ಮಂಗಳೂರು: ಧರ್ಮಸ್ಥಳದಲ್ಲಿ ಶವ ಹೂತಿದ್ದಾಗಿ ದೂರು ವಿಚಾರವಾಗಿ ಇದೀಗ ಎಸ್ಐಟಿ ಅಧಿಕಾರಿಗಳು ಮಾಸ್ಕ್ಮ್ಯಾನ್ ಸಿಎನ್ ಚಿನ್ನಯ್ಯ ಅಲಿಯಾಸ್ ಚೆನ್ನನನ್ನು ಬಂಧಿಸಿದ್ದಾರೆ . ತಲೆಬುರುಡೆ ತಂದ ಕೇಸ್ನಲ್ಲಿ ಎಸ್ಐಟಿ ಅಧಿಕಾರಿಗಳು ಚಿನ್ನಯ್ಯನನ್ನು ಬಂಧಿಸಿದ್ದು, ಆ ಮೂಲಕ ಸಾಕ್ಷಿ ಸಂರಕ್ಷಣಾ ಕಾಯ್ದೆಯಿಂದ ವಿಮುಖಗೊಳಿಸಲಾಗಿದೆ. ಇಂದು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಕೋರ್ಟ್ಗೆ ಮಾಸ್ಕ್ಮ್ಯಾನ್ ನನ್ನ ಎಸ್ಐಟಿ ಅಧಿಕಾರಿಗಳು ಹಾಜರುಪಡಿಸಲಿದ್ದಾರೆ.ಇನ್ನು ನ್ಯಾಯಾಲಯಕ್ಕೆ ಹಾಜರುಪಡಿಸುವ ಮುನ್ನ ಮಾಸ್ಕ್ಮ್ಯಾನ್ಗೆ ಎಸ್ಐಟಿ ಅಧಿಕಾರಿಗಳು ವೈದ್ಯಕೀಯ ತಪಾಸಣೆ ಮಾಡಿಸಲಿದ್ದಾರೆ. ಬೆಳ್ತಂಗಡಿ ತಾಲೂಕು ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್ ನಡೆಯಲಿದೆ. ಬಳಿಕ ಬೆಳ್ತಂಗಡಿ ಕೋರ್ಟ್ ಮುಂದೆ ಹಾಜರು ಪಡಿಸಲಾಗುವುದು. ಹೆಚ್ಚಿನ ವಿಚಾರಣೆಗಾಗಿ ಕಸ್ಟಡಿಗೆ ನೀಡುವಂತೆ SIT ಮನವಿ ಮಾಡಲಿದ್ದು, ಆ ಮೂಲಕ ಮತ್ತಷ್ಟು ವಿಚಾರಣೆ ನಡೆಸುವ ಸಾಧ್ಯತೆ ಇದೆ.
ಮಾಸ್ಕ್ಮ್ಯಾನ್ ಆರೋಪದ ಬಗ್ಗೆ ಎಸ್ಐಟಿ ಅಧಿಕಾರಿಗಳು ಮಾಸ್ಕ್ಮ್ಯಾನ್ ಸಿಎನ್ ಚಿನ್ನಯ್ಯನನ್ನು ತನಿಖೆ ಮಾಡಿದ್ದರು. ಐಪಿಎಸ್ ಅಧಿಕಾರಿ ಪ್ರಣವ್ ಮೊಹಂತಿ ಕೂಡ ನಿನ್ನೆ ಮಧ್ಯಾಹ್ನ 2 ಗಂಟೆಯಿಂದ ಮಾಸ್ಕ್ಮ್ಯಾನ್ ವಿಚಾರಣೆ ಮಾಡಿದ್ದರು. ಸುದೀರ್ಘ ವಿಚಾರಣೆ ಬಳಿಕ ಇದೀಗ ಬಂಧಿಸಲಾಗಿದೆ.ಧರ್ಮಸ್ಥಳದಲ್ಲಿ ನೂರಾರು ಶವ ಹೂತಿರುವುದಾಗಿ ಅನಾಮಿಕ ಮಾಸ್ಕ್ಮ್ಯಾನ್ ಆರೋಪದಂತೆ ಎಸ್ಐಟಿ ಅಧಿಕಾರಿಗಳು ಮಾಸ್ಕ್ಮ್ಯಾನ್ ತೋರಿಸಿದ ಸ್ಥಳಗಳಲ್ಲಿ ಅಗೆದು ಶೋಧ ಕಾರ್ಯ ಮಾಡಿದ್ದರು. ಎರಡು ಸ್ಥಳಗಳಲ್ಲಿ ಒಂದೆಡೆ ಅಸ್ಥಿಪಂಜರ ಸಿಕ್ಕಿದ್ದರೆ, ಮತ್ತೊಂದು ಜಾಗದಲ್ಲಿ ಮಾನವನ ಮೂಳೆಗಳು ಪತ್ತೆಯಾಗಿದ್ದವು. ಬಳಿಕ ಎಸ್ಐಟಿ ಅಧಿಕಾರಿಗಳು ಉತ್ಖನನ ಕಾರ್ಯವನ್ನು ಸ್ಥಗಿತಗೊಳಿಸಿದ್ದರು. ನಂತರ ಮಾಸ್ಕ್ಮ್ಯಾನ್ನನ್ನು ವಿಚಾರಣೆಗೊಳಪಡಿಸಲಾಗಿತ್ತು. ಈ ಮಧ್ಯೆ ಧರ್ಮಸ್ಥಳದಲ್ಲಿ ಮಾಸ್ಕ್ಮ್ಯಾನ್ ಜೊತೆ ಕೆಲಸ ಮಾಡಿದ್ದ ಮಂಡ್ಯದ ವ್ಯಕ್ತಿ ಸ್ಫೋಟಕ ಮಾಹಿತಿ ಬಿಚ್ಚಿಟ್ಟಿದ್ದರು. ದೂರುದಾರ ಹೇಳ್ತಿರೋದೇ ಸುಳ್ಳು ಎಂದಿದ್ದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.







