ಕಳೆದ ಕೆಲ ದಿನಗಳಿಂದ ಭಾರೀವರ್ಷಧಾರೆಯಲ್ಲಿ ಮಿಂದೇಳುತ್ತಿರುವ ಹಿಮಾಚಲಪ್ರದೇಶದಲ್ಲಿ ನಾಯಿಯೊಂದರ ಬೊಗಳುವಿಕೆಯಿಂದ 20 ಕುಟುಂಬಗಳ 67 ಜನರ ಜೀವ ಉಳಿದ ಅಚ್ಚರಿಯ ಘಟನೆ ನಡೆದಿದೆ. ಇದು ಶ್ವಾನಗಳ ನಿಯತ್ತು ಮತ್ತು ಆಪತ್ತನ್ನು ಗ್ರಹಿಸುವ ಸಾಮರ್ಥ್ಯವನ್ನು ಸಾಬೀತುಪಡಿಸಿದೆ. ಮತ್ತೊಮ್ಮೆಸ್ಪೋಟ, ದಿಢೀರ್ ಪ್ರವಾಹ, ಭೂಕುಸಿತಗಳಿಂದ ಧರಮ್‌ಪುರದ ಸಿಯಾತಿ ದುಃಸ್ಥಿತಿಗೆ ತಲುಪಿತ್ತು. ಈ ವೇಳೆ ಇದ್ದಕ್ಕಿ ದ್ದಂತೆ ಕಟ್ಟಡವೊಂದರ 2ನೇ ಮಹಡಿಯಲ್ಲಿ ಮಲಗಿದ್ದ ನಾಯಿ ರಾಕಿ ಜೋರಾಗಿ ಬೊಗಳುತ್ತ ಊಳಿಡಲು ಶುರುವಿಟ್ಟುಕೊಂಡಿತ್ತು. ಇದರಿಂದ ಎಚ್ಚರಗೊಂಡ ನರೇಂದ್ರ ಎಂಬುವರು ಹೊರಬಂದು
ನೋಡಿದಾಗ, ಅವರಿದ್ದ ಮನೆಯ ಗೋಡೆಯಲ್ಲಿ ಬಿರುಕೊಂದು ಮೂಡಿದ್ದು, ನೀರು ನುಗ್ಗಲು ಶುರುವಾಗಿತ್ತು. ಕೂಡಲೇ ನರೇಂದ್ರ ಹಳ್ಳಿಯವರನ್ನೆಲ್ಲಾ ಎಚ್ಚರಿಸಿದ್ದಾರೆ. ತಕ್ಷಣ ಜನರೆಲ್ಲ ತಮ್ಮತಮ್ಮ ಮನೆಯಿಂದ ಹೊರಬಂದು ಸುರಕ್ಷಿತ ಸ್ಥಳದತ್ತ ಧಾವಿಸಿದ್ದಾರೆ.ಇದಾದ ಕೆಲವೇ ಗಂಟೆಗಳಲ್ಲಿ ಸಂಭವಿಸಿದ ಭೂಕುಸಿತಕ್ಕೆ ಇಡೀ ಹಳ್ಳಿಯೇ ಕೊಚ್ಚಿಕೊಂಡು ಹೋಗಿತ್ತು. ಇತ್ತ ಸಕಾಲಕ್ಕೆ ಮನೆಯಿಂದ ಹೊರಗೋಡಿಬಂದಿದ್ದ ಜನ ತ್ರಿಯಂಬಲ ಜಿಲ್ಲೆಯ ನೈನಾ ದೇವಿ ದೇಗುಲದಲ್ಲಿ ಆಶ್ರಯ ಪಡೆದು ಜೀವ ಉಳಿಸಿಕೊಂಡಿದ್ದಾರೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.



