ಬೆಂಗಳೂರು: ಧರ್ಮಸ್ಥಳ ಭಾಗದಲ್ಲಿ ನಡೆದ ಅಸಹಜ ಸಾವುಗಳ ಕುರಿತು ನಡೆಯುತ್ತಿರುವತನಿಖೆ ಸಂಬಂಧ ವಿಶೇಷ ತನಿಖಾ ತಂಡವು ಅಧಿವೇಶನ ಆರಂಭಕ್ಕೂ ಮುನ್ನ ಮಧ್ಯಂತರ ತನಿಖಾ ವರದಿ ನೀಡಬೇಕು ಎಂದು ಕಾರ್ಕಳ ಶಾಸಕ ವಿ.ಸುನಿಲ್ ಕುಮಾರ್ ಆಗ್ರಹಿಸಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಧರ್ಮಸ್ಥಳ ಮತ್ತು ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರ ಬಗ್ಗೆ ಅಪಪ್ರಚಾರ ಸಹಿಸಲ್ಲ. ಯುಟ್ಯೂಬರ್ಗಳು ತನಿಖೆ ಮಾಡುತ್ತಿದ್ದಾರೆ. ಹೀಗೆ ಬಿಟ್ಟರೆ ಧರ್ಮಸ್ಥಳ ಕ್ಷೇತ್ರದ ಬಗ್ಗೆ ಅಪಪ್ರಚಾರ ಮುಂದುವರೆಯಲಿದೆ. ಜನರ ಆಕ್ರೋಶದ ಕಟ್ಟೆ ಒಡೆದು ರಸ್ತೆಗೆ ಬರುವ ಮುನ್ನ ಸರ್ಕಾರ ಎಚ್ಚೆತ್ತುಕೊಳ್ಳಬೇಕು. ಎಸ್ಐಟಿ ಈವರೆಗಿನ ತನಿಖೆ ಕುರಿತು ಮಧ್ಯಂತರ ವರದಿ ನೀಡಬೇಕು ಎಂದು ಒತ್ತಾಯಿಸಿದರು.
ಹಿಂದೂ ಧರ್ಮದ ಅವಹೇಳನ ಸಹಿಸಲ್ಲ:
ಧರ್ಮಸ್ಥಳ ಭಾಗದಲ್ಲಿ ನಡೆದ ಅಸಹಜ ಸಾವುಗಳ ಹಿನ್ನೆಲೆಯಲ್ಲಿ ನಡೆಯುತ್ತಿರುವ ತನಿಖೆಗಳ ನಡುವೆ ಧರ್ಮಕ್ಷೇತ್ರದ ಬಗ್ಗೆ ನಾನಾ ಅಪಪ್ರಚಾರ ಸರಿಯಲ್ಲ. ಅಭಿವ್ಯಕ್ತಿ ಸ್ವಾತಂತ್ರ್ಯದ ಹೆಸರಿನಲ್ಲಿ ಅನೇಕರು ಸ್ವಾತಂತ್ರ್ಯ ಹರಣ ಮಾಡುತ್ತಿದ್ದಾರೆ. ಇಲ್ಲಿಯವರೆಗೂ ನಾವು ಮಾತನಾಡುವ ಅನಿವಾರ್ಯತೆ ಇರಲಿಲ್ಲ. ಆದರೆ, ಹಿಂದೂ ಧರ್ಮದ ಬಗ್ಗೆ ಅವಹೇಳನ ಸಹಿಸಲ್ಲ ಎಂದು ಅವರು ಹೇಳಿದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.







