ಬೆಂಗಳೂರು: ಧರ್ಮಸ್ಥಳ ಕೇಸ್ ಸಂಬಂಧ ಸಾರ್ವಜನಿಕವಾಗಿ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಸಂಚಲನ ಸೃಷ್ಟಿಸುವ ಮೂಲಕ ಚರ್ಚೆ ಹಾಗೂ ವ್ಯಕ್ತಿಯೋರ್ವ ಸಾಕ್ಷಿಯಾಗಿ ಮಾರ್ಪಟ್ಟು ಹೇಳಿಕೆ ನೀಡಿದ ಬಳಿಕ ಕೆಲ ಕಾನೂನು ಕ್ರಮಗಳು ನಡೆಯುತ್ತಿವೆ. ಇದರ ಬೆನ್ನಲ್ಲೇ ಧರ್ಮಸ್ಥಳದಲ್ಲಿ ಕೊಲೆ, ಅಸ್ವಾಭಾವಿಕ ನಾಪತ್ತೆ ಪ್ರಕರಣ ಹಾಗೂ ಅತ್ಯಾಚಾರ ನಡೆದ ಬಗ್ಗೆ ಗಂಭೀರ ಆರೋಪ ಕೇಳಿ ಬಂದ ಹಿನ್ನಲೆ ಈಗ ಧರ್ಮಸ್ಥಳ ಕೇಸ್ ನಲ್ಲಿ ರಾಜ್ಯ ಮಹಿಳಾ ಆಯೋಗ ಎಂಟ್ರಿಯಾಗಿದೆ. ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಸಿಎಂ ಸಿದ್ದರಾಮಯ್ಯ, ಸರ್ಕಾರದ ಚೀಫ್ ಸೆಕ್ರೆಟರಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಎಸ್ಪಿಗೆ ಪತ್ರ ಬರೆದಿದ್ದಾರೆ. ಹಾಗಾದ್ರೆ ಪತ್ರದಲ್ಲಿ ಏನಿದೆ ಅನ್ನೋದನ್ನು ಇಲ್ಲಿ ನೋಡೋಣ…
ಧರ್ಮಸ್ಥಳ ವ್ಯಾಪ್ತಿಯಲ್ಲಿನ ಸಾವಿನ ಪ್ರಕರಣಗಳಿಗೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ(ಎಸ್.ಐ.ಟಿ)ವನ್ನು ರಚಿಸುವಂತೆ ಕೋರಿ
ಮೇಲಿನ ವಿಷಯ ಮತ್ತು ಉಲ್ಲೇಖಕ್ಕೆ ಸಂಬಂಧಿಸಿದಂತೆ ಧರ್ಮಸ್ಥಳದ ಭಾಗದಲ್ಲಿ ನೂರಾರು ಶವಗಳನ್ನು ಹೂತಿರುವುದಾಗಿ ವ್ಯಕ್ತಿಯೊಬ್ಬರು ನ್ಯಾಯಾಲಯದಲ್ಲಿ ಹೇಳಿಕೆಯನ್ನು ದಾಖಲಿಸಿದ್ದಾರೆ. ದಿನಾಂಕ: 12-07-2025ರಂದು ಟೈಮ್ಸ್ ನೌ ಮತ್ತಿತರ ಮಾಧ್ಯಮಗಳು ಮನುಷ್ಯರೊಬ್ಬರ ತಲೆಬುರುಡೆ ದೊರಕಿದ ಬಗ್ಗೆ ಹಾಗೂ ನಾಪತ್ತೆಯಾದ ವೈದ್ಯಕೀಯ ವಿದ್ಯಾರ್ಥಿನಿಯೊಬ್ಬರ ಕುಟುಂಬದವರ ಹೇಳಿಕೆಯ ವರದಿ ಪ್ರಸಾರವಾಗಿರುವುದನ್ನು ಆಯೋಗವು ಗಂಭೀರವಾಗಿ ಪರಿಗಣಿಸಿದೆ. ಈ ಮಾಧ್ಯಮ ವರದಿ ಮತ್ತು ಶವಗಳನ್ನು ಹೂತಿರುವ ವ್ಯಕ್ತಿಯ ಹೇಳಿಕೆಯು ಕಳೆದ 20ಕ್ಕೂ ಹೆಚ್ಚು ವರ್ಷ ಗಂಭೀರ ಸ್ವರೂಪದ ದೌರ್ಜನ್ಯ, ಹತ್ಯೆ, ಅತ್ಯಾಚಾರ, ಅಸ್ವಾಭಾವಿಕವಾದ ಸಾವು ಮತ್ತು ನಾಪತ್ತೆ ಪ್ರಕರಣಗಳು ಹಲವು ಮಹಿಳೆಯರ, ವಿದ್ಯಾರ್ಥಿನಿಯರ ಮೇಲೆ ನಡೆದಿರುವ ಬಗ್ಗೆ ಹೇಳಲಾಗಿದೆ. ಅನೇಕ ಕುಟುಂಬಗಳು ತಮ್ಮ ಮಕ್ಕಳ ನಾಪತ್ತೆ, ಸಾವಿನ ಪ್ರಕರಣ ದಾಖಲಿಸಲು ಪೊಲೀಸ್ ಠಾಣೆಗೆ ಹೋದಾಗ ಸಿಬ್ಬಂದಿಗಳು ಸೂಕ್ತವಾಗಿ ಸ್ಪಂದಿಸಿಲ್ಲ ಎಂದು ಕೂಡ ಆರೋಪ ಮಾಡಿರುತ್ತಾರೆ. ಹಾಗಾಗಿ ಧರ್ಮಸ್ಥಳದ ವ್ಯಾಪ್ತಿಯಲ್ಲಿ ಕಳೆದ 20 ವರ್ಷಗಳಿಂದ ನಾಪತ್ತೆಯಾಗಿರುವ ಮಹಿಳೆಯರ ಮತ್ತು ವಿದ್ಯಾರ್ಥಿನಿಯರ ಪ್ರಕರಣಗಳು, ಅಸ್ವಾಭಾವಿಕವಾದ ಸಾವು/ ಕೊಲೆ ಪ್ರಕರಣಗಳು ಮತ್ತು ಅತ್ಯಾಚಾರ ಪ್ರಕರಣಗಳಿಗೆ ಸಂಬಂಧಿಸಿದಂತೆ ಸಮಗ್ರ ಮತ್ತು ನಿಷ್ಪಕ್ಷಪಾತ ತನಿಖೆಗಾಗಿ ಹಿರಿಯ ಪೊಲೀಸ್ ಅಧಿಕಾರಿಗಳ ನೇತೃತ್ವದಲ್ಲಿ ವಿಶೇಷ ತನಿಖಾ ತಂಡ(ಎಸ್.ಐ.ಟಿ) ರಚಿಸುವಂತೆ ಈ ಮೂಲಕ ತಮ್ಮನ್ನು ಕೋರುತ್ತೇನೆ ಎಂಬುದಾಗಿ ಮೂವರಿಗೂ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಪತ್ರ ಬರೆದಿರುವುದು ಧರ್ಮಸ್ಥಳ ಕೇಸ್ ಗೆ ಮತ್ತಷ್ಟು ಬಲ ಬಂದಂತಾಗಿದೆ ಅನ್ನೋದು ಸಾರ್ವಜನಿಕರ ಮಾತು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.



