ವಿಧಾನಸಭೆಯಲ್ಲಿ ಡಿಕೆ ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷರಾಗಿ RSS ಸಂಘದ ಗೀತೆ ಹಾಡಿದ್ದು ತಪ್ಪು ಅವರು ಕ್ಷಮೆ ಕೇಳಬೇಕು ಎಂದು ಕಾಂಗ್ರೆಸ್ ನಾಯಕ ಬಿಕೆ ಹರಿಪ್ರಸಾದ್ ಆಗ್ರಹಿಸಿದ್ದಾರೆ. ಇದೇ ವಿಷಯವಾಗಿ ಮಾತನಾಡಿರುವ ಮಾಜಿ ಸಚಿವ ಕೆಎನ್ ರಾಜಣ್ಣ, ಅವರು ಆರ್ಎಸ್ಎಸ್ ಗೀತೆ ಹಾಡಬಹುದು, ಖಾಸಗಿ ಕಾರ್ಯಕ್ರಮದಲ್ಲಿ ಬಿಜೆಪಿ ನಾಯಕ ಅಮಿತ್ ಶಾ ಜತೆಗೆ ವೇದಿಕೆ ಹಂಚಿಕೊಳ್ಳಬಹುದು, ಏನು ಬೇಕಾದರೂ ಮಾಡಬಹುದು. ನಾವು ಏನೂ ಮಾತಾಡುವಂತಿಲ್ಲ ಎಂದು ಮಾಜಿ ಸಚಿವ ಕೆ.ಎನ್.ರಾಜಣ್ಣ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧ ಕಿಡಿಕಾರಿದ್ದಾರೆ. ಪ್ರಯಾಗ್ರಾಜ್ನ ಗಂಗೆಯಲ್ಲಿ ಸ್ನಾನ ಮಾಡಿದ ಮಾತ್ರಕ್ಕೆ ಬಡತನ ನಿವಾರಣೆಯಾಗುವುದಿಲ್ಲ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದರು. ಇದರ ನಂತರವೂ ಡಿ.ಕೆ.ಶಿವಕುಮಾರ್ ಹೋಗಿ ಪುಣ್ಯ ಸ್ನಾನ ಮಾಡಿದರು. ಆರೆಸ್ಸೆಸ್ ಕಾಂಗ್ರೆಸ್ ಸಿದ್ದಾಂತಕ್ಕೆ ತದ್ವಿರುದ್ದ ಎಂದು ಗೊತ್ತಿದ್ದರೂ ಸದನದಲ್ಲಿ ಆರೆಸ್ಸೆಸ್ ಗೀತೆ ಹಾಡುತ್ತಾರೆ. ಈ ಎಲ್ಲಾ ವೈರುಧ್ಯಗಳಿಗೆ ಸೂಕ್ತ ಸಮಯದಲ್ಲಿ ಉತ್ತರ ನೀಡಲಿದ್ದೇನೆ ಎಂದು ಅಸಮಾಧಾನ ಹೊರಹಾಕಿದ್ದಾರೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.







