ಮಂಗಳೂರು: ಧರ್ಮಸ್ಥಳದಲ್ಲಿ ಸಾಮೂಹಿಕ ಅಂತ್ಯಕ್ರಿಯೆ ಬಗ್ಗೆ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡವು ಒಂದು ದೊಡ್ಡ ಅಸ್ಥಿ ಪಂಜರ ಪತ್ತೆಯಾದ ಆರನೇ ಸ್ಥಳದಲ್ಲಿ ಭದ್ರತೆಯನ್ನು ಹೆಚ್ಚಿಸಿದ್ದು, ಅವಶೇಷಗಳ ಸಂಗ್ರಹ ಕಾರ್ಯ ಮುಂದುವರೆದಿದೆ. ಪ್ರಕರಣದ ಪ್ರಾಥಮಿಕ ದೂರುದಾರ ಈ ಜಾಗವನ್ನು ತೋರಿಸಿದ್ದಾರೆ.ಈ ಪ್ರದೇಶದಲ್ಲಿ ನೂರಾರು ಶವಗಳನ್ನು ಹೂತ್ತಿಟ್ಟ ಆರೋಪ ಕೇಳಿಬಂದಿದೆ. 6ನೇ ಸ್ಥಳದಲ್ಲಿ ನಡೆಸಿದ ಉತ್ಖನನ ವೇಳೆ ಮೃತದೇಹದ ಕುರುಹು ಪತ್ತೆಯಾಗಿದೆ. ಈ ಜಾಗವನ್ನು ಸಂರಕ್ಷಿಸಲು ಅಧಿಕಾರಿಗಳು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡಿದ್ದಾರೆ.
ನದಿ ತಟದಲ್ಲಿರುವುದರಿಂದ ನೀರು ಅಥವಾ ಮಳೆಯಿಂದ ಯಾವುದೇ ಹಾನಿಯಾಗದಂತೆ ಮೇಲ್ಭಾಗ ಮತ್ತು ನಾಲ್ಕು ಕಡೆಗಳಲ್ಲಿ ರಕ್ಷಣಾತ್ಮಕ ಶೀಟ್ ಗಳನ್ನು ಅಳವಡಿಸಲಾಗಿದೆ. ಅವಶೇಷಗಳನ್ನು ವಿಶ್ಲೇಷಣೆಗಾಗಿ ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸುವ ನಿರೀಕ್ಷೆಯಿದೆ. ಅವಶೇಷಗಳನ್ನು ತಕ್ಷಣಕ್ಕೆ ಪ್ರಯೋಗಾಲಯಕ್ಕೆ ಕಳುಹಿಸದ ಅಧಿಕಾರಿಗಳು, ವಿಶ್ಲೇಷಣೆಗೆ ಅನುಕೂಲವಾಗುವಂತೆ ಇತರ ಎರಡು ಜಾಗಗಳಲ್ಲಿ ದೊರೆತ ವಸ್ತುಗಳೊಂದಿಗೆ ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸುವ ಸಾಧ್ಯತೆಯಿದೆ.6ನೇ ಜಾಗದಲ್ಲಿ ಅವಶೇಷಗಳ ಸಂಗ್ರಹಣೆ ಪ್ರಕ್ರಿಯೆಯು ಮುಕ್ತಾಯದ ಹಂತದಲ್ಲಿದ್ದು, ಶೀಘ್ರದಲ್ಲೇ ಮುಕ್ತಾಯಗೊಳ್ಳುವ ನಿರೀಕ್ಷೆಯಿದೆ.
ಮಾನವನ ಮೃತದೇಹ ಪತ್ತೆಯಾದ ಆರನೇ ಜಾಗದಲ್ಲಿ ಎಸ್‌ಐಟಿ ಹೆಚ್ಚಿನ ನಿಗಾ ವಹಿಸಿದೆ. ಅವಶೇಷ ಸಂಗ್ರಹ ವೇಳೆಯಲ್ಲಿ ಯಾವುದೇ ಸಾಕ್ಷಿಗಳು ಕಳೆದುಹೋಗದಂತೆ ಅಥವಾ ತೊಂದರೆಯಾಗದಂತೆ ಕ್ರಮ ಕೈಗೊಂಡಿರುವುದಾಗಿ ಪೊಲೀಸ್ ಮೂಲಗಳು ಹೇಳಿವೆ.ಉತ್ಖನನ್ನ ವೇಳೆ ದೊರೆತ ಅವಶೇಷಗಳನ್ನು ಸಂರಕ್ಷಿಸಲು ಫೊರೆನ್ಸಿಕ್ ತಂಡಗಳು ತನಿಖಾಧಿಕಾರಿಗಳೊಂದಿಗೆ ನಿಕಟವಾಗಿ ಕೆಲಸ ಮಾಡುತ್ತಿವೆ. ಧರ್ಮಸ್ಥಳ ಗ್ರಾಮದಲ್ಲಿ ಹಲವು ಸ್ಥಳದಲ್ಲಿ ಮೃತದೇಹಗಳನ್ನು ಹೂತು ಹಾಕಲಾಗಿದೆ ಎಂಬ ದೂರುದಾರರ ಆರೋಪದ ಮೇಲೆ ಈ ತನಿಖೆ ನಡೆಸಲಾಗುತ್ತಿದೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.



