಾಲಯಕ್ಕೆರಾಜ್ಯ ಸರ್ಕಾರನೂತನ ಕುಲಪತಿಗಳನ್ನು ನೇಮಿಸಿ ಒಂದೇ ದಿನದಲ್ಲಿ ನೇಮಕ ವಿಚಾರ ನ್ಯಾಯಾಲಯದ ಮೆಟ್ಟಿಲೇರಿದೆ.ಕವಿವಿ ಕುಲಪತಿಗಳ ನೇಮಕ ಪ್ರಕ್ರಿಯೆ ಸರಿಯಾಗಿಲ್ಲ ಎಂದು ಕವಿವಿ ಹಿರಿಯ ಪ್ರಾಧ್ಯಾಪಕ ಡಾ| ಮಹಾದೇವಪ್ಪ ಕರಿದುರಗನವರ ರಿಟ್ ಅರ್ಜಿ ಸಲ್ಲಿಸಿದ್ದಾರೆ. ರಿಟ್ ಅರ್ಜಿಯನ್ನು ಪುರಸ್ಕರಿಸಿರುವ ಹೈಕೋರ್ಟ್ ಪೀಠವು ಈ ವಿಚಾರವಾಗಿ ಸರ್ಕಾರ ಯಾವುದೇ ಕ್ರಮ ಕೈಗೊಳ್ಳದಂತೆ ಸೋಮವಾರ ಮಧ್ಯಂತರ ಆದೇಶ ನೀಡಿ ವಿಚಾರಣೆಯನ್ನು ಜು.23ಕ್ಕೆ ಮುಂದೂಡಿದೆ. ಕವಿವಿ ಕುಲಪತಿ ಹುದ್ದೆ 20 ತಿಂಗಳಿಂದ ಖಾಲಿ ಇತ್ತು. 2 ದಿನದ ಹಿಂದಷ್ಟೇ ಮಂಗಳೂರು ವಿವಿ ಹಿರಿಯ ಪ್ರಾಧ್ಯಾಪಕ ಡಾ| ಎ.ಎಂ.ಖಾನ್ ಅವರನ್ನು ಕಾಯಂ ಕುಲಪತಿಯಾಗಿ ನೇಮಿಸಿ ರಾಜ್ಯ ಸರ್ಕಾರ ಆದೇಶಿಸಿತ್ತು. ಅದರಂತೆ ಸೋಮವಾರ ಅಧಿಕಾರ ವಹಿಸಿಕೊಂಡಿದ್ದಾರಾದರೂ ಈಗ ಕಾನೂನು ತೊಡಕು ಎದುರಾಗಿದೆ. ಅರ್ಜ ಸಲ್ಲಿಸಿದ ಕರಿದುರಗನವರ ಅವರೂ ಕುಲಪತಿ ಹುದ್ದೆ ಆಕಾಂಕ್ಷಿ ಆಗಿದ್ದಾರೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.



