ಚನ್ನಪಟ್ಟಣ: ಡಿಜಿಟಲ್ ಅರೆಸ್ಟ್ ಹೆದರಿ ಬೆಸ್ಕಾಂ ನೌಕರನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮನಗರ ಜಿಲ್ಲೆ ಚನ್ನ ಪಟ್ಟಣ ತಾಲೂಕಿನ ಕೆಲಗೆರೆ ಗ್ರಾಮದಲ್ಲಿ ನಡೆದಿದೆ. ವಿಕ್ರಮ್ ಗೋಸ್ವಾಮಿ ಎಂಬಾತ ಸಿಬಿಐ ಅಧಿಕಾರಿ ಹೆಸರಲ್ಲಿ ಕರೆ ಮಾಡಿ ನಿಮ್ಮ ಮೇಲೆ ಅರೆಸ್ಟ್ ವಾರೆಂಟ್ ಇದೆ ಎಂದು ಹೇಳಿ 11 ಲಕ್ಷ ರು. ದೋಚಿದ್ದಲ್ಲದೇ ಮತ್ತೆ ಹಣ ಕೊಡುವಂತೆ ಬೆದರಿಕೆ ಹಾಕಿದ ಹಿನ್ನೆಲೆಯಲ್ಲಿ ಕೆ.ಕುಮಾರ್(48) ನೇಣಿಗೆ ಶರಣಾಗಿದ್ದಾರೆ. ಮೊದಲು 1 ಲಕ್ಷ 95 ಸಾವಿರ ರು. ಹಣ ಹಾಕುವಂತೆ ಸೂಚಿಸಿ ಖಾತೆ ನಂ. ಕಳುಹಿಸಿದ್ದ. ಭಯಪಟ್ಟು ಹಣ ಹಾಕಿದೆ. ನಂತರ ಮತ್ತೆ ಫೋನ್ ಮಾಡಿ ಆ ಅಕೌಂಟ್‌ಗೆ, ಈ ಅಕೌಂಟ್‌ಗೆ ಹಣ ಹಾಕು ಎಂದು ನನ್ನಿಂದ ಸುಮಾರು ₹11 ಲಕ್ಷ ಹಾಕಿಸಿಕೊಂಡಿದ್ದಾನೆ. ನಂತರ ಮತ್ತೆ *2.75 ಲಕ್ಷ ಕಳುಹಿಸು ಎಂದು ಕಾಡಿಸುತ್ತಿದ್ದಾರೆ. ಆದ ಕಾರಣ ನನ್ನ ಸಾವನ್ನು ನಾನೇ ತಂದುಕೊಂಡಿದ್ದೇನೆ’ ಎಂದು ಕುಮಾರ್ ಡೆತ್ ನೋಟ್‌ನಲ್ಲಿ ಉಲ್ಲೇಖಿಸಿ ದ್ದಾರೆ ಎಂದು ತಿಳಿದುಬಂದಿದೆ.ಎಂ.ಕೆ. ದೊಡ್ಡಿ ಠಾಣೆಯಲ್ಲಿ ಕೇಸ್ ದಾಖಲಾಗಿದೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.



