ಬೆಂಗಳೂರು: ಧರ್ಮಸ್ಥಳ ಕೇಸ್ನಲ್ಲಿ ಸರ್ಕಾರದ ನಡವಳಿಕೆಗೆ ಮಂಜುನಾಥ ಸ್ವಾಮಿಯೇ ಶಿಕ್ಷೆ ಕೊಡುತ್ತಾನೆ ಎಂದು ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಭವಿಷ್ಯ ನುಡಿದಿದ್ದಾರೆ.ಜೆಪಿ ನಗರ ನಿವಾಸದಲ್ಲಿ ಧರ್ಮಸ್ಥಳ ಕೇಸ್ ವಿಚಾರವಾಗಿ ಮಾತನಾಡಿದ ಅವರು, ಧರ್ಮಸ್ಥಳ ಕೇಸ್ನಲ್ಲಿ ಈ ಸರ್ಕಾರ ನಡೆದುಕೊಂಡು ರೀತಿಗೆ ನಿಜಕ್ಕೂ ಶಿಕ್ಷೆಯಾಗಬೇಕು. ಮುಂದಿನ ದಿನಗಳಲ್ಲಿ ಈ ಸರ್ಕಾರಕ್ಕೆ ಮಂಜುನಾಥ ಸ್ವಾಮಿಯೇ ಶಿಕ್ಷೆ ಕೊಡುತ್ತಾನೆ ಅನ್ನೋದು ನನ್ನ ಅಭಿಪ್ರಾಯ. ಈ ಕೇಸ್ನಲ್ಲಿ ಸರ್ಕಾರದ ನಡೆವಳಿಕೆ ಸರಿಯಿಲ್ಲ. ಪ್ರಾರಂಭಿಕ ಹಂತದಲ್ಲಿ ಯಾವ ರೀತಿ ನಡೆದುಕೊಂಡಿದ್ದಾರೆ. ನಾನು ಧರ್ಮವನ್ನು ಬೆರೆಸಲು ಹೋಗಲ್ಲ. ಆದರೆ ಸರ್ಕಾರ ನಡೆದುಕೊಂಡ ರೀತಿ ಕ್ಷೇತ್ರಕ್ಕೆ ಅವಮಾನ, ಅನುಮಾನ ಆಗೋ ರೀತಿಯಲ್ಲಿ ಸರ್ಕಾರ ಎಸ್ಐಟಿ ತನಿಖೆ ನಾಟಕ ಆಡಿದೆ ಎಂದು ಕಿಡಿಕಾರಿದರುಈ ಕೇಸ್ಲ್ಲಿ ಪ್ರಾರಂಭಿಕ ಹಂತದಲ್ಲಿ ಸರ್ಕಾರಕ್ಕೆ ದೂರು ಕೊಟ್ಟಿದ್ದು ದ್ವಾರಕನಾಥ್. ಸಿಎಂಗೆ ಅವರೇ ದೂರು ಕೊಟ್ಟರು. ಆಗ ಸಿಎಂ ದೂರು ಬಂದ ತಕ್ಷಣ ಕ್ರಮ ತೆಗೆದುಕೊಳ್ಳುವ ವಾತಾವರಣ ನಿರ್ಮಾಣ ಮಾಡಿದರು. ಇದರಲ್ಲಿ ಎಡಪಂಥೀಯ ಶಕ್ತಿಗಳು ಇದೆ ಎಂದು ಹೇಳ್ತಾರೆ. ಯಾರಿದ್ದಾರೆ ಎಂದು ಮುಂದಿನ ದಿನಗಳಲ್ಲಿ ಎಲ್ಲವೂ ಗೊತ್ತಾಗುತ್ತದೆ ಎಂದು ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.







