ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜನ್ಮದಿನದ ಹಿನ್ನೆಲೆಯಲ್ಲಿ ಉಪಮುಖ್ಯ ಮಂತ್ರಿ ಡಿ.ಕೆ.ಶಿವಕುಮಾರ್ ಶುಭಕೋರಿದ್ದು, ‘ಕರ್ನಾಟಕದ ಕಲ್ಯಾಣಕ್ಕಾಗಿ ನಮ್ಮ ‘ಕೈ’ ಹೀಗೆ ಜೊತೆಯಾಗಿರಲಿದೆ’ ಎಂದು ಹೇಳಿದ್ದಾರೆ.ಈ ಬಗ್ಗೆ ಸಿದ್ದರಾಮಯ್ಯ ಅವರ ಕೈ ಹಿಡಿದುಕೊಂಡಿರುವ ಫೋಟೋ ಸಹಿತ ಟ್ವಿಟ್ ಮಾಡಿರುವ ಡಿ.ಕೆ. ಶಿವಕುಮಾರ್ ಅವರು, ರಾಜ್ಯದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರಿಗೆ ಜನ್ಮದಿನದ ಶುಭಾಶಯಗಳು ತಮ್ಮ ಸುದೀರ್ಘ ರಾಜಕೀಯ ಜೀವನದಲ್ಲಿ ಹಿಂದುಳಿದ ವರ್ಗದವರಿಗೆ ಸಾಮಾಜಿಕ ನ್ಯಾಯ ಒದಗಿಸುವಮೂಲಕ ಉತ್ತಮ ಆಡಳಿತಕ್ಕೆ ಹೆಸರುವಾಸಿಯಾಗಿದ್ದೀರಿ.ಕನ್ನಡಿಗರ ಹಿತ ಕಾಪಾಡಲು, ಕರ್ನಾಟಕದ ಕಲ್ಯಾಣಕ್ಕಾಗಿ ನಮ್ಮ ‘ಕೈ’ ಹೀಗೆ ಜೊತೆಯಾಗಿರಲಿದೆ. ದೇವರು ತಮಗೆ ಉತ್ತಮ ಆಯುರಾರೋಗ್ಯ ನೀಡಿ ಕಾಪಾಡಲಿ ಎಂದು ಶುಭ ಹಾರೈಸುತ್ತೇನೆ ಎಂದು ಹೇಳಿದ್ದಾರೆ.ಇದೇವೇಳೆ ಗೃಹ ಸಚಿವ ಡಾ.ಜಿ.ಪರಮೇಶ್ವರ್, ಜಮೀರ್ ಅಹಮದ್ ಖಾನ್ ಸೇರಿ ಸಚಿವರು, ಶಾಸಕರು ಸಾಮಾಜಿಕ ಜಾಲತಾಣಗಳ ಮೂಲಕ ಶುಭ ಕೋರಿದ್ದು, ರಾಜ್ಯದ ವಿವಿದೆಡೆ ಸಿದ್ದರಾಮಯ್ಯ ಅವರ ಅಭಿಮಾನಿಗಳು ವಿವಿಧ ಸೇವಾ ಕಾರ್ಯಕ್ರಮಗಳ ಮೂಲಕ ಹುಟ್ಟುಹಬ್ಬ ಆಚರಣೆ ಮಾಡಿದ್ದಾರೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.



