ಬೆಂಗಳೂರು: ಬೆಂಗಳೂರು ನಗರಾಭಿವೃದ್ಧಿ ಸಚಿವರು ಆಗಿರುವ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ನಗರದ ಹೊಸ ಮೇಲ್ಸೇತುವೆಯೊಂದರ ಮೇಲೆ ಬೈಕ್ ಓಡಿಸಿ ಗಮನ ಸೆಳೆದರು.ಈ ಹಿಂದೆ ವಿಧಾನಸೌಧದ ಮುಂಭಾಗ ಸೈಕಲ್ ತುಳಿದು ಗಮನ ಸೆಳೆದಿದ್ದ ಡಿಕೆ ಶಿವಕುಮಾರ್, ಇಂದು ಹೆಬ್ಬಾಳದ ಹೊಸ ಮೇಲ್ಸೇತುವೆ ಮೇಲೆ ಸ್ಕೂಟರ್ ಓಡಿಸುವ ಮೂಲಕ ಸಾರ್ವಜನಿಕರು ಹಾಗೂ ಅಧಿಕಾರಿಗಳ ಕುತೂಹಲದ ಕೇಂದ್ರ ಬಿಂದುವಾದರು.
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದದಿಂದ ಕೈಗೆತ್ತಿಕೊಂಡಿರುವ ಹೆಬ್ಬಾಳದ ಬ್ಯಾಪ್ಟಿಸ್ಟ್ ಆಸ್ಪತ್ರೆ ಬಳಿ ಮೇಲ್ಸೇತುವೆ ಕಾಮಗಾರಿಯನ್ನು ಅಧಿಕಾರಿಗಳೊಂದಿಗೆ ವೀಕ್ಷಣೆ ಮಾಡಿದ ಡಿಕೆ ಶಿವಕುಮಾರ್, ಬಳಿಕ ಹೊಸ ಫ್ಲೈಓವರ್ ಮೇಲೆ ಬೈಕ್ ರೈಡ್ ಮಾಡಿ ಸಂಭ್ರಮಿಸಿದರು.ಕಾರ್ಯಕರ್ತರೊಬ್ಬರ ಡಿಯೋ ಸ್ಕೂಟರ್ ನ್ನು ಪಡೆದ ಡಿಕೆ ಶಿವಕುಮಾರ್, ಹಿಂಬದಿ ಸೀಟಿನಲ್ಲಿ ಸಚಿವ ಬೈರತಿ ಸುರೇಶ್ ಅವರನ್ನು ಕುಳಿರಿಸಿಕೊಂಡು ಹೊಸ ಫ್ಲೈಓವರ್ ಮೇಲೆ ಒಂದು ರೌಂಡ್ ಬಂದರು. ಈ ಮೂಲಕ ಕಾರ್ಯಕರ್ತರಲ್ಲಿಯೂ ಉತ್ಸಾಹ ಹೆಚ್ಚಿಸಿದರು. ಡಿಕೆ ಶಿವಕುಮಾರ್ ಪರ ಕಾರ್ಯಕರ್ತರು ಘೋಷಣೆ ಹರ್ಷೋದ್ಗಾರ ಮೊಳಗಿಸಿದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.



