ಮಂಗಳೂರು: ಧರ್ಮಸ್ಥಳ ನೂರಾರು ಶವಗಳ ಹೂತಿಟ್ಟ ಪ್ರಕರಣದಲ್ಲಿ ದೂರುದಾರರ ಪರ ವಕೀಲರು ವಿಶೇಷ ತನಿಖಾ ತಂಡದ ಹಿರಿಯ ಅಧಿಕಾರಿಗಳಿಗೆ ಪತ್ರ ಬರೆದಿದ್ದು, SIT ಯಲ್ಲಿರುವ ಪೊಲೀಸ್ ಅಧಿಕಾರಿ ಮಂಜುನಾಥ ಗೌಡ ಅವರು ದೂರುದಾರರು ತಮ್ಮ ದೂರನ್ನು ಹಿಂಪಡೆಯುವಂತೆ ಬೆದರಿಕೆ ಮತ್ತು ಒತ್ತಡ ಹೇರಿದ್ದಾರೆ ಎಂದು ಆರೋಪಿಸಿದ್ದಾರೆ.ತಮ್ಮ ದೂರಿನ ಮೂಲಕ ಘಟನೆಯನ್ನು ವಿವರಿಸಿದ ವಕೀಲೆ ಅನನ್ಯ ಗೌಡ, ನಿನ್ನೆ ಆಗಸ್ಟ್ 1 ರ ಶುಕ್ರವಾರ ರಾತ್ರಿ ಬೆಳ್ತಂಗಡಿಯ SIT ಕಚೇರಿಯಲ್ಲಿ ಈ ಘಟನೆ ನಡೆದಿದೆ ಎಂದು ಆರೋಪಿಸಿದ್ದಾರೆ.ಸದರಿ ಅಧಿಕಾರಿ ತಮ್ಮ ಮೊಬೈಲ್ ಫೋನ್‌ನಲ್ಲಿ ಹೇಳಿಕೆಯನ್ನು ರೆಕಾರ್ಡ್ ಮಾಡಿದ್ದಾರೆ ಎಂದು ಅವರು ಆರೋಪಿಸಿದ್ದಾರೆ. ಇನ್ನು ಇಂದು ನಡೆಯುತ್ತಿರುವ ಕಾರ್ಯಾಚರಣೆಯಲ್ಲಿ ಮಂಜುನಾಥ್ ಗೌಡ ನನ್ನು ಕೈ ಬಿಡಲಾಗಿದೆ ಎಂದು ಹೇಳಲಾಗುತ್ತಿದೆ.ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಿಸಲಾದ ದೂರನ್ನು ಹಿಂಪಡೆಯಲು ಒತ್ತಡ ಹೇರಲಾಯಿತು ಮತ್ತು ದೂರುದಾರರು ಮೂಲ ದೂರನ್ನು ಹಿಂಪಡೆಯಲು ಇಚ್ಛಿಸಿರುವುದಾಗಿ ಅಧಿಕಾರಿ ತಪ್ಪಾಗಿ ಹೇಳಿದ್ದಾರೆ’ ಎಂದು ದೂರುದಾರರು ಆರೋಪಿಸಿರುವುದಾಗಿ ವಕೀಲರು ದೂರಿನಲ್ಲಿ ತಿಳಿಸಿದ್ದಾರೆ.ಈ ಬೆಳವಣಿಗೆಯಿಂದ ಆಘಾತಕ್ಕೊಳಗಾಗಿದ್ದೇವೆ. ತನಿಖೆಯ ಮುಂದಿನ ಹಂತಗಳಿಂದ ಮಂಜುನಾಥ ಗೌಡ ಅವರನ್ನು ತಕ್ಷಣವೇ ಹೊರಗಿಡಬೇಕೆಂದು ಕೇಳಿಕೊಳ್ಳುತ್ತೇವೆ. ತನಿಖಾ ಹಂತದಲ್ಲಿ ದೂರುದಾರ-ಸಾಕ್ಷಿಯು ಮುಕ್ತವಾಗಿ ನಿರ್ಭೀತಿಯಿಂದ ಮಾತನಾಡಲು ಅವಕಾಶ ನೀಡಲು ಅವರನ್ನು ಹೊರಗಿಡುವುದು ಅವಶ್ಯಕ ಎಂದು ವಕೀಲರು ದೂರಿನಲ್ಲಿ ತಿಳಿಸಿದ್ದಾರೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.



