ಚಿತ್ರದುರ್ಗ: ನಗರದ ಬಸವೇಶ್ವರ ಆಸ್ಪತ್ರೆಯ ವೈದ್ಯರ ನಿರ್ಲಕ್ಷ್ಯ ಯುವಕನೋರ್ವ ಸಾವನ್ನಪ್ಪಿರುವುದಾಗಿ ಯುವಕನ ಕುಟುಂಬಸ್ಥರು ಆರೋಪಿಸಿದ್ದಾರೆ.
ಚಿತ್ರದುರ್ಗ ನಗರದ ಬಾಪೂಜಿ ನಗರದ ನಿವಾಸಿ ವಿನಯ್ ಕುಮಾರ್ ಮನೆಯಲ್ಲಿ ಮಂಚದ ಮೇಲಿಂದ ಬಿದ್ದಿದ್ದ, ಆತನನ್ನು ಕೂಡಲೇ ಸ್ಥಳೀಯರು ಬಸವೇಶ್ವರ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆಗ ಆಸ್ಪತ್ರೆಯ ವೈದ್ಯರು ಸರಿಯಾದ ಚಿಕಿತ್ಸೆ ನೀಡದೇ ಬೇಜವಾಬ್ದಾರಿ ತೋರಿದ್ದರಿಂದ ವಿನಯ್ ಆಸ್ಪತ್ರೆಯಲ್ಲಿ ಪ್ರಾಣ ಬಿಟ್ಟಿದ್ದು, ಆತನ ಸಾವಿಗೆ ವೈದ್ಯರೇ ಕಾರಣ ಎಂದು ಆಕ್ರೋಶ ವ್ಯಕ್ತಪಡಿಸಿದರು. ವಿನಯ್ ಸಾವಿಗೆ ನ್ಯಾಯ ಒದಗಿಸಿ ಕೊಡಬೇಕು, ಆಸ್ಪತ್ರೆಯ ವೈದ್ಯರ ಮೇಲೆ ಕ್ರಮ ಜರುಗಿಸುವಂತೆ ಆಸ್ಪತ್ರೆ ಮುಂಭಾಗ ಸ್ಥಳೀಯರು ಕುಟುಂಬಸ್ಥರು ಕೆಲಕಾಲ ಪ್ರತಿಭಟನೆ ನಡೆಸಿದರು. ಬಳಿಕ ಪೊಲೀಸರ ಮಧ್ಯೆ ಪ್ರವೇಶಿಸಿ ಪ್ರತಿಭಟನೆ ನಿಲ್ಲಿಸುವಂತೆ ಮನವಿ ಮಾಡಿ ಘಟನೆಯನ್ನು ತಿಳಿಗೊಳಿಸಿದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.



