Close Menu
  • ಕ್ರೀಡೆ
  • ಕ್ರೈಂ
  • ಭವಿಷ್ಯ
  • ದೇಶ-ವಿದೇಶ
  • ವ್ಯಾಪಾರ
  • ಸಿನಿಮಾ
What's Hot

28/05/2026 ರ ನಿತ್ಯ ಭವಿಷ್ಯ

27/05/2026 ರ ನಿತ್ಯ ಭವಿಷ್ಯ – ಬುಧವಾರ

26/05/2026 ರ ನಿತ್ಯ ಭವಿಷ್ಯ

Facebook X (Twitter) Instagram
  • ಕ್ರೀಡೆ
  • ಕ್ರೈಂ
  • ಭವಿಷ್ಯ
  • ದೇಶ-ವಿದೇಶ
  • ವ್ಯಾಪಾರ
  • ಸಿನಿಮಾ
Facebook X (Twitter) Instagram
Times Of Bayaluseeme
  • ಮುಖಪುಟ
  • ಕ್ರೀಡೆ
  • ಕ್ರೈಂ
  • ಜಿಲ್ಲಾ ಸುದ್ದಿ
  • ರಾಜಕೀಯ
  • ರಾಜ್ಯ
  • ಸಿನಿಮಾ
Subscribe
Times Of Bayaluseeme
Home»ಜಿಲ್ಲಾ ಸುದ್ದಿ»ಚಿತ್ರದುರ್ಗ»ಜಿಲ್ಲಾ ಮಟ್ಟದ ಕಾರ್ಯಪಡೆ ಸಭೆಯಲ್ಲಿ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೂಚನೆ
ಚಿತ್ರದುರ್ಗ

ಜಿಲ್ಲಾ ಮಟ್ಟದ ಕಾರ್ಯಪಡೆ ಸಭೆಯಲ್ಲಿ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೂಚನೆ

ಮೃತ್ಯುಂಜಯಾಚಾರ್ ಬಿBy ಮೃತ್ಯುಂಜಯಾಚಾರ್ ಬಿMarch 27, 2026No Comments3 Mins Read
Share WhatsApp Facebook Twitter Threads Telegram
Follow Us
Facebook Instagram
Share
WhatsApp Twitter Facebook Telegram

ಜಿಲ್ಲಾ ಮಟ್ಟದ ಕಾರ್ಯಪಡೆ ಸಭೆಯಲ್ಲಿ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೂಚನೆ

ಎಚ್‍ಪಿವಿ ಲಸಿಕಾ ಅಭಿಯಾನ: ಪರಿಣಾಮಕಾರಿಯಾಗಿ ಅನುಷ್ಠಾನ ಮಾಡಿ

ಹೆಣ್ಣು ಮಕ್ಕಳಲ್ಲಿ ಕಾಣಿಸಿಕೊಳ್ಳುವ ಗರ್ಭಕಂಠದ ಕ್ಯಾನ್ಸರ್ ತಡೆಗಟ್ಟುವಲ್ಲಿ ಎಚ್‍ಪಿವಿ (ಹ್ಯೂಮನ್ ಪ್ಯಾಪಿಲೋಮ ವೈರಸ್) ಲಸಿಕೆ ಅತ್ಯಂತ ಪರಿಣಾಮಕಾರಿಯಾಗಿದ್ದು, ಎಚ್‍ಪಿವಿ ಲಸಿಕಾ ಅಭಿಯಾನವನ್ನು ಜಿಲ್ಲೆಯಲ್ಲಿ ಪರಿಣಾಮಕಾರಿಯಾಗಿ ಅನುಷ್ಠಾನ ಮಾಡುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಜಿಲ್ಲಾ ಮಟ್ಟದ ಎಚ್‍ಪಿವಿ ಲಸಿಕಾ ಕಾರ್ಯಕ್ರಮದ ಕಾರ್ಯಪಡೆ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಲಸಿಕೆ ನೀಡುವ ಮುನ್ನ ಶಾಲಾ ಹಂತದಲ್ಲಿ ಪೋಷಕರು ಮತ್ತು ಶಿಕ್ಷಕರ ಸಭೆ ನಡೆಸಿ ಎಚ್‍ಪಿವಿ ಲಸಿಕೆಯ ಮಹತ್ವ ಹಾಗೂ ಅಗತ್ಯತೆ ಕುರಿತು ಅರಿವು ಮೂಡಿಸಬೇಕು. ಈ ಕುರಿತು ಪೋಷಕರಲ್ಲಿ ಇರುವ ತಪ್ಪು ಕಲ್ಪನೆಗಳನ್ನು ಹೋಗಲಾಡಿಸಿ ಜಾಗೃತಿ ಮೂಡಿಸಬೇಕು. ಜಿಲ್ಲೆಯಾದ್ಯಂತ ಹಮ್ಮಿಕೊಳ್ಳಲಾಗಿರುವ ಎಚ್‍ಪಿವಿ ಲಸಿಕಾ ಅಭಿಯಾನವನ್ನು ಯಶಸ್ವಿಗೊಳಿಸಲು ಶಾಲಾ ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸೇರಿದಂತೆ ಎಲ್ಲಾ ಇಲಾಖೆಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸಬೇಕು ಎಂದು ತಾಕೀತು ಮಾಡಿದರು.
ಖಾಸಗಿ ಆಸ್ಪತ್ರೆಗಳಲ್ಲಿ ಈ ಲಸಿಕೆ ಪಡೆಯಲು ಸುಮಾರು ರೂ.9000/- ದಿಂದ ರೂ.15000/- ಸಾವಿರದವರೆಗೂ ವೆಚ್ಚವಾಗುತ್ತದೆ. ಸರ್ಕಾರವು ಇದನ್ನು ಉಚಿತವಾಗಿ ನೀಡುತ್ತಿರುವಾಗ, ಅರ್ಹ ವಯಸ್ಸಿನ ಹೆಣ್ಣು ಮಕ್ಕಳು ಇದರ ಸದುಪಯೋಗ ಪಡೆದುಕೊಳ್ಳುವಂತೆ ನೋಡಿಕೊಳ್ಳಬೇಕು ಎಂದು ತಿಳಿಸಿದ ಅವರು, ಲಸಿಕೆ ಕುರಿತು ತಪ್ಪು ಮಾಹಿತಿ ಹರಡುವವರ ವಿರುದ್ಧ ಕಟ್ಟುನಿಟ್ಟಿನ ಕ್ರಮಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಜಿಲ್ಲಾ ಆರ್‍ಸಿಹೆಚ್ ಅಧಿಕಾರಿ ಡಾ. ಡಿ.ಎಂ.ಅಭಿನವ ಮಾತನಾಡಿ, ಮಹಿಳೆಯರನ್ನು ಕಾಡುವ ಗರ್ಭಕಂಠದ ಕ್ಯಾನ್ಸರ್ ತಡೆಗಟ್ಟುವ ನಿಟ್ಟಿನಲ್ಲಿ ಸರ್ಕಾರದ ಮಾರ್ಗಸೂಚಿಯಂತೆ 14 ವರ್ಷ ಪೂರೈಸಿದ ಮತ್ತು 15 ವರ್ಷದೊಳಗಿನ ಹೆಣ್ಣು ಮಕ್ಕಳನ್ನು ಎಚ್‍ಪಿವಿ ಲಸಿಕಾ ಅಭಿಯಾನದ ಫಲಾನುಭವಿಗಳೆಂದು ಗುರುತಿಸಲಾಗಿದ್ದು, ಜಿಲ್ಲೆಯಲ್ಲಿ ಸುಮಾರು 18,267 ಹೆಣ್ಣು ಮಕ್ಕಳಿಗೆ ಲಸಿಕೆ ನೀಡುವ ಗುರಿ ಹೊಂದಲಾಗಿದೆ ಎಂದು ತಿಳಿಸಿದರು.
ಈ ಲಸಿಕಾ ಅಭಿಯಾನದಲ್ಲಿ “ಗಾರ್ಡಸಿಲ್ 4” ಲಸಿಕೆ ಬಳಸಲಾಗುತ್ತಿದ್ದು, ಇದು ಎಚ್‍ಪಿವಿ ವೈರಸ್‍ನ 6, 11, 16 ಮತ್ತು 18 ಎಂಬ ನಾಲ್ಕು ರೂಪಾಂತರಗಳ ವಿರುದ್ಧ ರಕ್ಷಣೆ ನೀಡುತ್ತದೆ. ಜಿಲ್ಲೆಯ 347 ಉಪ ಕೇಂದ್ರಗಳು, 86 ಪ್ರಾಥಮಿಕ ಆರೋಗ್ಯ ಕೇಂದ್ರಗಳು, 11 ಸಮುದಾಯ ಆರೋಗ್ಯ ಕೇಂದ್ರಗಳು ಹಾಗೂ ಜಿಲ್ಲಾ ಆಸ್ಪತ್ರೆ ಸೇರಿದಂತೆ ಎಲ್ಲಾ ಸರ್ಕಾರಿ ಆರೋಗ್ಯ ಸಂಸ್ಥೆಗಳಲ್ಲಿ ಲಸಿಕೆ ಲಭ್ಯವಿರುತ್ತದೆ. ಈ ಅಭಿಯಾನವು ಈಗಾಗಲೇ ಕಳೆದ ಒಂದು ವಾರದಿಂದ ಪ್ರಾರಂಭವಾಗಿದ್ದು, ಮುಂದಿನ ಮೂರು ತಿಂಗಳ ಕಾಲ ನಡೆಯಲಿದೆ. ಲಸಿಕೆಯನ್ನು ಎಡಗೈ ಮೇಲ್ಭಾಗಕ್ಕೆ 0.5 ಮಿ.ಲೀ ಪ್ರಮಾಣವನ್ನು ಸ್ನಾಯುಗಳ ಮೂಲಕ ನೀಡಲಾಗುತ್ತದೆ ಎಂದು ಹೇಳಿದರು.
ನಿಗದಿತ ವಯೋಮಿತಿಗಿಂತ ಹೊರಗಿರುವವರು, ಗರ್ಭಿಣಿಯರು, ಈಗಾಗಲೇ ಬೇರೆ ಲಸಿಕೆ ಪಡೆದವರು, ಲಸಿಕೆಯಿಂದ ಅಲರ್ಜಿ ಇತಿಹಾಸ ಹೊಂದಿರುವವರು ಹಾಗೂ ತೀವ್ರ ಸ್ವರೂಪದ ಕಾಯಿಲೆಯಿಂದ ಬಳಲುತ್ತಿರುವವರಿಗೆ ಈ ಲಸಿಕೆ ನೀಡುವುದಿಲ್ಲ. ಜಿಲ್ಲೆಯಲ್ಲಿ ಒಟ್ಟು 74 ವೈದ್ಯಾಧಿಕಾರಿಗಳು ಹಾಗೂ 423 ನರ್ಸಿಂಗ್ ಸಿಬ್ಬಂದಿ ಹಾಗೂ 292 ಪಿಹೆಚ್‍ಸಿಓ ಅವರು ಸಕ್ರಿಯಾಗಿ ಪಾಲ್ಗೊಳ್ಳುತ್ತಿದ್ದು, ಸಾರ್ವಜನಿಕರು ಈ ಸದಾವಕಾಶ ಬಳಸಿಕೊಂಡು ತಮ್ಮ ಹೆಣ್ಣು ಮಕ್ಕಳ ಆರೋಗ್ಯ ರಕ್ಷಣೆಗೆ ಮುಂದಾಗಬೇಕು ಎಂದು ಮನವಿ ಮಾಡಿದರು.
ಹೆಚ್‍ಪಿವಿ ಲಸಿಕಾ ಅಭಿಯಾನದ ಕಾರ್ಯಕ್ರಮಕ್ಕಾಗಿ ವಿವಿಧ ಇಲಾಖೆಗಳ ಸಹಕಾರ ಅತ್ಯಗತ್ಯವಾಗಿದ್ದು, ಶಿಕ್ಷಣ ಇಲಾಖೆಯು 14 ವರ್ಷ ವಯಸ್ಸಿನ ಅರ್ಹ ಹೆಣ್ಣು ಮಕ್ಕಳ ಸಂಖ್ಯೆ ಮತ್ತು ವಿವರವನ್ನು ತಿಳಿಸುವ ಶಾಲೆಗಳ ಲೈನ್‍ಲಿಸ್ಟ್‍ನ್ನು ಯುಡಿಐಎಸ್‍ಇ ಪೋರ್ಟಲ್‍ನಲ್ಲಿ ಹಂಚಿಕೊಳ್ಳುವುದು. ಪೋಷಕರು-ಶಿಕ್ಷಕರ ಸಭೆಯನ್ನು ಆಯೋಜಿಸಿ, ದಿನಾಂಕಗಳನ್ನು ಸ್ಥಳೀಯ ಅರೋಗ್ಯ ಕೇಂದ್ರದೊಂದಿಗೆ ಹಂಚಿಕೊಳ್ಳುವುದು ಮತ್ತು ಸಂಪರ್ಕ ಪ್ರಯತ್ನಗಳನ್ನು ಹೆಚ್ಚಿಸುವುದು. ಪ್ರತಿ ಶಾಲೆಯು ಜಾಗೃತಿ ಮೂಡಿಸುವಿಕೆ ಪ್ರಯತ್ನ ಮುನ್ನಡೆಸಲು ಮತ್ತು ಸ್ಥಳೀಯ ಆರೋಗ್ಯ ಕೇಂದ್ರಗಳ ವೈದ್ಯಾಧಿಕಾರಿಗಳೊಂದಿಗೆ ನೇರ ಸಂಪರ್ಕಾಧಿಕಾರಿಯಾಗಿ ಕಾರ್ಯನಿರ್ವಹಿಸಲು ಜವಾಬ್ದಾರಿಯುತ ನೋಡಲ್ ಶಿಕ್ಷಕರನ್ನು ನೇಮಿಸಬೇಕು. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಒದಗಿಸಲಾದ ಎಲ್ಲಾ ಮಾಹಿತಿ, ಶಿಕ್ಷಣ ಮತ್ತು ಸಂವಹನ ಸಾಮಗ್ರಿಗಳನ್ನು ಬಳಸಿ ಜಾಗೃತಿ ಮೂಡಿಸುವುದು ಎಂದು ತಿಳಿಸಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಎಚ್‍ಪಿವಿ ಲಸಿಕಾಕರಣ ಸೇವಾ ವಿತರಣೆ ಮತ್ತು ಜಾಗೃತಿ ಹೆಚ್ಚಿಸಲು ಪೋಷಣ್ ಅಭಿಯಾನ, ಮಿಷನ್ ಶಕ್ತಿ, ಕಿಶೋರಿ ಶಕ್ತಿ ಯೋಜನೆ, ತಾಯಂದಿರ ಸಭೆ, ಗ್ರಾಮ ಆರೋಗ್ಯ ಪೌಷ್ಠಿಕ ದಿನ, ಸ್ವ-ಸಹಾಯ ಗುಂಪು ಸಭೆ ಮತ್ತು ಬೇಟಿ ಬಚಾವೋ ಬೇಟಿ ಪಢಾವೋದಂತಹ ಆಸ್ತಿತ್ವದಲ್ಲಿರುವ ವೇದಿಕೆಗಳನ್ನು ಬಳಸಿಕೊಳ್ಳುವುದು. ಸರ್ಕಾರಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗಳಲ್ಲಿ ಎಚ್‍ಪಿವಿ ಲಸಿಕಾಕರಣಕ್ಕಾಗಿ ಲಸಿಕಾ ಸತ್ರಗಳನ್ನು ಆಯೋಜಿಸುವುದು ಎಂದು ತಿಳಿಸಿದರು.
ಸಭೆಯಲ್ಲಿ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಜಿ.ಪಿ.ರೇಣುಪ್ರಸಾದ್, ಜಿಲ್ಲಾ ಪಂಚಾಯಿತಿ ಯೋಜನಾ ನಿರ್ದೇಶಕಿ ಜಯಲಕ್ಷ್ಮೀ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ವಿಜಯ್ ಕುಮಾರ್ ಸೇರಿದಂತೆ ಆರೋಗ್ಯ ಇಲಾಖೆಯ ವೈದ್ಯಾಧಿಕಾರಿಗಳು ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.

chitradurga goverment karanataka karnataka ಕರ್ನಾಟಕ ಚಿತ್ರದುರ್ಗ ಬೆಂಗಳೂರು
Follow on Facebook Follow on Instagram
Share. Facebook Twitter WhatsApp Telegram
Previous Articleಚಿತ್ರದುರ್ಗ ವೈದ್ಯಕೀಯ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಆರೋಗ್ಯ ತಪಾಸಣಾ ಶಿಬಿರ ಯಶಸ್ವಿ
Next Article ಡಾ.ಜೆ.ಕರಿಯಪ್ಪ ಮಾಳಿಗೆ: ನಡೆ–ನುಡಿ 
ಮೃತ್ಯುಂಜಯಾಚಾರ್ ಬಿ
  • Website

ಮೃತ್ಯುಂಜಯಾಚಾರ್ ಬಿ ಉಪ ಸಂಪಾದಕರು, ಟೈಮ್ಸ್ ಆಫ್ ಬಯಲುಸೀಮೆ ಮೃತ್ಯುಂಜಯಾಚಾರ್ ಬಿ ಅವರು 'ಟೈಮ್ಸ್ ಆಫ್ ಬಯಲುಸೀಮೆ' (timesofbayaluseeme.com) ಕನ್ನಡ ಸುದ್ದಿ ಪೋರ್ಟಲ್‌ನಲ್ಲಿ ಉಪ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಆಳವಾದ ಆಸಕ್ತಿ ಹೊಂದಿರುವ ಇವರು, ನಿಖರವಾದ ಸುದ್ದಿ ವಿಶ್ಲೇಷಣೆ ಮತ್ತು ಜನಪರ ವರದಿಗಳನ್ನು ನೀಡುವಲ್ಲಿ ಸದಾ ಕಾರ್ಯಪ್ರವೃತ್ತರಾಗಿದ್ದಾರೆ. ಪ್ರಚಲಿತ ವಿದ್ಯಮಾನಗಳು ಹಾಗೂ ಪ್ರಾದೇಶಿಕ ಸುದ್ದಿಗಳ ಬಗ್ಗೆ ಇವರು ವಿಶೇಷ ಗಮನಹರಿಸುತ್ತಾರೆ.

Related Posts

ಸೋಲಿಲ್ಲದ ಸರದಾರನ ಪಯಣ ಅಂತ್ಯ: ಸಚಿವ ಡಿ. ಸುಧಾಕರ್ ಅಕಾಲಿಕ ನಿಧನಕ್ಕೆ ರಾಜ್ಯಸ್ತಬ್ದ

May 10, 2026

ಮೈಸೂರು ಕೆಫೆ ಮಾಲೀಕ ವೇದವ್ಯಾಸ ಆಚಾರ್ಯ ( ಅಣ್ಣಾದೊರೈ) ನಿಧನ

May 10, 2026

ಸಚಿವ ಡಿ. ಸುಧಾಕರ್ ನಿಧನ; ಸಾರ್ವಜನಿಕ ಅಂತಿಮ ದರ್ಶನ

May 10, 2026
Add A Comment
Leave A Reply Cancel Reply

Advertisement
Latest Posts

28/05/2026 ರ ನಿತ್ಯ ಭವಿಷ್ಯ

27/05/2026 ರ ನಿತ್ಯ ಭವಿಷ್ಯ – ಬುಧವಾರ

26/05/2026 ರ ನಿತ್ಯ ಭವಿಷ್ಯ

ಬಳ್ಳಾರಿ ಜನರೇ ಗಮನಿಸಿ: ಮೇ 26 ರಂದು ನಗರದ ಈ ಭಾಗಗಳಲ್ಲಿ 7 ಗಂಟೆ ವಿದ್ಯುತ್ ಕಡಿತ!

Trending Posts

Subscribe to News

Get the latest sports news from NewsSite about world, sports and politics.

Facebook X (Twitter) Pinterest Vimeo WhatsApp TikTok Instagram

News

  • World
  • US Politics
  • EU Politics
  • Business
  • Opinions
  • Connections
  • Science

Company

  • Information
  • Advertising
  • Classified Ads
  • Contact Info
  • Do Not Sell Data
  • GDPR Policy
  • Media Kits

Services

  • Subscriptions
  • Customer Support
  • Bulk Packages
  • Newsletters
  • Sponsored News
  • Work With Us

Subscribe to Updates

Get the latest creative news from FooBar about art, design and business.

© 2026 ThemeSphere. Designed by ThemeSphere.
  • Privacy Policy
  • Terms
  • Accessibility

Type above and press Enter to search. Press Esc to cancel.