ಬೆಳ್ತಂಗಡಿ: ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಮಾಡಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಬೆಳ್ತಂಗಡಿ ತಾಲೂಕು ನಾಗರಿಕ ಹಿತರಕ್ಷಣಾ ವೇದಿಕೆ ಹಾಗೂ ಸಾರ್ವಜನಿಕರು ಎಸ್ಐಟಿ ಅಧಿಕಾರಿಗಳಿಗೆ ದೂರು ಸಲ್ಲಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಸೋಮವಾರ ಮುಖ್ಯಮಂತ್ರಿ, ಗೃಹ ಸಚಿವರು, ಎಸ್ಐಟಿ ಅಧಿಕಾರಿಗಳು ಹಾಗೂ ಪೊಲೀಸ್ ವೃತ್ತ ನಿರೀಕ್ಷಿಕರಿಗೆ ವೇದಿಕೆಯಿಂದ ಮನವಿ ಸಲ್ಲಿಸಿದ್ದು, ಅವಹೇಳನದಿಂದ ನಿರ್ಮಾಣವಾದ ಅಹಿತಕರ ವಾತಾವರಣ ತಿಳಿಗೊಳಿಸಬೇಕು. ಕ್ಷೇತ್ರದ ವಿರುದ್ಧ ಷಡ್ಯಂತ್ರ ಮಾಡಿದವರ ವಿರುದ್ದ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು. ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ಮಾತನಾಡಿ, ಧರ್ಮಸ್ಥಳದ ಬಗ್ಗೆ ಭಕ್ತರ ಮನಸಲ್ಲಿ ಕೆಲವರು ಗೊಂದಲ ಸೃಷ್ಟಿಸಿದ್ದಾರೆ. ಕ್ಷೇತ್ರದ ವಿರುದ್ಧ ಹಲವು ಸುಳ್ಳು ಮತ್ತು ಕಪೋಲಕಲ್ಪಿತ ಆರೋಪ ಮಾಡಿದ್ದು, ತನಿಖೆ ನಡೆಯುತ್ತಿರುವ ಸಂದರ್ಭ ಸುಳ್ಳು ಸುದ್ದಿ ಹರಡುತ್ತಿರುವವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.







