ಹಾಸನ: ಜಿಲ್ಲೆಯಲ್ಲಿ ಹೃದಯಾಘಾತದ ಸರಣಿ ಸಾವಿಗೆ ಅತಿಯಾದ ರೆಡ್ ಮೀಟ್ (ಕುರಿ, ಆಡು, ಹಂದಿ ಮಾಂಸ) ಸೇವನೆ ಕಾರಣ ಎನ್ನುವ ಮಾತು ಕೇಳಿ ಬರುತ್ತಿದೆ. ಜೀವನ ಶೈಲಿ ಬದಲಾಗಬೇಕು. ಜಿಲ್ಲೆಯಲ್ಲಿ ಬಾರ್‌ಗಳ ಸಂಖ್ಯೆ ಹೆಚ್ಚಾಗಿದೆ. ಇದರಿಂದ ಮದ್ಯ ಸೇವನೆ ಕೂಡ ಹೆಚ್ಚಾಗಿದೆ. ಇದೆಲ್ಲವೂ ಹೃದಯಾಘಾತ ಹೆಚ್ಚಾಗಲು ಕಾರಣವಾಗಿದೆ ಎಂದು ಶಾಸಕ ಎಚ್.ಡಿ.ರೇವಣ್ಣ ಹೇಳಿದ್ದಾರೆ. ಸರಣಿ ಸಾವಿನ ಬಗ್ಗೆ ನಗರದ ಮೆಡಿಕಲ್ ಕಾಲೇಜು ಸಭಾಂಗಣದಲ್ಲಿ ಆರೋಗ್ಯ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ನಂತರ ಮಾಧ್ಯಮದೊಂದಿಗೆ ಮಾತನಾಡಿ, ಸರ್ಕಾರಕ್ಕೆ ಹೆಚ್ಚು ಆದಾಯ ಬರುತ್ತದೆ ಎಂದು ಜಿಲ್ಲೆಯಲ್ಲಿ ಮದ್ಯ ದಂಗಡಿ ಹೆಚ್ಚಾಗಿ ತೆರೆಯಲು ಅನುಮತಿ ನೀಡಲಾಗಿದೆ. ಸುಲಭವಾಗಿ ಮದ್ಯ ಸಿಗುತ್ತಿದ್ದು, ಕುಡಿಯುವವರ ಸಂಖ್ಯೆ ಹೆಚ್ಚಳಕ್ಕೆ ಕಾರಣವಾಗಿದೆ ಎಂದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.



