ಮೈಸೂರು: ಧರ್ಮಸ್ಥಳದಲ್ಲಿ ನಡೆದಿರುವ ಸರಣಿ ಕೊಲೆ ಹಾಗೂ ಮೃತದೇಹಗಳ ಅಂತ್ಯಕ್ರಿಯೆ ಗೌಪ್ಯವಾಗಿ ನಡೆದಿರುವ ಪ್ರಕರಣದ ತನಿಖೆಗೆ SIT ತಂಡ ರಚಿಸಬೇಕೆಂಬ ವಕೀಲರ ನಿಯೋಗದ ಮನವಿ ಕುರಿತು ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ.ಸದ್ಯಕ್ಕೆ ಎಸ್ಐಟಿ (SIT) ರಚನೆ ಮಾಡುವುದಿಲ್ಲ ಎಂದು ತಿಳಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿರುವ ಸಿಎಂ ಸಿದ್ದರಾಮಯ್ಯ, ಯಾರೋ ಹೇಳಿದರೆಂದು SIT ರಚನೆ ಮಾಡಲು ಆಗುವುದಿಲ್ಲ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ತನಿಖೆ ಬಳಿಕ ಅಗತ್ಯವಿದ್ದಲ್ಲಿ ಎಸ್. ಐ. ಟಿ ರಚನೆ ಮಾಡ್ತೀವಿ. ನಮಗೆ ಯಾರಿಂದಲೂ ಒತ್ತಡ ಬಂದಿಲ್ಲ. ಒತ್ತಡ ಬಂದರೂ ನಾವು ಕೇರ್ ಮಾಡೋದಿಲ್ಲ ಎಂದು ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.
ಪ್ರಕರಣದ ತನಿಖೆಗೆ ಎಸ್‌ಐಟಿ ತಂಡ ರಚಿಸಬೇಕು ಎಂದು ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿ ವಿ. ಗೋಪಾಲಗೌಡ ಸೇರಿದಂತೆ ಅನೇಕ ವಕೀಲರು ಸಿಎಂ ಗೆ ಮನವಿ ಸಲ್ಲಿಸಿದ್ದರು.ಧರ್ಮಸ್ಥಳ ಗ್ರಾಮದ ಅರಣ್ಯ ಪ್ರದೇಶಗಳಲ್ಲಿ ಅಕ್ರಮವಾಗಿ ಹಲವು ಶವಗಳನ್ನು ಹೂತಿಡಲಾಗಿದೆ ಎನ್ನುವ ಆರೋಪ ಕೇಳಿ ಬಂದಿದೆ. ಈ ಸಂಬಂಧ ವ್ಯಕ್ತಿಯೋರ್ವ ತಾನೇ ಶವ ಹೂತಿಟ್ಟುದ್ದು ಎಂದು ಪೊಲೀಸರ ಬಳಿ ಒಪ್ಪಿಕೊಂಡಿದ್ದಾರೆ. ಈ ಪ್ರಕರಣ ಸಂಬಂಧ ಪೊಲೀಸರು ತನಿಖೆ ನಡೆಸುತ್ತಿದ್ದಾರೆ
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.



