ಧರ್ಮಸ್ಥಳದ ಧರ್ಮಾಧಿಕಾರಿಗಳ ಕುಟುಂಬದ ವಿರುದ್ದ ಯೂಟ್ಯೂಬ್ ಮೂಲಕ ಅಪಪ್ರಚಾರ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಯೂಟ್ಯೂಬರ್ ಸಮೀರ್ ಎಂಡಿ ಇಂದು ಪೊಲೀಸರ ವಿಚಾರಣೆಗೆ ಹಾಜರಾಗಿದ್ದಾನೆ. ಮೂವರು ವಕೀಲ ಜೊತೆ ಬೆಳ್ತಂಗಡಿ ಠಾಣೆ ಪೊಲೀಸರ ಮುಂದೆ ಹಾಜರಾಗಿ ವಿಚಾರಣೆ ಎದುರಿಸಿದನು. ಸಮೀರ್ ಎಂಡಿಗೆ ಪೊಲೀಸರು ಸಾಲು ಸಾಲು ಪ್ರಶ್ನೆಗಳನ್ನು ಕೇಳಿದ್ದಾರೆ. ಒಟ್ಟು ಮೂರು ಪ್ರಕರಣದಲ್ಲಿ ಸಮೀರ್ ಎಂಡಿ ವಿಚಾರಣೆ ನಡೆಸಲಾಗುತ್ತಿದೆ. AI ವಿಡಿಯೋ ಮತ್ತು ಉಜಿರೆ ಬಳಿ ಖಾಸಗಿ ವಾಹಿನಿ ವರದಿಗಾರನ ಮೇಲಿನ ಹಲ್ಲೆಗೆ ಸಂಬಂಧಿಸಿದಂತೆ ಇಂದು ಎರಡು ಪ್ರಕರಣಗಳಿಗೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ ಪೊಲೀಸರು ಇಂದು ಬೆಳಗ್ಗೆ 10 ಗಂಟೆಗೆ ಮತ್ತೆ ವಿಚಾರಣೆಗೆ ಬರುವಂತೆ ಸೂಚಿಸಿ ಬಿಟ್ಟು ಕಳುಹಿಸಿದ್ದಾರೆ. ವಿಚಾರಣೆ ವೇಳೆ, ವೀಡಿಯೊದಲ್ಲಿ ಹೇಳಿರುವ ವಿಚಾರಗಳ ಮೂಲ ನಿಮಗೆ ಎಲ್ಲಿಂದ ಸಿಕ್ತು?. ಅವು ನಿಜವಾದ ದಾಖಲೆಗಳೇ ಅಥವಾ ತಾವು ಕೃತಕವಾಗಿ ಸೃಷ್ಟಿಸಿದಿರಾ?, ವೀಡಿಯೊದಲ್ಲಿ ಮಾಡಿದ ಆರೋಪಗಳ ನಿಜಾಸತ್ಯತೆ ನಿಮಗೆ ಗೊತ್ತಿದೆಯಾ? ಇನ್ನೂ ಎಷ್ಟು ಮಂದಿ ಈ ವೀಡಿಯೊ ತಯಾರಿಕೆಯಲ್ಲಿ ನೇರ/ಪರೋಕ್ಷವಾಗಿ ಭಾಗವಹಿಸಿದ್ದಾರೆ? ವೀಡಿಯೊ ವೈರಲ್ ಮಾಡಲು ಯಾವುದೇ ಪೇಯ್ಡ್ ಪ್ರೊಮೋಶನ್ ಮಾಡಿದ್ದೀರಾ? ಎಂಬ ಪ್ರಶ್ನೆಗಳನ್ನು ಪೊಲೀಸರು ಕೇಳಿದ್ದಾರೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.







