ಹಾಸನ ಜಿಲ್ಲೆಯ ಬೇಲೂರು ಪಟ್ಟಣದಲ್ಲಿ ಮನೆ ಮನೆಗೆ ತೆರಳಿ ಜಾತಿ ಸಮೀಕ್ಷೆ ನಡೆಸುತ್ತಿದ್ದ ಶಿಕ್ಷಕಿ ಅವರ ಮೇಲೆ ಬೀದಿ ನಾಯಿಗಳು ದಾಳಿ ಮಾಡಿವೆ. ಈ ವೇಳೆ ಶಿಕ್ಷಕಿ ರಕ್ಷಣೆಗೆ ಧಾವಿಸಿದ ಸ್ಥಳೀಯರ ಮೇಲೂ ನಾಯಿಗಳು ದಾಳಿಗೆ ಮುಂದಾಗಿದ್ದವು. ಬೀದಿ ನಾಯಿಗಳ ದಾಳಿಗೆ ಚಿಕ್ಕಮ್ಮ ಗಾಯಗೊಂಡಿದ್ದು, ಚಿಕಿತ್ಸೆಗಾಗಿ ಹಾಸನ ವೈದ್ಯಕೀಯ ವಿಜ್ಞಾನ ಸಂಸ್ಥೆಗೆ ದಾಖಲಿಸಲಾಗಿದೆ. ಗಾಯಾಳು ಶಿಕ್ಷಕಿಯನ್ನು ಜಿಲ್ಲಾಧಿಕಾರಿ ಲತಾಕುಮಾರಿ ಭೇಟಿ ಮಾಡಿ ಆರೋಗ್ಯ ವಿಚಾರಿಸಿದ್ದಾರೆ. ಇದೇ ವೇಳೆ ಹಿಮ್ಸ್ ನಿರ್ದೇಶಕ ಹಾಗೂ ಜಿಲ್ಲಾ ಶಸ್ತ್ರಚಿಕಿತ್ಸಕರಿಗೆ ಗಾಯಾಳು ಶಿಕ್ಷಕರಿಗೆ ಸೂಕ್ತ ಚಿಕಿತ್ಸೆ ಹಾಗೂ ಸರಿಯಾದ ಊಟದ ವ್ಯವಸ್ಥೆ ಕಲ್ಪಿಸುವಂತೆ ಸೂಚಿಸಿದ್ದಾರೆ. ಬೇಲೂರು ಪಟ್ಟಣದಲ್ಲಿ ಬೀದಿ ನಾಯಿಗಳ ಹಾವಳಿಗೆ ಕಡಿವಾಣ ಹಾಕದ ಪುರಸಭೆ ಮುಖ್ಯಾಧಿಕಾರಿಯನ್ನು ತರಾಟೆಗೆ ತೆಗೆದುಕೊಂಡು, ವರದಿ ಸಲ್ಲಿಸಲು ಸೂಚಿಸಿದ್ದಾರೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.







